ಉಡುಪಿ ಜಿಲ್ಲೆಯ 14 ಮಂದಿಯಲ್ಲಿ ಕೋವಿಡ್ ಪಾಸಿಟಿವ್
ಉಡುಪಿ, ಡಿ. 28: ಜಿಲ್ಲೆಯಲ್ಲಿ ಸೋಮವಾರ ಒಟ್ಟು 14 ಮಂದಿಯ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದಾರೆ. ಒಟ್ಟು ಎಂಟು ಮಂದಿ ಚಿಕಿತ್ಸೆಯ ಬಳಿಕ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೆ, ಸದ್ಯ ಕೋವಿಡ್ಗೆ ಸಕ್ರಿಯರಾಗಿರುವವರು 66 ಮಂದಿ ಮಾತ್ರ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ ತಲಾ ಏಳು ಮಂದಿ ಪುರುಷರು ಮತ್ತು ಮಹಿಳೆಯರಿದ್ದಾರೆ. ಇಬ್ಬರು ಪುರುಷರು ಹಾಗೂ ಐವರು ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣ ಕಂಡುಬಂದಿಲ್ಲ. ಒಟ್ಟು 11 ಮಂದಿ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆಯಲ್ಲಿದ್ದರೆ, ಮೂವರು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ ಎಂದು ಡಾ.ಸೂಡ ತಿಳಿಸಿದರು.
ಎಂಟು ಮಂದಿ ಗುಣಮುಖ: ರವಿವಾರ ಜಿಲ್ಲೆಯಲ್ಲಿ ಎಂಟು ಮಂದಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮುಕ್ತರಾದವರ ಒಟ್ಟು ಸಂಖ್ಯೆ ಈಗ 22,767ಕ್ಕೇರಿದೆ. ಸದ್ಯ 66 ಮಂದಿ ಕೆವಿಡ್ಗೆ ಸಕ್ರಿಯರಿದ್ದಾರೆ ಎಂದರು.
1096 ನೆಗೆಟಿವ್: ರವಿವಾರ ಒಟ್ಟು 1111 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1096 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. ಒಟ್ಟು 15 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,021 ಆಗಿದೆ ಎಂದವರು ತಿಳಿಸಿದರು.
ಜಿಲ್ಲೆಯಲ್ಲಿ ರವಿವಾರದವರೆಗೆ ಒಟ್ಟು 2,81,639 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,58,618 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 23,021 ಮಂದಿ ಪಾಸಿಟಿವ್ ಬಂದಿದ್ದರೆ, 22,767 ಮಂದಿ ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಇಂದು ಕೋವಿಡ್ ನಿಂದ ಯಾರೂ ಮೃತಪಟ್ಟಿಲ್ಲ. ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 188 ಮಾತ್ರ ಎಂದು ಇಲಾಖೆ ತಿಳಿಸಿದೆ.