ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಎಸ್.ಎಲ್.ಧರ್ಮೇಗೌಡರ ಮರಣೋತ್ತರ ಪರೀಕ್ಷೆ

ಶಿವಮೊಗ್ಗ, ಡಿ.29: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ಇಂದು ಮುಂಜಾನೆ ರೈಲು ಹಳಿ ಮಧ್ಯೆ ಪತ್ತೆಯಾದ ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರ ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ತರಲಾಗಿದೆ.
ಆ್ಯಂಬುಲೆನ್ಸ್ ಮೂಲಕ ಧರ್ಮೇಗೌಡ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ತರಲಾಗಿದ್ದು, ಈ ವೇಳೆ ಅವರ ಕುಟುಂಬದವರು ಉಪಸ್ಥಿತರಿದ್ದರು.
ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ಇದಕ್ಕಾಗಿ ಪೂರ್ಣ ಸಿದ್ಧತೆ ಮಾಡಕೊಳ್ಳಲಾಗಿದೆ.
ಶಿವಮೊಗ್ಗ ಜಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸೇರಿದಂತೆ ಹಿರಿಯ ಅಧಿಕಾರಿಗಳು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
Next Story





