ಮುತ್ತಯ್ಯ ಮುರಳೀಧರನ್ ದಾಖಲೆ ಮುರಿದ ಅಶ್ವಿನ್

ಮೆಲ್ಬೋರ್ನ್: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ(ಎಂಸಿಜಿ)ನಡೆದ ಎರಡನೇ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯದ ಜೋಶ್ ಹೇಝಲ್‌ವುಡ್‌ರನ್ನು ಕ್ಲೀನ್‌ಬೌಲ್ಡ್ ಮಾಡಿದ ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಟ ಎಡಗೈ ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದ ಸಾಧನೆ ಮಾಡಿದರು. ಅಶ್ವಿನ್ ಇದೀಗ 192 ಎಡಗೈ ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್‌ಗೆ ಕಳುಹಿಸಿದ್ದು, ಶ್ರೀಲಂಕಾದ ಮುತ್ತಯ್ಯ ಮುರಳೀಧರನ್(191)ದಾಖಲೆಯನ್ನು ಮುರಿದು ಹೊಸ ಮೈಲುಗಲ್ಲನ್ನ್ನು ತಲುಪಿದರು.
ಅಶ್ವಿನ್ 73 ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 375 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಮೆಲ್ಬೋರ್ನ್ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಮೂರು ಹಾಗೂ ಎರಡನೇ ಇನಿಂಗ್ಸ್ ನಲ್ಲಿ 2 ವಿಕೆಟ್‌ಗಳನ್ನು ಕಬಳಿಸಿದ್ದರು.
ಟೆಸ್ಟ್ ಕ್ರಿಕೆಟ್‌ನಲ್ಲಿ ಹೆಚ್ಚು ಎಡಗೈ ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿರುವ ಇತರ ಬೌಲರ್‌ಗಳೆಂದರೆ: ಜೇಮ್ಸ್ ಆ್ಯಂಡರ್ಸನ್(186), ಗ್ಲೆನ್ ಮೆಕ್ರಾತ್(172), ಶೇನ್ ವಾರ್ನ್(172) ಹಾಗೂ ಅನಿಲ್ ಕುಂಬ್ಳೆ(167)ಅವರಿದ್ದಾರೆ.
ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಪಡೆದಿರುವ ಭಾರತದ ಮೂರನೇ ಸ್ಪಿನ್ನರ್ ಆಗಿದ್ದಾರೆ. ಅನಿಲ್ ಕುಂಬ್ಳೆ(619) ಹಾಗೂ ಹರ್ಭಜನ್ ಸಿಂಗ್(417)ಮೊದಲೆರಡು ಸ್ಥಾನಗಳಲ್ಲಿದ್ದಾರೆ.







