ಉಡುಪಿ: ಕಾರು ಢಿಕ್ಕಿ: ಸ್ಕೂಟರ್ ಸವಾರ ಗಂಭೀರ
ಉಡುಪಿ, ಡಿ.29: ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ತೀವ್ರವಾಗಿ ಗಾಯಗೊಂಡ ಘಟನೆ ಡಿ.29ರಂದು ಮಧ್ಯಾಹ್ನ ವೇಳೆ ನಡೆದಿದೆ.
ಗಾಯಗೊಂಡವರನ್ನು ಕುಂಜಿಬೆಟ್ಟು ನಿವಾಸಿ ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ಕಲ್ಸಂಕ ಕಡೆಯಿಂದ ಮಣಿಪಾಲ ಕಡೆಗೆ ಹೋಗುತ್ತಿದ್ದ ಕಾರು ಎದುರಿನಲ್ಲಿ ಹೋಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ವೆಂಕಟೇಶ್ ತೀವ್ರವಾಗಿ ಗಾಯಗೊಂಡರು. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





