Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶೈಕ್ಷಣಿಕ, ಗೃಹ ಸಾಲ ಯೋಜನೆಗಳಿಗೆ ಆದ್ಯತೆ...

ಶೈಕ್ಷಣಿಕ, ಗೃಹ ಸಾಲ ಯೋಜನೆಗಳಿಗೆ ಆದ್ಯತೆ ನೀಡಿ: ದ.ಕ.ಜಿಪಂ ಸಿಇಒ

ದ.ಕ.ಜಿಲ್ಲಾ ಬ್ಯಾಂಕುಗಳ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ29 Dec 2020 8:59 PM IST
share
ಶೈಕ್ಷಣಿಕ, ಗೃಹ ಸಾಲ ಯೋಜನೆಗಳಿಗೆ ಆದ್ಯತೆ ನೀಡಿ: ದ.ಕ.ಜಿಪಂ ಸಿಇಒ

ಮಂಗಳೂರು, ಡಿ.29: ಜಿಲ್ಲೆಯ ಬ್ಯಾಂಕುಗಳು ಶೈಕ್ಷಣಿಕ ಮತ್ತು ಗೃಹ ಸಾಲ ಯೋಜನೆಗಳಿಗೆ ಸಂಬಂಧಿಸಿದಂತೆ ಹೆಚ್ಚು ಆದ್ಯತೆ ನೀಡಿ ಇನ್ನಷ್ಟು ಪ್ರಗತಿ ಸಾಧಿಸಬೇಕು ಎಂದು ದ.ಕ.ಜಿ.ಪಂ. ಸಿಇಒ ಡಾ. ಸೆಲ್ವಮಣಿ ಆರ್ ಹೇಳಿದರು.

ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ನಡೆದ ದ.ಕ.ಜಿಲ್ಲಾ ಬ್ಯಾಂಕುಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸರಕಾರ ಜನರ ಕಲ್ಯಾಣಕ್ಕಾಗಿ ರೂಪಿಸುವ ಪ್ರತಿಯೊಂದು ಯೋಜನೆಗಳು ಹಾಗೂ ಕಾರ್ಯಕ್ರಮಗಳಡಿ ಆರ್ಥಿಕ ನೆರವು ಕೋರಿದ ಅರ್ಜಿಗಳನ್ನು ಅರ್ಹ ಫಲಾನುಭವಿಗಳಿಂದ ಪಡೆದು ವಿಳಂಬ ಮಾಡದೆ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಬ್ಯಾಂಕ್ ಮ್ಯಾನೇಜರ್‌ಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾವಾರು ಸಾಲ ಠೇವಣಿ ಅನುಪಾತವು ಆರ್‌ಬಿಐಯ ನಿಗದಿತ ಮಾನದಂಡಕ್ಕಿಂತ ಸ್ವಲ್ಪಕಡಿಮೆ ಇರುವುದರಿಂದ ಬ್ಯಾಂಕುಗಳು ಹೆಚ್ಚಿನ ಸಾಲ ನೀಡುವ ಮೂಲಕ ನಿರ್ದಿಷ್ಟ ಗುರಿ ಸಾಧಿಸಬೇಕು ಎಂದ ಅವರು, ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಸೃಜನಶೀಲ ಯೋಜನೆಯಡಿ (ಪಿಎಮ್ಇಜಿಪಿ) ಜಿಲ್ಲೆಯ ಸಾಧನೆ ಉತ್ತಮವಾಗಿದೆ ಎಂದರು.

ಬ್ಯಾಂಕ್ ನೀಡುವ ವಿವಿಧ ಸಾಲ ಸೌಲಭ್ಯವನ್ನು ಸೂಕ್ತ ಮಾಹಿತಿಯೊಂದಿಗೆ ಪ್ರಚಾರ ಪಡಿಸಿ ಗ್ರಾಹಕರು ಹೆಚ್ಚಿನ ಸಾಲ ಸೌಲಭ್ಯವನ್ನು ಪಡೆಯು ವಂತೆ ಪ್ರೇರೇಪಿಸಬೇಕು. ಬ್ಯಾಂಕ್‌ನ ಸಿಬ್ಬಂದಿ ವರ್ಗವು ಗ್ರಾಹಕರೊಂದಿಗೆ ವ್ಯವಹರಿಸುವಾಗ ತಾಳ್ಮೆ, ಸಹನೆಯಿಂದ ಸಹಕರಿಸಬೇಕು ಎಂದರು.

ಮುದ್ರಾ ಯೋಜನೆಯಡಿ 7,154 ಖಾತೆಗಳಿಗೆ 76.11 ಕೋ.ರೂ.ನಷ್ಟು ಸಾಲವು ಪ್ರಸ್ತುತ ಮೊದಲರ್ಧ ವರ್ಷದಲ್ಲಿ ವಿತರಿಸಲ್ಪಟ್ಟಿದೆ. ಅಟಲ್ ಪಿಂಚಣಿ ಯೋಜನೆಯಡಿ 2020ರ ಸೆಪ್ಟೆಂಬರ್ ಅಂತ್ಯದವರೆಗೆ ಜಿಲ್ಲೆಯ ಬ್ಯಾಂಕ್‌ಗಳಲ್ಲಿ 80,776 ಖಾತೆಗಳು ತೆರೆಯಲ್ಪಟ್ಟಿವೆ ಎಂದರು.

ಖಾತರಿಪಡಿಸಿದ ತುರ್ತು ಕ್ರೆಡಿಟ್ ಲೈನ್ ಯೋಜನೆಡಿ ಜಿಲ್ಲೆಯ ಬ್ಯಾಂಕ್‌ಗಳು ಸೂಕ್ಷ್ಮ, ಅತೀ ಸಣ್ಣ ಮತ್ತು ಮಧ್ಯಮ ಉದ್ದಿಮೆ ವಲಯಕ್ಕೆ ಒಟ್ಟು 12932 ಖಾತೆಗಳಡಿ 493.81 ಕೋ.ರೂ.ಮಂಜೂರಾತಿ ನೀಡಲಾಗಿದೆ. ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಡಿ.15ರವರೆಗೆ 3,486 ಮಂಜೂರಾತಿ ಮಾಡಲಾಗಿದೆ ಎಂದರು.

ಜಿಲ್ಲೆಯ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್ ಎಂಪಿ ಮಾತನಾಡಿ ಸೆಪ್ಟೆಂಬರ್ ಅಂತ್ಯಕ್ಕೆ ಜಿಲ್ಲೆಯಲ್ಲಿ 640 ಬ್ಯಾಂಕ್ ಶಾಖೆಗಳಿದ್ದು, ಬ್ಯಾಂಕು ಗಳ ಒಟ್ಟು ವ್ಯವಹಾರ 80,592.66 ಕೋ.ರೂ.ಆಗಿದೆ. ವರ್ಷದಿಂದ ವರ್ಷಕ್ಕೆ ಬ್ಯಾಂಕ್‌ಗಳು ಶೇ. 9.39ರಷ್ಟು ಬೆಳವಣಿಗೆಯನ್ನು ಸಾಧಿಸಿವೆ. ಜಿಲ್ಲೆಯಲ್ಲಿ 7608.88 ಕೋ.ರೂ. ಸಾಲ ವಿತರಿಸಲಾಗಿದ್ದು ಮೊದಲರ್ದ ವರ್ಷದ ಗುರಿಯಾದ 9312.16 ಕೋ.ರೂ. ಶೇ.81.71 ನಿರ್ವಹಣೆ ಯನ್ನು ಸಾಧಿಸಲಾಗಿದೆ ಎಂದರು.

ಕೃಷಿ ಕ್ಷೇತ್ರಕ್ಕೆ 2625.40 ಕೋ.ರೂ., ಅತೀ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಯಡಿ 1628.81 ಕೋ.ರೂ., ವಿದ್ಯಾಭ್ಯಾಸ ಕ್ಷೇತ್ರಕ್ಕೆ 23.69 ಕೋ.ರೂ., ವಸತಿ ಕ್ಷೇತ್ರಕ್ಕೆ 231.12 ಕೋ.ರೂ. ಆದ್ಯತಾ ಕ್ಷೇತ್ರಕ್ಕೆ 4834.61 ಕೋ.ರೂ. ಸಾಲ ಈವರೆಗೆ ವಿತರಣೆಯಾಗಿದೆ ಎಂದರು.

ಆರ್‌ಬಿಐ ಸಹಾಯಕ ಮಹಾಪ್ರಬಂಧಕ ಜಿ. ವೆಂಕಟೇಶ್ ವೀಡಿಯೋ ಕಾನ್ಫರೆನ್ಸ್ ಮೂಲಕ ಇತ್ತೀಚಿಗೆ ಬದಲಾದ ಆರ್.ಬಿ.ಐ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದರು.

ಕೆನರಾ ಬ್ಯಾಂಕ್‌ನ ಮಹಾಪ್ರಬಂಧಕ ಬಾಲಮುಕುಂದ ಶರ್ಮಾ, ಉಜಿರೆ ರುಡ್‌ಸೆಟ್ ನಿರ್ದೆಶಕ ಪಡದಯ್ಯಾ, ವಿವಿಧ ಬ್ಯಾಂಕುಗಳ ಮ್ಯಾನೇಜರ್, ಪ್ರಾದೇಶಿಕ ಮ್ಯಾನೇಜರ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ಧರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X