ಪುತ್ತೂರು ಸರಕಾರಿ ಕಾಲೇಜಿನ ನಿವೃತ್ತ ಉಪನ್ಯಾಸಕ ಬಿ.ಫಲೂಲ್ ನಿಧನ

ಬಂಟ್ವಾಳ, ಡಿ. 29: ಪುತ್ತೂರು ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕ, ಕಬಕ ಗ್ರಾಮದ ವಿದ್ಯಾಪುರ ನಿವಾಸಿ ಹಾಜಿ ಬಿ.ಫಲೂಲ್ (79) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ರಾತ್ರಿ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ತನ್ನ ಉಪನ್ಯಾಸಕ ವೃತ್ತಿಯೊಂದಿಗೆ ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದ ಬಿ.ಫಲೂಲ್ ಅವರು ಪುತ್ತೂರು ಸೀರತ್ ಕಮಿಟಿಯ ಮಾಜಿ ಕಾರ್ಯದರ್ಶಿಯಾಗಿ, ಪುತ್ತೂರು ಸಾಲ್ಮರ ಅನ್ಸಾರುದ್ದೀನ್ ಯತೀಂ ಖಾನ ಇದರ ಮಾಜಿ ಕಾರ್ಯದರ್ಶಿಯಾಗಿ, ಅನ್ಸಾರುದ್ದೀನ್ ಎಜುಕೇಶನಲ್ ಟ್ರಸ್ಟ್ ಇದರ ಟ್ರಸ್ಟಿಯಾಗಿ ಸೇವೆ ಸಲ್ಲಿಸಿದ್ದಾರೆ. ಅನ್ಸಾರುದ್ದೀನ್ ಯತೀಂ ಖಾನಗೆ ಸರಕಾರದಿಂದ ಅನುದಾನ ದೊರಕಿಸಿ ಕೊಡಲು ಅವರು ಅಪಾರ ಶ್ರಮಿಸಿದ್ದಾರೆ.
ಮೃತರು ತುಂಬೆ ಪದವಿ ಪೂರ್ವ ಕಾಲೇಜಿನ ಅಧೀಕ್ಷಕ ಬಿ.ಅಬ್ದುಲ್ ಕಬೀರ್ ಸಹಿತ ನಾಲ್ವರು ಪುತ್ರರು ಮತ್ತು ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಕಬಕ ಜುಮಾ ಮಸೀದಿಯ ದಫನ ಭೂಮಿಯಲ್ಲಿ ಡಿ.30ರಂದು ಲುಹರ್ ನಮಾಝ್ ಗೆ ಮೊದಲು ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.





