ಕರ್ತವ್ಯ ನಿರತ ಚುನಾವಣಾಧಿಕಾರಿ ಹೃದಯಾಘಾತದಿಂದ ನಿಧನ

ಮೈಸೂರು, ಡಿ.30: ಗ್ರಾ.ಪಂ ಚುನಾವಣೆಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಕಾರ್ಯಪಾಲಕ ಅಭಿಯಂತರ ಬೋರೇಗೌಡ (52) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪಿರಿಯಾಪಟ್ಟಣದ ಪುಷ್ಪ ಕಾನ್ವೆಂಟ್ ನಲ್ಲಿ ಬುಧವಾರ ಮತ ಎಣಿಕೆ ನಡೆಯತ್ತಿದ್ದು, ಎಣಿಕಾ ಕೇಂದ್ರದಲ್ಲೇ ಬೋರೇಗೌಡ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಲೋಕೋಪಯೋಗಿ ಇಲಾಖೆ ಎಇಇ ಆಗಿದ್ದ ಬೋರೇಗೌಡ ಎನ್.ಶೆಟ್ಟಹಳ್ಳಿ ಗ್ರಾ.ಪಂ. ಚುನಾವಣಾಧಿಕಾರಿಯಾಗಿ ನೇಮಕವಾಗಿದ್ದರು.
Next Story





