ಗ್ರಾಪಂ ಚುನಾವಣೆ: ಮಾಣಿ ಗ್ರಾಪಂ ಕಾಂಗ್ರೆಸ್ ಬೆಂಬಲಿತರ ತೆಕ್ಕೆಗೆ

ಬಂಟ್ವಾಳ, ಡಿ.30: ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು ಮಾಣಿ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ 8 ಹಾಗೂ 2 ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಇದರಿಂದ ಮಾಣಿ ಗ್ರಾಮ ಪಂಚಾಯತ್ ಆಡಳಿತ ಕಾಂಗ್ರೆಸ್ ಬೆಂಬಲಿತರ ಪಾಲಾಗಿದೆ.
ಕಳೆದ ಬಾರಿಯ ಚುನಾವಣೆಯಲ್ಲಿ ಮಾಣಿಯಲ್ಲಿ ಕಾಂಗ್ರೆಸ್ ಬೆಂಬಲಿತ 5 ಬಿಜೆಪಿ ಬೆಂಬಲಿತ 5 ಅಭ್ಯರ್ಥಿಗಳು ಜಯ ಗಳಿಸಿದ್ದರು.
ಅಧ್ಯಕ್ಷ ಆಯ್ಕೆಯ ಸಂದರ್ಭದಲ್ಲಿ ಟಾಸ್ ಹಾಕುವುದರ ಮೂಲಕ ನಡೆದ ಅದೃಷ್ಟದ ಆಯ್ಕೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
Next Story





