Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೂಪಾಂತರಿತ ಕೊರೋನ ವೈರಸ್:ಪ್ರಯೋಗಾತ್ಮಕ...

ರೂಪಾಂತರಿತ ಕೊರೋನ ವೈರಸ್:ಪ್ರಯೋಗಾತ್ಮಕ ಚಿಕಿತ್ಸೆಗಳ ವಿವೇಚನಾರಹಿತ ಬಳಕೆಯ ವಿರುದ್ಧ ಐಸಿಎಂಆರ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ30 Dec 2020 9:02 PM IST
share
ರೂಪಾಂತರಿತ ಕೊರೋನ ವೈರಸ್:ಪ್ರಯೋಗಾತ್ಮಕ ಚಿಕಿತ್ಸೆಗಳ ವಿವೇಚನಾರಹಿತ ಬಳಕೆಯ ವಿರುದ್ಧ ಐಸಿಎಂಆರ್ ಎಚ್ಚರಿಕೆ

ಹೊಸದಿಲ್ಲಿ,ಡಿ.30: ಕೋವಿಡ್-19ನ್ನು ಗುಣಪಡಿಸಲು ಪ್ರಯೋಗಾತ್ಮಕ ಚಿಕಿತ್ಸೆಗಳ ವಿವೇಚನಾರಹಿತ ಬಳಕೆಯ ವಿರುದ್ಧ ಎಚ್ಚರಿಕೆಯನ್ನು ನೀಡಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್)ಯು,ಅದು ವೈರಸ್‌ನ ತ್ವರಿತ ರೂಪಾಂತರಕ್ಕೆ ಕಾರಣವಾಗಬಹುದು ಎಂದು ತಿಳಿಸಿದೆ.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಸಿಎಂಆರ್ ಮಹಾ ನಿರ್ದೇಶಕ ಬಲರಾಮ್ ಭಾರ್ಗವ ಅವರು,‘ಪ್ರತಿರಕ್ಷಣಾ ಒತ್ತಡದಿಂದ ವೈರಸ್‌ನಲ್ಲಿ ಮಾರ್ಪಾಡುಗಳಾಗಬಹುದು. ವೈರಸ್ ಮೇಲಿನ ಪ್ರತಿರಕ್ಷಣಾ ಒತ್ತಡವು ವಾತಾವರಣಕ್ಕೆ,ರೋಗಿಗೆ,ಚಿಕಿತ್ಸೆಗೆ ಅಥವಾ ಇತರ ವಿಧಿವಿಧಾನಗಳಿಗೆ ಸಂಬಂಧಿಸಿರಬಹುದು. ಆದ್ದರಿಂದ ನಾವು ವೈರಸ್‌ನ ಮೇಲೆ ಪ್ರತಿರಕ್ಷಣಾ ಒತ್ತಡವನ್ನುಂಟು ಮಾಡಬಾರದು ಎನ್ನುವುದು ವೈಜ್ಞಾನಿಕ ಸಮುದಾಯದ ಅಭಿಪ್ರಾಯದಲ್ಲಿಯೂ ಮುಖ್ಯವಾಗಿದೆ ’ಎಂದರು

ಪ್ರಯೋಗಾತ್ಮಕ ಚಿಕಿತ್ಸೆಗಳು ವೈರಸ್‌ನ ಮೇಲೆ ಭಾರೀ ಪ್ರತಿರಕ್ಷಣಾ ಒತ್ತಡವನ್ನುಂಟು ಮಾಡುತ್ತವೆ ಮತ್ತು ಇದು ವೈರಸ್ ಹೆಚ್ಚು ರೂಪಾಂತರಗೊಳ್ಳಲು ಕಾರಣವಾಗುತ್ತದೆ. ಹೀಗಾಗಿ ಯಶಸ್ವಿ ಎಂದು ಸಾಬೀತಾದ ಚಿಕಿತ್ಸಾ ಕ್ರಮಗಳನ್ನೇ ಕೋವಿಡ್-19 ಚಿಕಿತ್ಸೆಗೆ ಬಳಸಬೇಕು ಎಂದರು.

ಶೇ.70ರಷ್ಟು ಹೆಚ್ಚು ಸಾಂಕ್ರಾಮಿಕ ಎನ್ನಲಾಗಿರುವ ರೂಪಾಂತರಿತ ಕೊರೋನ ವೈರಸ್ ಬ್ರಿಟನ್‌ನಿಂದ ಆರಂಭಗೊಂಡು ಡಝನ್‌ಗೂ ಅಧಿಕ ದೇಶಗಳಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರ್ಗವರ ಈ ಹೇಳಿಕೆ ಹೊರಬಿದ್ದಿದೆ. ಭಾರತದಲ್ಲಿ ಈವರೆಗೆ 20 ಜನರಲ್ಲಿ ರೂಪಾಂತರಿತ ಸೋಂಕು ಪತ್ತೆಯಾಗಿದೆ.

‘ಕೋವಿಡ್-19ರಂತಹ ಶ್ವಾಸಕೋಶ ವೈರಸ್‌ಗಳಲ್ಲಿ ಆಗಾಗ್ಗೆ ಅಲ್ಪ ಮಾರ್ಪಾಡುಗಳು ಆಗಬಹುದು. ಇಂತಹ ಹಲವಾರು ಮಾರ್ಪಾಡುಗಳು ಸಂಭವಿಸಿದರೆ ಅವು ಮುಖ್ಯವಾಗುತ್ತವೆ ಮತ್ತು ಈಗ ಬ್ರಿಟನ್‌ನಲ್ಲಿ ಸಂಭವಿಸಿರುವಂತೆ ಹೆಚ್ಚು ಪ್ರಸರಣ ಶಕ್ತಿಯನ್ನು ಹೊಂದಿರುವ ರೂಪಾಂತರಿ ತಳಿಗಳಾಗುತ್ತವೆ. ನಾವು ಭಾರತದಲ್ಲಿ ವೈರಸ್ ಮಾರ್ಪಾಡುಗಳಿಗಾಗಿ ಪರೀಕ್ಷೆಗಳನ್ನು ನಡೆಸುತ್ತಿದ್ದೇವೆಯಾ ದರೂ ಈ ವಿಷಯವು ಕಳವಳಕಾರಿಯಾಗಿದೆ ’ಎಂದು ಭಾರ್ಗವ ಹೇಳಿದರು.

ರೂಪಾಂತರಿತ ಕೊರೋನ ವೈರಸ್ ಅನ್ನು ನಿಭಾಯಿಸಲು ಹೆಚ್ಚಿನ ಬದಲಾವಣೆಗಳ ಅಗತ್ಯವಿಲ್ಲ. ಪ್ರಚಲಿತ ಮುನ್ನೆಚ್ಚರಿಕೆ ಕ್ರಮಗಳೇ ರೂಪಾಂತರಿತ ಕೊರೋನ ವಿಷಯದಲ್ಲಿಯೂ ಕೆಲಸ ಮಾಡುತ್ತವೆ ಎಂದು ತಳಿವಿಜ್ಞಾನ ತಜ್ಞ ಹಾಗೂ ದಿಲ್ಲಿಯ ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರೀಸರ್ಚ್-ಇನ್‌ಸ್ಟಿಟ್ಯೂಟ್ ಆಫ್ ಜೆನೊಮಿಕ್ಸ್ ಆ್ಯಂಡ್ ಇಂಟಿಗ್ರೇಟಿವ್ ಬಯಾಲಜಿಯ ನಿರ್ದೇಶಕ ಡಾ.ಅನುರಾಗ್ ಅಗರವಾಲ್ ಹೇಳಿದರೆ,ರೂಪಾಂತರಿತ ಸೋಂಕಿಗಾಗಿ ಪರೀಕ್ಷೆ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಅಗತ್ಯವಿಲ್ಲ ಎಂದು ದಿಲ್ಲಿಯ ಮಣಿಪಾಲ ಆಸ್ಪತ್ರೆಯ ಕ್ಲಿನಿಕಲ್ ಮೈಕ್ರೋಬಯಾಲಜಿ ವಿಭಾಗದ ಮುಖ್ಯಸ್ಥ ಡಾ.ನವೀನ ಕುಮಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X