Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ್ವಿತೀಯ ಪಿಯುಸಿ ತರಗತಿ ಆರಂಭ; ಕೋವಿಡ್...

ದ್ವಿತೀಯ ಪಿಯುಸಿ ತರಗತಿ ಆರಂಭ; ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ದ.ಕ.ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ30 Dec 2020 9:10 PM IST
share

ಮಂಗಳೂರು, ಡಿ.30: ಸರಕಾರದ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಪಾಲಿಸುವುರೊಂದಿಗೆ ದ್ವಿತೀಯ ಪಿಯುಸಿ ತರಗತಿಗಳನ್ನು ಪ್ರಾರಂಭಿಸಬೇಕು. ತಪ್ಪಿದ್ದಲ್ಲಿ ಶಾಲೆಯ ಪ್ರಾಚಾರ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಸಿದ್ದಾರೆ.

ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ತರಗತಿ ಆರಂಭದ ಕುರಿತು ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು, ಬೋಧನಾ ಸಿಬ್ಬಂದಿಗಳು ಸುರಕ್ಷಿತವಾಗಿ ಕಾಲೇಜಿನ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಸರಕಾರ ಸೂಚಿಸಿರುವ ಸಾಮಾನ್ಯ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಡಿಸಿ ಹೇಳಿದರು.

ಪ್ರತಿದಿನ ವಿದ್ಯಾರ್ಥಿಗಳು ಶಾಲೆಗೆ ಬರುವಾಗ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು, ಮಾಸ್ಕ್ಗಳನ್ನು ಕಡ್ಡಾಯವಾಗಿ ಧರಿಸುವಂತೆ ನೋಡಿ ಕೊಳ್ಳುವ ಜೊತೆಗೆ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಕ್ರಮ ವಹಿಸಬೇಕು. ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸುವ ಮುನ್ನ ಶಾಲಾ ಕೊಠಡಿ, ಪ್ರಯೋಗ ಶಾಲೆ, ಶೌಚಾಲಯ ಸೇರಿದಂತೆ ಮತ್ತಿತರ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಿಸಬೇಕು ಎಂದರು.

ಶಾಲೆಗೆ ಹಾಜರಾಗುವ ವಿದ್ಯಾರ್ಥಿಗಳಿಂದ ಸ್ವಯಂ ಪ್ರೇರಣೆ ಹಾಗೂ ಪೋಷಕರಿಂದ ಸಮ್ಮತಿ ಪತ್ರವನ್ನು ಪಡೆಯಬೇಕು ಎಂದ ಡಿಸಿ ಕೊವೀಡ್-19 ಸೋಂಕಿನ ಲಕ್ಷಣ ಇಲ್ಲದ ಬಗ್ಗೆ ದೃಢೀಕರಣ ಪತ್ರವನ್ನು ಪೋಷಕರಿಂದ ಕಡ್ಡಾಯವಾಗಿ ಪಡೆಯಬೇಕು ಎಂದರು.

ಶಾಲಾ ಕಟ್ಟಡದಲ್ಲಿ ವಿದ್ಯಾರ್ಥಿಗಳು ಸುರಕ್ಷಿತ ಅಂತರ ಕಾಯ್ದುಕೊಳ್ಳುವ ರೀತಿಯಲ್ಲಿ ಮಕಳ್ಕ ಸಂಖ್ಯೆಗೆ ಅನುಗುಣವಾಗಿ ತಂಡಗಳನ್ನು ರಚಿಸಿ ತರಗತಿಗಳನ್ನು ನಿರ್ವಹಣೆ ಮಾಡಬೇಕು. ಪ್ರತಿದಿನ ವಿದ್ಯಾರ್ಥಿಗಳಿಗೆ 3 ಗಂಟೆ ಅವಧಿಯಲ್ಲಿ ಪ್ರತಿ 45 ನಿಮಿಷದ ಪಿರೇಡ್‌ಗಳನ್ನು ತೆಗೆದು ಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ಶಾಲೆಯ ಮೆಟ್ಟಿಲು ಹತ್ತುವಾಗ ಮತ್ತು ಇಳಿಯುವಾಗ ಹಾಗೂ ಶಾಲೆಯ ಕಾರಿಡಾರ್‌ಗಳಲ್ಲಿ ಗುಂಪು ಗೂಡದಂತೆ ನಿಯಂತ್ರಣ ಮಾಡುವುದರ ಜೊತೆಗೆ ಸುರಕ್ಷಿತ ಅಂತರ ಕಾಪಾಡಲು ಸೂಕ್ತ ನಿಯಂತ್ರಣ ಕ್ರಮಗಳನ್ನು ಬಳಸಬೇಕು. ವಿದ್ಯಾರ್ಥಿಗಳು ಕೈಗಳನ್ನು ಸ್ವಚ್ಛ ಗೊಳಿಸಲು ನೀರಿನ ವ್ಯವಸ್ಥೆ ಹಾಗೂ ಶಾಲೆಯ ಆವರಣದೊಳಗಡೆ ಹ್ಯಾಂಡ್ ಸ್ಯಾನಿಟೈಸರ್ ಬಳಸುವಂತೆ ಕ್ರಮ ವಹಿಸಬೇಕು ಎಂದರು.

ಅನಾರೋಗ್ಯಕ್ಕೆ ತುತ್ತಾದಲ್ಲಿ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿರಿಸಲು ಕೊಠಡಿ ಕಾಯ್ದಿರಿಸಬೇಕು ಹಾಗೂ ಅವರಿಗೆ ವೈದ್ಯಕೀಯ ನೆರವನ್ನು ಕೊಡಿಸಬೇಕು. ಹಾಸ್ಟೆಲ್ಗಳಲ್ಲಿ ತಂಗುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಬೇಕು. ಸುರಕ್ಷಿತ ಅಂತರ ಕಾಯ್ದು ಕೊಳ್ಳುವಂತೆ ಮೇಲ್ವಿಚಾರಕರು ಕ್ರಮ ವಹಿಸಬೇಕು ಎಂದ ಅವರು, ರೋಗದ ಲಕ್ಷಣ ಕಂಡು ಬಂದಲ್ಲಿ ಅವರನ್ನು ಪ್ರತ್ಯೇಕವಾಗಿ ಇರಿಸಿ ವೈದ್ಯಕೀಯ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು.

ಕೇರಳ ರಾಜ್ಯದಿಂದ ಬರುವಂತಹ ವಿದ್ಯಾರ್ಥಿಗಳು ಕೋವಿಡ್ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತರುವಂತೆ ಸೂಚನೆ ನೀಡಬೇಕು. ಟ್ಯುಟೋರಿಯಲ್ಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿಲ್ಲ ಎಂಬ ಬಗ್ಗೆ ದೂರುಗಳು ಬರುತ್ತಿದೆ. ಈ ಬಗ್ಗೆ ಆರೋಗ್ಯ ಇಲಾಖೆಯು ಸೂಕ್ರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ರಾಮಚಂದ್ರ ಬಾಯರಿ, ಕೋವಿಡ್ ನೋಡೆಲ್ ಅಧಿಕಾರಿ ಡಾ. ಅಶೋಕ್, ಪಿಯು ಶಿಕ್ಷಣ ಸಂಸ್ಥೆಯ ಉಪನಿರ್ದೇಶಕ ಮುಹಮ್ಮದ್ ಇಮ್ತಿಯಾಝ್ ಮತ್ತಿತರರು ಉಪಸ್ಥಿತರಿದ್ಧರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X