Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ...

​ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಿ: ಡಿಸಿ ಡಾ. ರಾಜೇಂದ್ರ

ವಾರ್ತಾಭಾರತಿವಾರ್ತಾಭಾರತಿ30 Dec 2020 9:23 PM IST
share
​ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಿ: ಡಿಸಿ ಡಾ. ರಾಜೇಂದ್ರ

ಮಂಗಳೂರು, ಡಿ.30: ನಗರಗಳಲ್ಲಿ ಮಳೆ ನೀರು ಕೊಯ್ಲು (ನೀರು ಇಂಗಿಸುವ) ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಅಂತರ್ಜಲವನ್ನು ಹೆಚ್ಚಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಅಧಿಕಾರಿಗಳಿಗೆ ಸೂಚಿಸಿದರು.

ದ.ಕ.ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಈಗಾಗಲೇ ಕಟ್ಟಡ, ಬಹಮಹಡಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆಯಿದ್ದು, ಇವುಗಳಲ್ಲಿ ಸಮರ್ಪಕವಾಗಿ ನೀರು ಇಂಗಿಸುವ ಪ್ರಕ್ರಿಯೆ ಆಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು. ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆಯನ್ನು ರೂಪಿಸುವವರಿಗೆ ಮಾತ್ರ ಕಟ್ಟಡ ಪರವಾನಿಗೆಯನ್ನು ನೀಡಬೇಕು ಎಂದರು.

ಮುಂದಿನ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಲಭ್ಯ ವಿರುವ ಪರ್ಯಾಯ ನೀರಿನ ಮೂಲಗಳನ್ನು ಸಂರಕ್ಷಿಸಿ, ಪುನರುಜ್ಜೀವನಗೊಳಿಸಬೇಕು ಎಂದ ಡಿಸಿ, ಪೈಪ್‌ಲೈನ್ ಅಳವಡಿಕೆ ಸಹಿತ ಇನ್ನಿತರ ಕಾಮಗಾರಿಗಳನ್ನು ಶೀಘ್ರದಲ್ಲಿ ಕೈಗೊಂಡು ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಜಲ ಸಂರಕ್ಷಣೆಯ ಕುರಿತು ಗ್ರಾಮ, ತಾಲೂಕು ಹಾಗೂ ನಗರಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿಬೇಕು. ಅನವಶ್ಯಕವಾಗಿ ನೀರನ್ನು ಪೋಲು ಮಾಡುವುದು, ಮಲಿನಗೊಳಿಸುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಪಾಲಿಕೆಯ ವ್ಯಾಪ್ತಿಯಲ್ಲಿರುವ ಬೋರ್‌ವೆಲ್ಗಳು, ಓವರ್ ಹೆಡ್ ಟ್ಯಾಂಕ್‌ಗಳಲ್ಲಿ ಶೇಖರಣೆ ಆಗುವ ನೀರಿನ ಪ್ರಮಾಣದ ಮಾಹಿತಿ ಪಡೆದ ಅವರು ಸಾರ್ವಜನಿಕರಿಗೆ ಹಾಗೂ ಉದ್ಯಮಿಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯತ್ರಿ ಎಸ್. ನಾಯಕ್, ಪಾಲಿಕೆಯ ಉಪ ಆಯುಕ್ತ ಡಾ. ಸಂತೋಷ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X