Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೃಷಿ ಕಾನೂನುಗಳನ್ನು ರದ್ದುಗೊಳಿಸಲು...

ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ:ಕೇಂದ್ರ

ರೈತರ ಬೇಡಿಕೆಗಳ ಪರಿಶೀಲನೆಗೆ ವಿಶೇಷ ಸಮಿತಿ ರಚನೆಯ ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ30 Dec 2020 9:34 PM IST
share
ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ:ಕೇಂದ್ರ

ಹೊಸದಿಲ್ಲಿ,ಡಿ.30: ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂದೆಗೆದುಕೊಳ್ಳದಿರುವ ತನ್ನ ನಿಲುವಿಗೆ ಗಟ್ಟಿಯಾಗಿ ಅಂಟಿಕೊಂಡಿರುವ ಕೇಂದ್ರವು ರೈತರ ಬೇಡಿಕೆಗಳನ್ನು ಪರಿಶೀಲಿಸಲು ವಿಶೇಷ ಸಮಿತಿಯೊಂದನ್ನು ರಚಿಸುವ ಕೊಡುಗೆಯನ್ನು ಪ್ರತಿಭಟನಾನಿರತ ರೈತ ಸಂಘಟನೆಗಳ ಮುಂದಿರಿಸಿದೆ ಎಂದು ಸರಕಾರದಲ್ಲಿನ ಮೂಲಗಳು ತಿಳಿಸಿವೆ.

ಬುಧವಾರ ಕೇಂದ್ರ ಮತ್ತು ರೈತ ಸಂಘಟನೆಗಳ ನಡುವೆ ನಡೆದ ಮಾತುಕತೆಗಳ ಸಂದರ್ಭ,ಕಾನೂನುಗಳನ್ನು ಹಿಂದೆಗೆದುಕೊಳ್ಳುವ ಪ್ರಕ್ರಿಯೆಯು ಅವುಗಳನ್ನು ರೂಪಿಸುವ ಪ್ರಕ್ರಿಯೆಯಷ್ಟೇ ದೀರ್ಘವಾಗಿದೆ ಎಂದೂ ಸರಕಾರವು ರೈತರಿಗೆ ವಿವರಿಸಿದೆ. ವಿದ್ಯುತ್ ತಿದ್ದುಪಡಿ ಮಸೂದೆ ಮತ್ತು ಕೃಷಿತ್ಯಾಜ್ಯಗಳ ದಹನಕ್ಕೆ ದಂಡದ ನಿಯಮಗಳಂತಹ ಇತರ ವಿಷಯಗಳಲ್ಲಿ ರಿಯಾಯಿತಿಗಳನ್ನು ನೀಡಲು ಅದು ಒಪ್ಪಿಕೊಂಡಿದೆ ಎಂದು ಈ ಮೂಲಗಳು ತಿಳಿಸಿದವು.

ಆಂತರಿಕ ಚರ್ಚೆಗಳ ಬಳಿಕ ಸರಕಾರದ ಪ್ರಸ್ತಾವಕ್ಕೆ ಪ್ರತಿಕ್ರಿಯಿಸುವುದಾಗಿ ಮಾತುಕತೆಗಳಲ್ಲಿ ಪಾಲ್ಗೊಂಡಿದ್ದ ರೈತ ನಾಯಕರು ತಿಳಿಸಿದರು.

ರೈತರು ನೂತನ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂಬ ತಮ್ಮ ನಿಲುವಿಗೆ ಅಂಟಿಕೊಂಡಿರುವುದರಿಂದ ಮಾತುಕತೆಗಳು ವಿಫಲಗೊಳ್ಳಲಿವೆ ಎಂದು ಈ ತಿಂಗಳ ಆರಂಭದಲ್ಲಿಯೇ ಕೇಂದ್ರಕ್ಕೆ ತಿಳಿಸಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ಸರ್ವೋಚ್ಚ ನ್ಯಾಯಾಲಯದ ಪೀಠವು,ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಸರಕಾರದಿಂದ ನಾಮನಿರ್ದೇಶಕರನ್ನೊಳಗೊಂಡ ವಿಶೇಷ ಸಮಿತಿಯೊಂದನ್ನು ರಚಿಸುವಂತೆ ಆದೇಶಿಸಿತ್ತು.

ಮೂರು ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಚರ್ಚಿಸಲು ಸಮಿತಿಯೊಂದನ್ನು ರಚಿಸಬಹುದಾಗಿದೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್,ಪಿಯೂಷ್ ಗೋಯಲ್ ಮತ್ತು ಸೋಮಪ್ರಕಾಶ ಅವರನ್ನು ಉಲ್ಲೇಖಿಸಿ ಸರಕಾರಿ ಮೂಲಗಳು ತಿಳಿಸಿದವು. ಸರಕಾರವು ರೈತರಿಗೆ ಕಾನೂನುಗಳ ಬಗ್ಗೆ ವಿವರವಾದ ಮಾಹಿತಿಗಳನ್ನು ಒದಗಿಸಿದೆ ಮತ್ತು ಕಾನೂನುಗಳನ್ನು ಮಾಡುವುದು ಹಾಗೂ ಅವುಗಳನ್ನು ಹಿಂದೆಗೆದುಕೊಳ್ಳುವುದು ಸುದೀರ್ಘ ಪ್ರಕ್ರಿಯೆಯಾಗಿದೆ ಎಂದು ಅವರಿಗೆ ತಿಳಿಸಿದೆ ಎಂದೂ ಮೂಲಗಳು ಹೇಳಿದವು.

ಸರಕಾರ ಈಗಲೂ ಕೃಷಿ ಕಾನೂನುಗಳನ್ನು ರದ್ದುಗೊಳಿಸದಿರುವ ತನ್ನ ಹಟಮಾರಿತನವನ್ನು ಪ್ರದರ್ಶಿಸುತ್ತಿದೆ ಎಂದು ರೈತ ಸಂಘಟನೆಗಳ ನಾಯಕರು ತಿಳಿಸಿದರು. ಕೃಷಿ ಉತ್ಪನ್ನಗಳಿಗಾಗಿ ಕಾನೂನುಬದ್ಧವಾಗಿ ಜಾರಿಗೊಳಿಸಿದ ಬೆಂಬಲ ಬೆಲೆಗಳಿಗೂ ಅದು ಸಿದ್ಧವಿಲ್ಲ ಮತ್ತು ಸಮಿತಿಯು ಅದನ್ನು ಪರಿಶೀಲಿಸಬಹುದಾಗಿದೆ ಎಂದು ಹೇಳಿದೆ ಎಂದರು. ಆದರೆ ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಮತ್ತು ವಾಯು ಗುಣಮಟ್ಟ ಆಯೋಗ ವಿಧೇಯಕದಲ್ಲಿನ ಕೃಷಿ ತ್ಯಾಜ್ಯಗಳ ದಹನಕ್ಕಾಗಿ ದಂಡನೆ ನಿಯಮಗಳನ್ನು ಹಿಂದೆಗೆದುಕೊಳ್ಳುವ ಪ್ರಸ್ತಾವವನ್ನು ಸರಕಾರವು ರೈತರ ಮುಂದಿರಿಸಿದೆ. ಇವು ಪ್ರತಿಭಟನಾನಿರತ ರೈತರ ಬೇಡಿಕೆಗಳಲ್ಲಿ ಸೇರಿವೆ.

ಮಧ್ಯಪ್ರದೇಶದಲ್ಲಿ ವ್ಯಾಪಾರಿಗಳು ಮಾಡುತ್ತಿರುವ ವಂಚನೆಗಳ ವಿಷಯವನ್ನು ಪ್ರಸ್ತಾಪಿಸುವ ಉದ್ದೇಶದೊಂದಿಗೆ ರೈತರು ಇಂದಿನ ಸಭೆಗೆ ತೆರಳಿದ್ದರು. ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ವ್ಯಾಪಾರಿಗಳು 22 ರೈತರಿಗೆ ನೀಡಿದ್ದ ಚೆಕ್‌ಗಳು ಬ್ಯಾಂಕ್‌ನಿಂದ ನಗದಾಗದೆ ವಾಪಸ್ ಬಂದಿವೆ ಎಂದು ರೈತರ ಪ್ರತಿನಿಧಿಯೋರ್ವರು ಉದಾಹರಣೆ ನೀಡಿದರು.

‘ಉತ್ತರ ಪ್ರದೇಶದಲ್ಲಿ ಕೃಷಿ ಕಾನೂನುಗಳು ಜಾರಿಗೊಂಡ ಬಳಿಕ ಕೃಷ್ಯುತ್ಪನ್ನಗಳ ಬೆಲೆಗಳು ಶೇ.50ರಷ್ಟು ಕುಸಿದಿವೆ. ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರಗಳಿಗೆ ಕೃಷಿ ಉತ್ಪನ್ನಗಳನ್ನು ಖರೀದಿಸಲಾಗುತ್ತಿದೆ. ಭತ್ತ ಕ್ವಿಂಟಲ್‌ಗೆ 800 ರೂ.ದರದಲ್ಲಿ ಮಾರಾಟವಾಗುತ್ತಿದೆ. ಈ ವಿಷಯಗಳನ್ನು ಸಭೆಯಲ್ಲಿ ನಾವು ಎತ್ತಲಿದ್ದೇವೆ ’ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಮಾತುಕತೆಗಳಿಗೆ ಮುನ್ನ ಸುದ್ದಿಗಾರರಿಗೆ ತಿಳಿಸಿದ್ದರು.

‘ನಮ್ಮ ಬೇಡಿಕೆಗಳು ಈಡೇರುವವರೆಗೆ ನಾವು ದಿಲ್ಲಿಯನ್ನು ತೊರೆಯುವುದಿಲ್ಲ. ನಮ್ಮ ಹೊಸವರ್ಷವನ್ನು ರಾಜಧಾನಿಯ ಗಡಿಗಳಲ್ಲೇ ಆಚರಿಸುತ್ತೇವೆ ’ಎಂದು ಅವರು ಹೇಳಿದ್ದರು.

ಆರು ತಿಂಗಳು ಅಥವಾ ಅದಕ್ಕೂ ಹೆಚ್ಚಿನ ಅವಧಿಗೆ ಮೊಕ್ಕಾಂ ಹೂಡಲು ಸಕಲ ಸಿದ್ಧತೆಗಳೊಂದಿಗೆ ತಾವು ಇಲ್ಲಿಗೆ ಬಂದಿದ್ದೇವೆ ಎಂದು ರೈತರು ತಿಳಿಸಿದ್ದಾರೆ.

ಇದೊಂದು ನಿರ್ಣಾಯಕ ಸಭೆಯಾಗಲಿದೆ ಎಂದು ಮಾತುಕತೆಗಳ ಮುನ್ನ ಆಶಯ ವ್ಯಕ್ತಪಡಿಸಿದ್ದ ಸೋಮಪ್ರಕಾಶ, ರೈತರು ತಮ್ಮ ಮನೆಗಳಲ್ಲಿ ಹೊಸ ವರ್ಷವನ್ನು ಆಚರಿಸಬೇಕು ಎಂದು ಸರಕಾರವು ಬಯಸಿದೆ ಎಂದು ಹೇಳಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X