ಸಾಲುಮರದ ತಿಮ್ಮಕ್ಕ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು, ಡಿ.30: ಅನಾರೋಗ್ಯ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರು ಬುಧವಾರ ಡಿಸ್ಚಾರ್ಜ್ ಆಗಿದ್ದಾರೆ.
ಮನೆಯಲ್ಲಿ ಇರುವಾಗಲೇ ಡಿ.6ರಂದು ದಿಢೀರ್ ಕುಸಿದು ಬಿದ್ದ ಪರಿಣಾಮ ಸೊಂಟದ ಮೂಳೆ ಕೊಂಚ ಮುರಿದಿತ್ತು. ಹೀಗಾಗಿ ಹತ್ತಿರದ ಹಾಸನದ ಮಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ನೋವು ಹೆಚ್ಚು ಕಾಣಿಸಿಕೊಂಡ ಕಾರಣ ಹೆಚ್ಚಿನ ಚಿಕಿತ್ಸೆಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.
ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ವೈದ್ಯರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದಾರೆ ಎಂದು ಸಾಲುಮರದ ತಿಮ್ಮಕ್ಕ ಪುತ್ರ ಉಮೇಶ್ ಮಾಹಿತಿ ನೀಡಿದರು.
Next Story





