Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯಾದ್ಯಂತ ಗ್ರಾಮ ಪಂಚಾಯತ್ ನೂತನ...

ರಾಜ್ಯಾದ್ಯಂತ ಗ್ರಾಮ ಪಂಚಾಯತ್ ನೂತನ ಸದಸ್ಯರಿಗೆ ತರಬೇತಿ ಕಾರ್ಯಕ್ರಮಕ್ಕೆ ಸಿದ್ಧತೆ : ಸಚಿವ ಕೆ.ಎಸ್. ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ31 Dec 2020 12:34 PM IST
share
ರಾಜ್ಯಾದ್ಯಂತ ಗ್ರಾಮ ಪಂಚಾಯತ್ ನೂತನ ಸದಸ್ಯರಿಗೆ ತರಬೇತಿ ಕಾರ್ಯಕ್ರಮಕ್ಕೆ ಸಿದ್ಧತೆ : ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ, ಡಿ. 31:  ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ರಾಜ್ಯದ ಎಲ್ಲಾ ಸದಸ್ಯರಿಗೆ ಅಬ್ದುಲ್ ನಝೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ವತಿಯಿಂದ ತರಬೇತಿಯನ್ನು ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಗುರುವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಜನವರಿ 19ರಿಂದ ಮಾರ್ಚ್ 26ರ ವರೆಗೆ ತಾಲೂಕು ಹಂತದಲ್ಲಿ ಹತ್ತು ತಂಡಗಳಲ್ಲಿ ತರಬೇತಿ ನೀಡಲಾಗುವುದು. ರಾಜ್ಯದ 176 ತಾಲೂಕುಗಳ 285 ಕೇಂದ್ರಗಳಲ್ಲಿ ತರಬೇತಿ ನಡೆಯಲಿದೆ. ಕೆಲವು ತಾಲೂಕುಗಳಲ್ಲಿ 2 ಕೇಂದ್ರಗಳನ್ನು ತರಬೇತಿಗೆ ಗುರುತಿಸಲಾಗಿದೆ. ತರಬೇತಿಗೆ 900 ಸಂಪನ್ಮೂಲ ವ್ಯಕ್ತಿಗಳನ್ನು ಈಗಾಗಲೇ ನಿಯೋಜಿಸಲಾಗಿದ್ದು, ಪ್ರತಿ ತಂಡಕ್ಕೆ 5 ದಿನಗಳ ಮುಖಾಮುಖಿ ತರಬೇತಿ ನೀಡಲಾಗುವುದು. ಪ್ರತಿ ತಂಡದಲ್ಲಿ 40 ಸದಸ್ಯರಿಗೆ ತರಬೇತಿ ನೀಡಲಾಗುವುದು ಎಂದರು.

ಪ್ರತಿ ದಿನದ ತರಬೇತಿ ಕಾರ್ಯಕ್ರಮ ಬೆಳಗ್ಗೆ 10.30ರಿಂದ ಸಂಜೆ 4ರವರೆಗೆ ನಡೆಯಲಿದೆ. ತರಬೇತಿ ಅವಧಿಯಲ್ಲಿ 15 ವಿವಿಧ ವಿಷಯಾಧಾರಿತ ಅಧಿವೇಶನಗಳು ಮತ್ತು ಕೌಶಲ್ಯಾಧಾರಿತ ಮಾಹಿತಿಗಳನ್ನು ನೀಡಲಾಗುವುದು. ಪ್ರತಿ ಅಧಿವೇಶನದಲ್ಲಿ ವೀಡಿಯೊ ಮೂಲಕ ವಿಷಯ ತಜ್ಞರಿಂದ ಮಾಹಿತಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಮತ್ತು ಗುಂಪು ಚರ್ಚೆ ಇತ್ಯಾದಿ ಚಟುವಟಿಕೆಗಳನ್ನು ನಡೆಸಲಾಗುವುದು. ಪ್ರತಿ ದಿನ ರಾಜ್ಯಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ಮತ್ತು ಪ್ರಶ್ನೋತ್ತರಕ್ಕೆ ಅವಕಾಶ ನೀಡಲಾಗುವುದು ಎಂದರು.

ತರಬೇತಿಯಲ್ಲಿ ಭಾಗವಹಿಸುವವರು ಬೆಳಗ್ಗೆ ಬಂದು ಸಂಜೆ ವಾಪಾಸಾಗುವರು. ಸದಸ್ಯರಿಗೆ ಪ್ರಯಾಣ ಭತ್ಯೆ ಮತ್ತು ಗ್ರಾಮ ಪಂಚಾಯತ್ ವತಿಯಿಂದ ಪ್ರತಿದಿನದ ಭಾಗವಹಿಸುವಿಕೆ ಭತ್ಯೆಯನ್ನು ನೀಡಲಾಗುವುದು ಎಂದು ಹೇಳಿದರು.

ನೂತನ ಸದಸ್ಯರಿಗೆ, ಗ್ರಾಮ ಪಂಚಾಯತಿಯ ರಚನೆ ಮತ್ತು ಸ್ವರೂಪ, ಯೋಜನೆಗಳು, ಸದಸ್ಯರ ಕರ್ತವ್ಯ ಮತ್ತು ಹೊಣೆಗಾರಿಕೆಗಳು, ವಾರ್ಡ್ ಮತ್ತು ಗ್ರಾಮಸಭೆ ಇನ್ನಿತರ ಸಭೆಗಳ ನಿರ್ವಹಣೆ, ಹಣಕಾಸು ಸಂಪನ್ಮೂಲ ಲಭ್ಯತೆ, ದೂರದೃಷ್ಟಿ ಮತ್ತು ಅಭಿವೃದ್ಧಿ ಯೋಜನೆಗಳನ್ನು ರೂಪಿಸುವ ಕುರಿತು ಮಾಹಿತಿ ಒದಗಿಸುವ ನಿಟ್ಟಿನಲ್ಲಿ ತರಬೇತಿ ಆಯೋಜಿಸಲಾಗುತ್ತಿದೆ. ತರಬೇತಿಗೆ ಅಂದಾಜು 27.16 ಕೋಟಿ ರೂ. ವೆಚ್ಚವಾಗಲಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ಭರಿಸಲಿದೆ. ಒಂದು ತಿಂಗಳ ಒಳಗಾಗಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಬಳಿಕ ಅವರಿಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಿಕೆ ಇತ್ಯಾದಿಗಳ ಕುರಿತು ತರಬೇತಿಯನ್ನು ನೀಡಲಾಗುವುದು. ಗ್ರಾಮ ಪಂಚಾಯತ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ತರಬೇತಿ ಪ್ರಕ್ರಿಯೆಯನ್ನು ನಿರಂತರವಾಗಿ ನಡೆಸಲಾಗುವುದು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X