Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬ್ರಿಟನ್ ಸರಕಾರದಿಂದ ರಾಜ್ಯದ 1 ಸಾವಿರ...

ಬ್ರಿಟನ್ ಸರಕಾರದಿಂದ ರಾಜ್ಯದ 1 ಸಾವಿರ ನರ್ಸ್ ಗಳಿಗೆ ಉದ್ಯೋಗ: ಡಿಸಿಎಂ ಅಶ್ವತ್ಥನಾರಾಯಣ

''ವಾರ್ಷಿಕ ತಲಾ 20 ಲಕ್ಷ ರೂ.ಪ್ಯಾಕೇಜ್ ನಿಗದಿ''

ವಾರ್ತಾಭಾರತಿವಾರ್ತಾಭಾರತಿ31 Dec 2020 7:45 PM IST
share
ಬ್ರಿಟನ್ ಸರಕಾರದಿಂದ ರಾಜ್ಯದ 1 ಸಾವಿರ ನರ್ಸ್ ಗಳಿಗೆ ಉದ್ಯೋಗ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು, ಡಿ. 31: ಇಡೀ ರಾಜ್ಯವು ಕೊರೋನ ಸೋಂಕಿನ ಹೊಸ ಅಲೆಯ ಆತಂಕದಲ್ಲಿದ್ದರೆ ಕೌಶಲ್ಯಾವೃದ್ಧಿ ಖಾತೆ ಮಂತ್ರಿಯೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದಾರೆ.

''ರಾಜ್ಯದ ನರ್ಸ್ ಗಳಿಗೆ ವಿದೇಶಗಳಲ್ಲಿ ಅಪಾರ ಬೇಡಿಕೆ ಇದ್ದು, ಯುರೋಪ್ ಸೇರಿದಂತೆ ಅನೇಕ ದೇಶಗಳ ಆಸ್ಪತ್ರೆಗಳು ಅವರಿಗೆ ಉದ್ಯೋಗಾವಕಾಶ ನೀಡಲು ಮುಂದೆ ಬಂದಿವೆ. ಈ ನಿಟ್ಟಿನಲ್ಲಿ ಮೊದಲಿಗೆ ಬ್ರಿಟನ್ ಸರಕಾರ 1 ಸಾವಿರ ಮಂದಿ ನರ್ಸುಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟು ಮಂದಿ ಶುಶ್ರೂಶಕಿಯರನ್ನು ಆ ದೇಶಕ್ಕೆ ಕಳಿಸಲಾಗುತ್ತಿದೆ'' ಎಂದು ಡಾ.ಅಶ್ವತ್ಥನಾರಾಯಣ ಇಂದಿಲ್ಲಿ ಮಾಹಿತಿ ನೀಡಿದರು.

ಬ್ರಿಟನ್‍ಗೆ ಕಳಿಸಲಾಗುತ್ತಿರುವ ಶುಶ್ರೂಶಕಿಯರಿಗೆ ಸಂವಹನ ಕಲೆ ಸೇರಿದಂತೆ ಅವರ ವೃತ್ತಿಗೆ ಸಂಬಂಧಿಸಿದ ಎಲ್ಲ ರೀತಿಯ ಕುಶಲ ತರಬೇತಿಯನ್ನು ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮ (ಕೆವಿಟಿಎಸ್‍ಡಿಸಿ) ವತಿಯಿಂದ ನೀಡಲಾಗುತ್ತದೆ. ಬ್ರಿಟನ್ ಸರಕಾರ ಈ ನರ್ಸುಗಳಿಗೆ ವಾರ್ಷಿಕ ತಲಾ 20 ಲಕ್ಷ ರೂ.ಪ್ಯಾಕೇಜ್ ನಿಗದಿ ಮಾಡಿದೆ ಎಂದರು.

ಈ ಉದ್ದೇಶಕ್ಕಾಗಿ ಅರ್ಹ ಹಾಗೂ ನುರಿತ ಶುಶ್ರೂಶಕಿಯರನ್ನು ನೇಮಕಾತಿ ಮಾಡಿಕೊಳ್ಳಲು ಆ ದೇಶದ ಹೆಲ್ತ್ ಎಜ್ಯೂಕೇಶನ್ ಇಂಗ್ಲೆಂಡ್ (ಎಚ್‍ಇಇ), ನ್ಯಾಷನಲ್ ಹೆಲ್ತ್ ಸರ್ವೀಸಸ್ (ಎನ್‍ಎಚ್‍ಎಸ್) ಸಂಸ್ಥೆಗಳ ಜತೆ ರಾಜ್ಯ ಕೌಶಲ್ಯಾಭಿವೃದ್ಧಿ ಇಲಾಖೆ ಒಪ್ಪಂದ ಮಾಡಿಕೊಂಡಿದೆ. ವಿದೇಶದಲ್ಲಿ ಉದ್ಯೋಗ ಕೊಡಿಸುವ ಸಲುವಾಗಿ ಸರಕಾರವೇ ಅಂತಾರಾಷ್ಟ್ರೀಯ ವಲಸೆ ಕೇಂದ್ರ ಸ್ಥಾಪಿಸಿದೆ. ಇದರ ಮೂಲಕ ಇಷ್ಟೂ ಶುಶ್ರೂಶಕಿಯರನ್ನು ಕಳುಹಿಸಲಾಗುತ್ತಿದ್ದು, ಅವರ ಜತೆ ನಿರಂತರವಾಗಿ ಈ ಕೇಂದ್ರವು ಸಂಪರ್ಕದಲ್ಲಿರುತ್ತದೆ ಹಾಗೂ ಅವರ ಕುಂದುಕೊರತೆಗಳ ಬಗ್ಗೆ ನಿಗಾ ಇರಿಸುತ್ತದೆ. ಯಾವುದೇ ಸಮಸ್ಯೆ ಅಥವಾ ದೂರು ಇದ್ದರೆ ಬ್ರಿಟನ್‍ನಿಂದಲೇ ಇಲ್ಲಿಗೆ ತಿಳಿಸಬಹುದು. ಕೂಡಲೇ ಅವರಿಗೆ ಸೂಕ್ತ ಸಹಕಾರ ಒದಗಿಸಲಾಗುವುದು ಎಂದು ಹೇಳಿದರು.

ಸದ್ಯಕ್ಕೆ ರಾಜ್ಯದಲ್ಲಿ ಕುಶಲತೆಯುಳ್ಳ ಮಾನವ ಸಂಪನ್ಮೂಲ ವಿಪುಲವಾಗಿದ್ದು, ಇಂಥ ನಿರುದ್ಯೋಗಿ ಯುವಜನರಿಗೆ ಜಾಗತಿಕ ಮಟ್ಟದಲ್ಲಿ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಈ ವಲಸೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯು ವಿದೇಶಗಳಿಗೆ ಉದ್ಯೋಗಕ್ಕಾಗಿ ತೆರಳುವ ಯುವಜನರಿಗೆ ಸೂಕ್ತ ಮಾರ್ಗದರ್ಶನ, ತಾಂತ್ರಿಕ ಬೆಂಬಲ ಹಾಗೂ ಪೂರಕ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಪಬ್ಲಿಕ್ ಅಫೇಯರ್ಸ್ ಸೆಂಟರ್ ಜತೆ ಒಡಂಬಡಿಕೆ ಮಾಡಿಕೊಂಡಿದೆ ಎಂದು ಹೇಳಿದರು..

ಶುಶ್ರೂಶಕಿಯರ ಜತೆಗೆ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮವು(ಕೆವಿಟಿಎಸ್‍ಡಿಸಿ) ಕುವೈತ್‍ನ ಅರೆ ಸರಕಾರಿ ಸಂಸ್ಥೆಯಾದ ಅಲ್-ದುರಾ ಮ್ಯಾನ್‍ಪವರ್ ಸಪ್ಲೈ ಜತೆ ಇನ್ನೊಂದು ಒಪ್ಪಂದವನ್ನು ಮಾಡಿಕೊಂಡಿದೆ. ಇದರ ಪ್ರಕಾರ ಕುವೈತ್‍ನಲ್ಲಿ ರಾಜ್ಯದ ಅನುಭವಿ ವಾಹನ ಚಾಲಕರು, ಹೌಸ್ ಬಾಯ್ಸ್ ಹಾಗೂ ಅಡುಗೆ ಮಾಡುವವರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಕೆವಿಟಿಎಸ್‍ಡಿಸಿ ಮತ್ತು ಕೆನಡಾ ಸರಕಾರದ ನಡುವೆ ಹೊಸ ಒಪ್ಪಂದ ಮಾತುಕತೆ ಪ್ರಗತಿಯಲ್ಲಿದ್ದು, ಅದರ ಪ್ರಕಾರ ಐಟಿ, ವಿಡಿಯೋ ಗೇಮ್ ಮತ್ತು ಎಐ ವಲಯಕ್ಕೆ ಸಂಬಂಧಿಸಿದ ಅರ್ಹ ಅಭ್ಯರ್ಥಿಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು. ಕ್ಯುಬೆಕ್‍ನ ಮಾಂಟ್ರಿಯಲ್‍ಗೆ ಉದ್ಯೋಗ ಮತ್ತು ವಲಸೆಗೆ ಅನುಕೂಲವಾಗುವಂತೆ ಇಲಾಖೆಯು ಈ ಒಪ್ಪಂದ ಮಾಡಿಕೊಳ್ಳುವ ಕಾರ್ಯದಲ್ಲಿ ಹೆಜ್ಜೆ ಇಟ್ಟಿದೆ. ಕೆವಿಟಿಎಸ್‍ಡಿಸಿ ಮೂಲಕ ವಿದೇಶದಲ್ಲಿ ಸೂಕ್ತ ವಿದೇಶಿ ಉದ್ಯೋಗದಾತರನ್ನು ಗುರುತಿಸುವ, ಸಂಪರ್ಕ ಸ್ಥಾಪಿಸಲು ಮತ್ತು ಕರ್ನಾಟಕ ರಾಜ್ಯದಿಂದ ಸುರಕ್ಷಿತ ವಲಸೆ ಕಾರ್ಯ ವಿಧಾನವನ್ನು ಉತ್ತೇಜಿಸಲು ವಿವಿಧ ದೇಶಗಳಲ್ಲಿನ ಕನ್ನಡ ಸಂಘಗಳ ಜತೆ ಸಂಪರ್ಕದಲ್ಲಿದೆ ಎಂದು ಅವರು ವಿವರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X