ಜ.17ರಂದು ಪಲ್ಸ್ ಪೋಲಿಯೋ

ಸಾಂದರ್ಭಿಕ ಚಿತ್ರ
ಬೆಂಗಳೂರು, ಡಿ.31: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜ.17ರಂದು ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಫೋಲಿಯೋ) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಜ.17ರಂದು 2021ರಲ್ಲಿ ಒಂದು ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಕೋವಿಡ್-19 ನಿವಾರಣಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ನಡೆಸಲಾಗುವುದು. ಕಾರ್ಯಕ್ರಮದ ಮೊದಲನೇ ದಿನ ಪೋಲಿಯೊ ಬೂತ್ಗಳಲ್ಲಿ ಹಾಗೂ ನಂತರದ 2-3 ದಿನಗಳಲ್ಲಿ ಮನೆ-ಮನೆ ಭೇಟಿಯ ಮೂಲಕ 0ಯಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ನೀಡುವಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Next Story





