Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶೋಷಿತರಿಗೆ ಅವಕಾಶ- ಪ್ರೋತ್ಸಾಹ ಎರಡೂ...

ಶೋಷಿತರಿಗೆ ಅವಕಾಶ- ಪ್ರೋತ್ಸಾಹ ಎರಡೂ ಇರಲಿ: ನ್ಯಾ.ನಾಗಮೋಹನ ದಾಸ್

ವಾರ್ತಾಭಾರತಿವಾರ್ತಾಭಾರತಿ31 Dec 2020 10:24 PM IST
share
ಶೋಷಿತರಿಗೆ ಅವಕಾಶ- ಪ್ರೋತ್ಸಾಹ ಎರಡೂ ಇರಲಿ: ನ್ಯಾ.ನಾಗಮೋಹನ ದಾಸ್

ಬೆಂಗಳೂರು, ಡಿ.31: ಅಸ್ಪೃಶ್ಯರು, ಹಿಂದುಳಿದವರು, ಬುಡಕಟ್ಟು ಜನರು ಮಹಿಳೆಯರು ಮತ್ತು ಇತರೆ ಅವಕಾಶವಂಚಿತರಿಗೆ ಅಗತ್ಯ ಪ್ರೋತ್ಸಾಹ ಮತ್ತು ಅವಕಾಶಗಳನ್ನು ನೀಡುವುದರ ಮೂಲಕ ದೇಶವನ್ನು ಸದೃಢವಾಗಿ ಕಟ್ಟಬೇಕಾಗಿದೆ ಎಂದು ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಪ್ರತಿಪಾದಿಸಿದ್ದಾರೆ.

ಗುರುವಾರ ಬೆಂಗಳೂರು ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವು 203ನೇ ಕೋರೆಗಾಂವ್ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಆನ್‍ಲೈನ್‍ನಲ್ಲಿ ಆಯೋಜಿಸಿದ್ದ `ಶೋಷಿತ ವರ್ಗಗಳ ಸ್ವಾಭಿಮಾನದ ಸಂಕೇತವಾಗಿ ಭೀಮಾ ಕೋರೆಗಾಂವ್’ ವಿಚಾರಗೋಷ್ಟಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನ ಜಾರಿಗೆ ಬಂದಿದ್ದರಿಂದಲೇ ಕಳೆದ 70 ವರ್ಷಗಳಲ್ಲಿ ಶೋಷಿತ ವರ್ಗಗಳಿಗೆ ರಾಜಕೀಯ, ಶೈಕ್ಷಣಿಕ, ಔದ್ಯೋಗಿಕ ಅವಕಾಶಗಳು ದೊರೆತು ಉನ್ನತ ಸ್ಥಾನಗಳು ದೊರಕುವಂತಾಗಿದೆ. ಸಂವಿಧಾನ ನೀಡಿದ ಅವಕಾಶಗಳಿಂದಾಗಿಯೇ ಇಂದು ಈ ದೇಶದ ರಾಷ್ಟ್ರಪತಿಗಳು ದಲಿತ ಮತ್ತು ಪ್ರಧಾನಮಂತ್ರಿಗಳು ಹಿಂದುಳಿದ ವರ್ಗಕ್ಕೆ ಸೇರಿದವರು ಎಂದು ಅವರು ಅಭಿಮಾನಪಟ್ಟರು.

ಇಲ್ಲಿಯವರೆಗೂ ದೇಶದಲ್ಲಿ ನಡೆದಿರುವ ಎಲ್ಲಾ ಸಾಧನೆಗಳಿಗೆ ಸಂವಿಧಾನವೇ ಕಾರಣ. ಭಾರತೀಯ ಸಂವಿಧಾನ ಬೃಹತ್ತಾದುದಷ್ಟೇ ಅಲ್ಲ, ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದು. ದೇಶದ ಪ್ರತಿಯೊಬ್ಬರೂ ಸಂವಿಧಾನವನ್ನು ಓದಿ, ಅರ್ಥಮಾಡಿಕೊಂಡು ಅದರ ಆಶಗಳನ್ನು ಮೈಗೋಡಿಸಿಕೊಂಡು ಕಲ್ಯಾಣ ರಾಜ್ಯದ ಕನಸನ್ನು ನನಸು ಮಾಡಬೇಕಿದೆ ಎಂದು ಅವರು ತಿಳಿಸಿದರು.

ಮಹಾರಾಷ್ಟ್ರದ ಪುಣೆ ಬಳಿಯ ಕೋರೆಗಾಂವ್‍ನ ವಿಜಯೋತ್ಸವ ಆಚರಣೆ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆ ಬಗ್ಗೆ ಪ್ರಸ್ತಾಪಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿದವರನ್ನು ನಗರ ನಕ್ಸಲರೆಂದು ಜೈಲಿನಲ್ಲಿಟ್ಟಿರುವುದು ಸರಿಯಲ್ಲವೆಂದು ಎಂದು ಬೇಸರ ವ್ಯಕ್ತಪಡಿಸಿದರು.

ಡಾ.ಅಂಬೇಡ್ಕರ್ ಅಧ್ಯಯನ ಕೇಂದ್ರಗಳ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಡಾ.ಸಿದ್ದಲಿಂಗಯ್ಯ ಮಾತನಾಡಿ, 28 ಸಾವಿರದಷ್ಟಿದ್ದ ಮೇಲ್ಜಾತಿ ಪೇಶ್ವೆ ಸೈನಿಕ ವಿರುದ್ಧ ಮಹರ್ ಸಮುದಾಯದ 500 ಮಂದಿ ಸೈನಿಕರ ಜಯವು ಬ್ರೀಟಿಷರ ಪರ ಅಥವ ಮೇಲ್ಜಾತಿಯ ವಿರುದ್ಧದ್ದಾಗಿರಲಿಲ್ಲ. ಬದಲಾಗಿ ಮಾನವೀಯತೆ ಪರವಾಗಿ ನಡೆದ ಹೋರಾಟವಾಗಿತ್ತು’’ ಎಂದು ಬಣ್ಣಿಸಿದರು.

ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಉಪಪೊಲೀಸ್ ಆಯುಕ್ತ ಎಸ್.ಸಿದ್ದರಾಜು ಮಾತನಾಡಿ, ಶೋಷಿತರು ಈ ದೇಶದ ಮೂಲ ನಿವಾಸಿಗಳು. ಚಾತುರ್ವಣದ ಕಾರಣಕ್ಕಾಗಿ ದೇಶದ ಪ್ರತಿಶತ ಶೇ.90 ಮಂದಿ ತಮ್ಮ ನೆಲದಲ್ಲಿ ತಾವು ಪರಕೀಯರಾಗಿದ್ದಾರೆ. ಹಾಗಾಗಿ ಸಾಮಾಜಿಕ ನ್ಯಾಯವನ್ನು ಸಮಾಜದ ಕಟ್ಟಕಡೆಯ ಸಮುದಾಯಗಳಿಗೆ ತಲುಪಿಸುವ ಪ್ರಯತ್ನವನ್ನು ರಾಜಕಾರಣಿಗಳು ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೇಣುಗೋಪಾಲ್, ಡಾ.ಎನ್.ಸಂಜೀವ ರಾಜ್, ಡಾ.ಸುಧಾಕರ್. ಎಚ್,  ಡಾ.ಗೋವಿಂದರಾಜು, ಎಂ.ಉದಯ ಕುಮಾರ್, ಗೋಪಿನಾಥ್, ಡಾ.ಎಂ.ವಿ. ಆಶಾ, ಪ್ರೇಮ್ ಸೋಹನ್ ಲಾಲ್, ಪ್ರೊ.ಕೆ.ವಿ.ರಾಜು, ವಿದೇಯ ಬೆಳಗೋಡೆ ಶ್ರೀಕಂಠ, ಪ್ರೊ.ಎಂ. ನಾರಾಯಣಸ್ವಾಮಿ, ಪ್ರೊ.ಸಿದ್ದಪ್ಪ ಬೆಳಗಟ್ಟಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X