ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಉಡುಪಿ, ಜ.1: ಕರ್ನಾಟಕ ಸರಕಾರ ಮತ್ತು ಭಾರತ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆ/ಕಾಲೇಜುಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಹಾಗೂ ಮೆರಿಟ್- ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 20 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ -https://dom.karnataka.gov.in- ವೆಬ್ಸೈಟ್ ಅಥವಾ ತಾಲೂಕುಗಳ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳ ಉಡುಪಿ ದೂ.ಸಂಖ್ಯೆ:0820-2574596, ಕುಂದಾಪುರ ದೂ.ಸಂಖ್ಯೆ: 08254 -230370, ಕಾರ್ಕಳ ದೂ.ಸಂಖ್ಯೆ: 08258-231101ನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story