ಜ.3ರಂದು ಅಲ್ ಮದೀನಾ ಗ್ರಾಂಡ್ ಅಲುಮ್ನಿ ಮೀಟ್
ನರಿಂಗಾನ, ಜ.2: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಇದರ ಹಳೆ ವಿದ್ಯಾರ್ಥಿ ಸಂಘಟನೆ 'ಅಲ್ ಮದೀನ ಅಲುಮ್ನಿ ಅಸೋಸಿಯೇಶನ್' ಇದರ ಗ್ರಾಂಡ್ ಅಲುಮ್ನಿ ಮೀಟ್ ಮತ್ತು ಶರಫುಲ್ ಉಲಮಾ ಅನುಸ್ಮರಣೆ ಕಾರ್ಯಕ್ರಮವು ಜ.3 ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ.
ಹಳೆ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಎಲ್.ಎಚ್.ಮುಹಮ್ಮದ್ ಶರೀಫ್ ಸಅದಿ ಮೂಡುಬಿದಿರೆ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಉದ್ಘಾಟಿಸಲಿದ್ದಾರೆ. ಅಬ್ದುಲ್ ರಝಾಕ್ ಮಾಸ್ಟರ್ ನಾವೂರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು ಎಂದು ಅಸೋಸಿಯೇಶನ್ ಪ್ರದಾನ ಕಾರ್ಯದರ್ಶಿ ಇಕ್ಬಾಲ್ ಮರ್ಝೂಖಿ ಸಖಾಫಿ ಗೇರುಕಟ್ಟೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story