ಜ.3ರಂದು ಗ್ರಾಪಂ ಚುನಾವಣೆಯಲ್ಲಿ ಎಸ್‌ಡಿಪಿಐ ಬೆಂಬಲಿತ ವಿಜೇತ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆ
ಮಂಗಳೂರು, ಜ.2: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ದ.ಕ. ಜಿಲ್ಲಾ ಸಮಿತಿ ವತಿಯಿಂದ ಜ.3ರಂದು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತರಾದ ಪಕ್ಷ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನೆ ಹಾಗೂ ಮತದಾರರಿಗೆ ಧನ್ಯವಾದ ಸಮರ್ಪಣಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಸಂಜೆ 4 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಅದಕ್ಕೂ ಮೊದಲು 3:30ಕ್ಕೆ ಕ್ಲಾಕ್ ಟವರ್ ನಿಂದ ಪುರಭವನದ ವರೆಗೆ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ ಎಲ್ಲ ಅಭ್ಯರ್ಥಿಗಳು ಮತ್ತು ಪಕ್ಷದ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್‌ಡಿಪಿಐ ಮಾಧ್ಯಮ ಸಂಯೋಜಕ ಅನ್ವರ್ ಸಾದತ್ ಬಜತ್ತೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





