ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್ ಕೊಡುಗೆ

ಕಡಬ, ಜ.2: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಮಾರು 14.5 ಲಕ್ಷ ರೂ. ವೆಚ್ಚದಲ್ಲಿ ಕೊಡುಗೆಯಾಗಿ ನೀಡಿದ ಆ್ಯಂಬುಲೆನ್ಸ್ ಅನ್ನು ಸುಳ್ಯ ಶಾಸಕ ಎಸ್.ಅಂಗಾರ ಶನಿವಾರ ಉದ್ಘಾಟಿಸಿದರು.
ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಐದು ನೂತನ ಆ್ಯಂಬುಲೆನ್‌ಗಳನ್ನು ನೀಡಲಾಗಿದ್ದು, ಈ ಪೈಕಿ ಒಂದು ಆ್ಯಂಬುಲೆನ್ಸ್ನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೀಡಲಾಗಿದೆ. ನೂತನ ಆ್ಯಂಬುಲೆನ್ಸ್‌ನ ಕೀಯನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್‌ರಿಗೆ ಶಾಸಕ ಎಸ್.ಅಂಗಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಡಬ ತಾಪಂ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಜಿಪಂ ಸದಸ್ಯ ಪಿ.ಪಿ.ವರ್ಗೀಸ್, ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬ, ಸೀತಾರಾಮ ಗೌಡ ಪೊಸವಳಿಕೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Next Story





