ಕಾಂಗ್ರೆಸ್ ಹಿರಿಯ ನಾಯಕ ಬೂಟಾ ಸಿಂಗ್ ನಿಧನಕ್ಕೆ ಡಿ.ಕೆ.ಶಿವಕುಮಾರ್ ಸಂತಾಪ

ಬೆಂಗಳೂರು, ಜ. 2: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬೂಟಾ ಸಿಂಗ್ ಅವರ ನಿಧನಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
'ಬೂಟಾ ಸಿಂಗ್ ಅವರ ನಿಧನ ಸುದ್ದಿ ಕೇಳಿ ಬೇಸರವಾಗಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಸರಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಬೂಟಾ ಸಿಂಗ್ ಅವರು ಅನುಭವಿ ರಾಜಕಾರಣಿ. ಬಡವರು ಮತ್ತು ದೀನದಲಿತರ ಧ್ವನಿಯಾಗಿ ಅವರ ಕಲ್ಯಾಣಕ್ಕೆ ಶ್ರಮಿಸಿದ್ದ ಅವರು ಅಪಾರ ಅಭಿಮಾನಿ ಬಳಗ ಹೊಂದಿದ್ದರು. ಜತೆಗೆ ಬಿಹಾರ ಹಾಗೂ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿಯೂ ಅವರು ಸೇವೆ ಸಲ್ಲಿಸಿದ್ದರು ಎಂದು ಸ್ಮರಿಸಿದ್ದಾರೆ.
ಬೂಟಾ ಸಿಂಗ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಡಿ.ಕೆ.ಶಿವಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





