Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಲಾರಂಭ: ಸುರಕ್ಷತೆ ಕುರಿತು...

ಶಾಲಾರಂಭ: ಸುರಕ್ಷತೆ ಕುರಿತು ವಿದ್ಯಾರ್ಥಿ, ಪೋಷಕರರಲ್ಲಿ ಸಮಾಧಾನ- ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ2 Jan 2021 6:38 PM IST
share
ಶಾಲಾರಂಭ: ಸುರಕ್ಷತೆ ಕುರಿತು ವಿದ್ಯಾರ್ಥಿ, ಪೋಷಕರರಲ್ಲಿ ಸಮಾಧಾನ- ಸಚಿವ ಸುರೇಶ್ ಕುಮಾರ್

ಬೆಂಗಳೂರು, ಜ.2: ಮಕ್ಕಳ ಸುರಕ್ಷತೆಗೆ ಕೈಗೊಂಡ ಉಪಕ್ರಮಗಳ ಕುರಿತು ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಭರವಸೆ ಉಂಟಾಗಿದ್ದು, ಪ್ರಸ್ತುತ ವರ್ಷದ ಶಾಲಾರಂಭದ ಎರಡನೆ ದಿನವಾದ ಶನಿವಾರ ರಾಜ್ಯದೆಲ್ಲೆಡೆ ಶುಕ್ರವಾರಕ್ಕಿಂತ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ  ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಶನಿವಾರ ರಾಮನಗರ ಹಾಗೂ ಬೆಂಗಳೂರು ನಗರದ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ 5492 ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾಗಿರುವ 3,30,877 ವಿದ್ಯಾರ್ಥಿಗಳ ಪೈಕಿ ಶನಿವಾರ 1,09,319 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. (ಶೇ.33.04 ಹಾಜರಿ) ಅಂತೆಯೇ 16,850 ಪ್ರೌಢಶಾಲೆಗಳಲ್ಲಿ 10ನೆ ತರಗತಿಗೆ ದಾಖಲಾಗಿರುವ 9,29,130 ವಿದ್ಯಾರ್ಥಿಗಳ ಪೈಕಿ 4,25,896 ವಿದ್ಯಾರ್ಥಿಗಳು ಹಾಜರಾಗಿದ್ದಾರೆ (ಶೇ. 45.84 ಹಾಜರಾತಿ) ಎಂದರು.

ಪೋಷಕರು ಮತ್ತು ಮಕ್ಕಳು ಶಾಲಾರಂಭದ ಕುರಿತು ಸಂತಸ ವ್ಯಕ್ತಪಡಿಸಿದ್ದಾರಲ್ಲದೇ, ಸುರಕ್ಷತೆ ಮತ್ತು ಎಸ್‍ಒಪಿ ಪಾಲನೆ ಕುರಿತು ವಿಶ್ವಾಸ ಹೊಂದಿದ್ದಾರೆ. ಬಹುದಿನಗಳ ಕಾಲ ಶಾಲೆಗಳು ಆರಂಭವಾಗದೇ ಮಕ್ಕಳ ಭವಿಷ್ಯದ ಕುರಿತು ಆತಂಕದಲ್ಲಿದ್ದ ಪೋಷಕರು ಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದೆಲ್ಲೆಡೆ ಶಾಲಾರಂಭಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಸುರೇಶ್ ಕುಮಾರ್ ಹೇಳಿದರು.

ಕೆಲ ಪೋಷಕರು ಮುಂದಿನ ವಾರದಿಂದ ಮಕ್ಕಳನ್ನು ಶಾಲೆಗೆ ಕಳಿಸಲು ಬಯಸಿರುವುದರಿಂದ ಸೋಮವಾರದಿಂದ ಶಾಲೆಗಳಲ್ಲಿ ಹಾಜರಾತಿ ಹೆಚ್ಚಾಗಲಿದೆ. ಸುರಕ್ಷತಾ ವಾತಾವರಣ ಗಮನಿಸಿರುವ ಪೋಷಕರು ಉಳಿದ ತರಗತಿಗಳನ್ನೂ ಆರಂಭಿಸಲು ಹೆಚ್ಚಿನ ಒತ್ತಡ ಹೇರುತ್ತಿರುವುದು ಸಾಮಾನ್ಯ ದೃಶ್ಯವಾಗಿದೆ. ಎಲ್ಲಿಯೂ ಯಾವುದೇ ತೊಂದರೆ ಎದುರಾಗಿಲ್ಲ. ಹಾಗೆಯೇ ಮಕ್ಕಳೆ ಸ್ವತಃ ಸುರಕ್ಷಿತ ಅಂತರ ಪಾಲನೆ ಮಾಡುತ್ತಿರುವುದು ಶಿಕ್ಷಕರು ಮತ್ತು ಪೋಷಕರಿಗೆ ಸಮಾಧಾನ ತಂದಿದೆ ಎಂದು ಅವರು ಹೇಳಿದರು.

ಮಂಡಳಿ ಪರೀಕ್ಷೆಗಳಾದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯು ಪಠ್ಯಗಳನ್ನು ಲಭ್ಯವಾಗಬಹುದಾದ ಅವಧಿ ಮತ್ತು ಪರೀಕ್ಷೆಗೆ ಅಗತ್ಯವಿರುವಷ್ಟು ನಿಗದಿಪಡಿಸಲಾಗುವುದು. ವಿದ್ಯಾರ್ಥಿಗಳ ಅಭ್ಯಾಸಕ್ಕೆ ಹೊರೆಯಾಗದಂತೆ ಪಠ್ಯಕ್ರಮ ಇರಲಿದೆ. ಹಾಗೆಯೇ ಕೆಲವು ದಿನಗಳಲ್ಲಿ 10 ಮತ್ತು 12ನೆ ತರಗತಿಗಳ ತಾತ್ಪೂರ್ತಿಕ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಸುರೇಶ್ ಕುಮಾರ್, ಶಾಲೆಗಳು ಆರಂಭವಾಗಿರುವುದು ಶಾಲಾ ಪರಿಸರಕ್ಕೆ ಕಳೆ ಬಂದಿದ್ದು, ಗ್ರಾಮೀಣ ಪ್ರದೇಶದಲ್ಲಿ ಒಂದು ಶಾಲಾ ಉಡುಪಿನೊಂದಿಗೆ ಮಕ್ಕಳ ಓಡಾಟ ಒಂದು ರೀತಿಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ ಎಂದರು.

ಗದಗ ಜಿಲ್ಲೆ ಗದಗದ ಲೋಯಲಾ ಪ್ರಾಥಮಿಕ ಶಾಲೆ, ಲೋಯಲಾ ಪ್ರೌಢಶಾಲೆ, ಸೇಂಟ್ ಜಾನ್ ಪ್ರಾಥಮಿಕ ಶಾಲೆ, ಮಾರಲ್ ಪ್ರಾಥಮಿಕ ಶಾಲೆ, ಸಿ.ಎಸ್.ಪಾಟೀಲ ಪ್ರೌಢಶಾಲೆ ಮತ್ತು ನರಗುಂದ ತಾಲೂಕಿನ ಜಗಾಪೂರ ಸರಕಾರಿ ಪ್ರೌಢಶಾಲೆಯ ಒಟ್ಟು 10 ಶಿಕ್ಷಕರಿಗೆ ಶಾಲಾರಂಭಕ್ಕೂ ಮುನ್ನವೇ ಕೋವಿಡ್-19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಶಾಲೆಗಳು ಶುಕ್ರವಾರ ಆರಂಭವಾಗಿಲ್ಲ. ಶಾಲೆಗಳು ಆರಂಭವಾಗದೆ ಇದ್ದುದರಿಂದ ಈ ಶಿಕ್ಷಕರು ಯಾವುದೇ ಮಕ್ಕಳ ಸಂಪರ್ಕಕ್ಕೆ ಬಂದಿಲ್ಲ. ಈ ಶಿಕ್ಷಕರ ಹೋಂ ಕ್ವಾರಂಟೈನ್ ಅವಧಿ ಇನ್ನೂ ಏಳು ದಿನಗಳ ಬಾಕಿಯಿದ್ದು, ಈ ಶಾಲೆಗಳು  ಮುಂದಿನ ದಿನಗಳಲ್ಲಿ ಆರಂಭವಾಗಲಿವೆ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.

10 ಮತ್ತು 12ನೆ ತರಗತಿಗಳು ಮತ್ತು 6 ರಿಂದ 9ನೆ ತರಗತಿಗಳಿಗೆ ಪರಿಷ್ಕೃತ ವಿದ್ಯಾಗಮ ತರಗತಿಗಳ ಆರಂಭವಾದ ಹಿನ್ನೆಲೆಯಲ್ಲಿ ಶನಿವಾರ ರಾಮನಗರ ಜಿಲ್ಲೆಯ ಬಿಡದಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಸವೇಶ್ವರ ಪ್ರೌಢಶಾಲೆ, ರಾಮನಗರದ ಬಾಲಕಿಯರ ಸರಕಾರಿ ಪ್ರೌಢಶಾಲೆ, ಶಾಂತಿನಿಕೇತನ ಶಾಲೆ, ವಿ.ಜಿ.ದೊಡ್ಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಾಗಡಿ ತಾಲೂಕಿನ ಹೊಸಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾಚೇನಹಟ್ಟಿ ಸರಕಾರಿ ಪ್ರೌಢಶಾಲೆ ಸೇರಿದಂತೆ ರಾಮನಗರ ಜಿಲ್ಲೆ ಮತ್ತು ಬೆಂಗಳೂರು ನಗರದ ಹಲವು ಶಾಲೆಗಳಿಗೆ ಭೇಟಿ ನೀಡಿ ಪೋಷಕರು ಮತ್ತು ಮಕ್ಕಳೊಂದಿಗೆ ಶಾಲಾರಂಭದ ಕುರಿತು ಸಂವಾದ ನಡೆಸಿ ಸಚಿವ ಸುರೇಶ್ ಕುಮಾರ್ ಅಭಿಪ್ರಾಯಗಳನ್ನು ಆಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X