Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕ್ರೀಡಾಪಟುಗಳ ಬೆಳವಣಿಗೆಗೆ ಎಲ್ಲ ರೀತಿಯ...

ಕ್ರೀಡಾಪಟುಗಳ ಬೆಳವಣಿಗೆಗೆ ಎಲ್ಲ ರೀತಿಯ ನೆರವು ನೀಡಲು ಸರಕಾರ ಬದ್ಧ: ಸಿಎಂ ಯಡಿಯೂರಪ್ಪ

ಯುವಜನೋತ್ಸವಕ್ಕೆ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ2 Jan 2021 7:52 PM IST
share
ಕ್ರೀಡಾಪಟುಗಳ ಬೆಳವಣಿಗೆಗೆ ಎಲ್ಲ ರೀತಿಯ ನೆರವು ನೀಡಲು ಸರಕಾರ ಬದ್ಧ: ಸಿಎಂ ಯಡಿಯೂರಪ್ಪ

ಬೆಂಗಳೂರು, ಡಿ.2: ಖೇಲೋ ಇಂಡಿಯಾ ಮತ್ತು ಫಿಟ್ ಇಂಡಿಯಾ ಯೋಜನೆಗಳ ಅನುಷ್ಠಾನಕ್ಕೆ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ಯುವಜನರ ಮತ್ತು ಕ್ರೀಡಾಪಟುಗಳ ಬೆಳವಣಿಗೆಗೆ ಎಲ್ಲಾ ರೀತಿಯ ಬೆಂಬಲ ನೀಡಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶನಿವಾರ ಭಾರತ ಸರಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯವು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ವರ್ಚುವಲ್ ವೇದಿಕೆಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಯುವಜನೋತ್ಸವ ಕಾರ್ಯಕ್ರಮ ರಾಜ್ಯದ ಕಲೆ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ರಾಷ್ಟ್ರ ಮಟ್ಟದಲ್ಲಿ ಪಸರಿಸಲು ಯುವಜನರಿಗೆ ಉತ್ತಮ ವೇದಿಕೆಯಾಗಿದೆ. ಇದನ್ನು ಯುವಜನತೆ ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ರಾಜ್ಯದ ಮತ್ತು ಕನ್ನಡ ಭಾಷೆಯ ಕಂಪನ್ನು ರಾಷ್ಟ್ರ ಮಟ್ಟದಲ್ಲಿ ಎತ್ತಿಹಿಡಿಯಲಿ ಎಂದು ಅವರು ಆಶಿಸಿದ್ದಾರೆ.

ಸರಕಾರದ ಅಪರ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಮಾತನಾಡಿ, ಯುವ ಜನೋತ್ಸವ ಕಾರ್ಯಕ್ರಮವು ರಾಷ್ಟ್ರದ ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವಂತಹದ್ದಾಗಿದೆ ವೈವಿಧ್ಯಮಯ ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ಭಾಷೆಗಳಲ್ಲಿನ ಶ್ರೀಮಂತಿಕೆಯನ್ನು ಯುವಜನರಿಗೆ ಪರಿಚಯಿಸಲು ಒಂದು ಉತ್ತಮ ಅವಕಾಶವಾಗಿದೆ ಎಂದರು.

ದೇಶದ ಮತ್ತು ರಾಜ್ಯದ ಅಭಿವೃದ್ಧಿಗೆ ಯುವಶಕ್ತಿಯ ಕೊಡುಗೆ ಅಗತ್ಯವಾಗಿದೆ. ಪ್ರಸ್ತುತ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಿ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸುಮಾರು 6,500 ಯುವಜನರು ಪಾಲ್ಗೊಂಡಿದ್ದು, ವಿವಿಧ ಕಲಾಪ್ರಕಾರಗಳಲ್ಲಿ ಜಿಲ್ಲೆಗಳಲ್ಲಿ ವಿಜೇತರಾದ ಸುಮಾರು ಒಂದು ಸಾವಿರ ಪ್ರತಿಭಾವಂತ ಯುವಜನರ ವಿಡಿಯೋ ರೆಕಾರ್ಡಿಂಗ್‍ಗಳನ್ನು ಪರಿಣಿತ ತೀರ್ಪುಗಾರರು ಮೌಲ್ಯಮಾಪನ ಮಾಡಿ ರಾಜ್ಯ ತಂಡವನ್ನು ಯವನಿಕಾ ಸಭಾಂಗಣದಲ್ಲಿ ಆಯ್ಕೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಯವರಾದ ಗೋವಿಂದ ಕಾರಜೋಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಕೆ.ಶ್ರೀನಿವಾಸ್ ವಂದಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X