ಬೂಟಾ ಸಿಂಗ್ ನಿಧನಕ್ಕೆ ಆಸ್ಕರ್ ಫೆರ್ನಾಂಡೀಸ್ ಸಂತಾಪ
ಉಡುಪಿ, ಜ.2: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಹಾಗೂ ನಿಷ್ಠಾವಂತ ಕಾಂಗ್ರೆಸ್ಸಿನ ಬೂಟಾ ಸಿಂಗ್ ಅವರ ನಿಧನಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡೀಸ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಯು.ಆರ್.ಸಭಾಪತಿ ಅವರೂ ಬೂಟಾ ಸಿಂಗ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story





