ಬೆಂಗಳೂರು: 10 ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೋನ ಪತ್ತೆ

ಬೆಂಗಳೂರು, ಜ.2: ನಗರದ ಹೊರವಲಯದ ನರ್ಸಿಂಗ್ ಕಾಲೇಜೊಂದರ ಹತ್ತು ವಿದ್ಯಾರ್ಥಿಗಳಲ್ಲಿ ಕೊರೋನ ಸೋಂಕು ಪತ್ತೆಯಾಗಿರುವುದು ವರದಿಯಾಗಿದೆ.
ಸೋಂಕು ಕಾಣಿಸಿಕೊಂಡ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೆಮ್ಮು, ನೆಗಡಿ ಮತ್ತು ಜ್ವರ ಕಾಣಿಸಿಕೊಂಡ ಹಿನ್ನೆಲೆ ಅವರ ಗಂಟಲುದ್ರವ ಪರೀಕ್ಷೆಗೆ ಒಳಪಡಿಸಿದಾಗ 10 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿತ್ತು.
ಈಗಾಗಲೇ ಮೂವರು ವಿದ್ಯಾರ್ಥಿಗಳು ಗುಣಮುಖರಾಗಿದ್ದು, ಸೋಂಕಿನಿಂದ ಚೇತರಿಸಿಕೊಂಡ ಕಾರಣ ಡಿಸ್ಚಾರ್ಜ್ ಮಾಡಲಾಗಿದೆ. ಇನ್ನುಳಿದ 7 ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Next Story





