ದ.ಕ. ಜಿಲ್ಲೆ: 37 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಜ.2: ದ.ಕ.ಜಿಲ್ಲೆಯಲ್ಲಿ ಶನಿವಾರ 37 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 32,948 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.
ಶನಿವಾರ 19 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಈವರೆಗೆ 31,849 ಮಂದಿಗೆ ನೀಡಿದ ಚಿಕಿತ್ಸೆ ಫಲಕಾರಿಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 4,89,908 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 4,56,960 ಮಂದಿಯ ವರದಿ ನೆಗೆಟಿವ್ ಮತ್ತು 32,948 ಮಂದಿಯ ವರದಿ ಪಾಸಿಟಿವ್ ಆಗಿದೆ. ಅಲ್ಲದೆ 367 ಸಕ್ರಿಯ ಪ್ರಕರಣವಿದೆ. ಈವರೆಗೆ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ 732 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 19,295 ಮಂದಿಯ ವಿರುದ್ಧ ಮಾಸ್ಕ್ ಉಲ್ಲಂಘಿಸಿದ ಪ್ರಕರಣ ದಾಖಲಿಸಲಾಗಿದ್ದು, 20,49,128 ರೂ. ದಂಡವನ್ನು ವಸೂಲಿ ಮಾಡಲಾಗಿದೆ.
Next Story





