Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜ.8ರಿಂದ ಬ್ರಿಟನ್‌ಗೆ ವಿಮಾನ ಯಾನ...

ಜ.8ರಿಂದ ಬ್ರಿಟನ್‌ಗೆ ವಿಮಾನ ಯಾನ ಪುನಾರಂಭ; ಪ್ರಯಾಣಿಕರಿಗಾಗಿ ಕೇಂದ್ರದಿಂದ ಮಾರ್ಗಸೂಚಿ ಜಾರಿ

ವಾರ್ತಾಭಾರತಿವಾರ್ತಾಭಾರತಿ2 Jan 2021 10:35 PM IST
share
ಜ.8ರಿಂದ ಬ್ರಿಟನ್‌ಗೆ ವಿಮಾನ ಯಾನ ಪುನಾರಂಭ; ಪ್ರಯಾಣಿಕರಿಗಾಗಿ ಕೇಂದ್ರದಿಂದ ಮಾರ್ಗಸೂಚಿ ಜಾರಿ

ಹೊಸದಿಲ್ಲಿ, ಜ.2: ಬ್ರಿಟನ್‌ನಿಂದ ಆಗಮಿಸುವ ಪ್ರಯಾಣಿಕರ ಕಣ್ಗಾವಲು ಹಾಗೂ ತಪಾಸಣೆಗಾಗಿ ಕೇಂದ್ರ ಸರಕಾರವು ಶನಿವಾರ ನೂತನ ಮಾರ್ಗದರ್ಶಿ ಸೂತ್ರಗಳನ್ನು ಜಾರಿಗೊಳಿಸಿದೆ. ರೂಪಾಂತರಿ ಕೊರೋನ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಭಾರತ ಹಾಗೂ ಬ್ರಿಟನ್ ನಡುವೆ ಸ್ಥಗಿತಗೊಳಿಸಲಾಗಿದ್ದ ವಿಮಾನಯಾನ ಸೇವೆಗಳು ಜನವರಿ 8ರಿಂದ ಪುನಾರಂಭಿಸಲಾಗುವುದು. ಡಿಸೆಂಬರ್ 21ರಿಂದ ಈ ಎರಡೂ ದೇಶಗಳ ನಡುವಿನ ಪ್ರಯಾಣಿಕ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿತ್ತು.

ಜನವರಿ 8 ಹಾಗೂ ಜನವರಿ 30ರ ನಡುವೆ ಬ್ರಿಟನ್‌ನಿಂದ ಆಗಮಿಸುವ ಪ್ರಯಾಣಿಕರನ್ನು ಸ್ವಯಂಪಾವತಿಯ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗುವುದು ಹಾಗೂ ಅವರು ಕಳೆದ 14 ದಿನಗಳಲ್ಲಿ ತಾವು ಕೈಗೊಂಡಿದ್ದ ಪ್ರಯಾಣದ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.

ವಿಮಾನ ನಿಲ್ದಾಣದ ಅಧಿಕಾರಿಗಳ ಸಹಕಾರದೊಂದಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಕಾಯುವ ಪ್ರಯಾಣಿಕರಿಗಾಗಿ ವಿಮಾನ ನಿಲ್ದಾಣಗಳಲ್ಲಿ ಸೂಕ್ತ ಏರ್ಪಾಡುಗಳನ್ನು ಮಾಡಲಾಗುವುದು, ಸೋಂಕು ದೃಢಪಟ್ಟವರನ್ನು ಪ್ರತ್ಯೇಕವಾಗಿರಿಸಲು ಕೂಡಾ ವ್ಯವಸ್ಥೆಗಳನ್ನು ರೂಪಿಸಲಾಗುವುದು ಎಂದು ಹೇಳಿಕೆ ತಿಳಿಸಿದೆ.

ಬ್ರಿಟನ್‌ನಿಂದ ಆಗಮಿಸುವ ವ್ಯಕ್ತಿಗಳ ಆರ್‌ಟಿ-ಪಿಸಿಆರ್ ಪರೀಕ್ಷೆಗಳು ನೆಗೆಟಿವ್ ಆಗಿದ್ದಲ್ಲಿ ಅವರನ್ನು 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರಿಸಲಾಗುವುದು. ಪರೀಕ್ಷೆಯಲ್ಲಿ ಪಾಸಿಟಿವ್ ಬಂದವರನ್ನು ಪ್ರತ್ಯೇಕವಾದ ಕೇಂದ್ರಗಳಲ್ಲಿ ಕ್ವಾರಂಟೈನ್‌ನಲ್ಲಿಡಲಾಗುವುದು.

ರೂಪಾಂತರಿ ವೈರಸ್ ಸೋಂಕಿತರಾದವರನ್ನು ಅವರ ಸ್ಯಾಂಪಲ್ ಪರೀಕ್ಷೆಗಳು ನೆಗೆಟಿವ್ ಬರುವವರೆಗೂ ಐಸೋಲೇಶನ್‌ನಲ್ಲಿರಿಸಲಾಗುವುದು. ಅವರೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರನ್ನೂ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

ಆರಂಭದಲ್ಲಿ ದಿಲ್ಲಿ,ಮುಂಬೈ, ಬೆಂಗಳೂರು, ಹೈದರಾಬಾದ್ ಹಾಗೂ ಚೆನ್ನೈ ವಿಮಾನನಿಲ್ದಾಣಗಳಿಗೆ ಮಾತ್ರ ಬ್ರಿಟನ್‌ನಿಂದ ವಿಮಾನಗಳ ಆಗಮನ, ನಿರ್ಗಮನಕ್ಕೆ ಅವಕಾಶ ನೀಡಲಾಗುವುದು ಎಂದು ಅದು ಹೇಳಿದೆ.

ಪ್ರಯಾಣಿಕರು ವಿಮಾನನಿಲ್ದಾಣಕ್ಕೆ ಆಗಮಿಸುವ ಕನಿಷ್ಠ 72 ತಾಸುಗಳ ಮೊದಲು ಆನ್‌ಲೈನ್ ಪೋರ್ಟಲ್‌ನಲ್ಲಿ ಸ್ವಯಂಘೋಷಣಾ ಪತ್ರವನ್ನು ಸಲ್ಲಿಸುವ ಅಗತ್ಯವಿದೆ. ಪ್ರಯಾಣವನ್ನು ಕೈಗೊಳ್ಳುವ 72 ತಾಸುಗಳ ಮೊದಲು ಅವರು ತಮಗೆ ನಡೆಸಲಾದ ನೆಗೆಟಿವ್ ಆರ್‌ಟಿ-ಪಿಸಿಆರ್ ಪರೀಕ್ಷೆಯ ವರದಿಯನ್ನು ಸಲ್ಲಿಸಬೇಕಾಗುತ್ತದೆ.

ಬ್ರಿಟನ್‌ನಲ್ಲಿ ಪತ್ತೆಯಾದ ರೂಪಾಂತರಿ ಕೊರೋನ ವೈರಸ್‌ನ ಹರಡುವಿಕೆಯನ್ನು ತಡೆಯಲು ಭಾರತವು ಡಿಸೆಂಬರ್ 21ರಂದು ಬ್ರಿಟನ್‌ನಿಂದ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಪಡಿಸಿತ್ತು. ರೂಪಾಂತರಿತ ವೈರಸ್ ಸಾಮಾನ್ಯ ಕೊರೋನ ವೈರಾಣುವಿಗಿಂತ ಶೇ.70ರಷ್ಟು ಅಧಿಕ ಹರಡುವ ಸಾಮರ್ಥ್ಯ ಹೊಂದಿದೆ. ಈವರೆಗೆ ಭಾರತದಲ್ಲಿ 29 ಮಂದಿಗೆ ರೂಪಾಂತರಿತ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X