Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಕೊನೆಗೊಂಡರೆ ಮತ್ತೊಮ್ಮೆ...

ಕೋವಿಡ್ ಕೊನೆಗೊಂಡರೆ ಮತ್ತೊಮ್ಮೆ ಚಿತ್ರಸಂತೆ ನಡೆಸಿ: ಸುಧಾಮೂರ್ತಿ

ವಾರ್ತಾಭಾರತಿವಾರ್ತಾಭಾರತಿ3 Jan 2021 9:01 PM IST
share
ಕೋವಿಡ್ ಕೊನೆಗೊಂಡರೆ ಮತ್ತೊಮ್ಮೆ ಚಿತ್ರಸಂತೆ ನಡೆಸಿ: ಸುಧಾಮೂರ್ತಿ

ಬೆಂಗಳೂರು, ಜ.3:ಕೋವಿಡ್ ತೀವ್ರತೆ ಕಡಿಮೆಯಾದ ನಂತರ ಬೇಸಿಗೆಗೆ ಮುನ್ನ ಮತ್ತೊಮ್ಮೆ ಭೌತಿಕವಾಗಿ ಚಿತ್ರಸಂತೆಯನ್ನು ಪರಿಷತ್ತು ನಡೆಸಬೇಕು ಎಂದು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಸಲಹೆ ನೀಡಿದರು.

ರವಿವಾರ ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಆಯೋಜಿಸಲಾಗಿದ್ದ 18ನೇ ಚಿತ್ರಸಂತೆಗೆ ವಿಡಿಯೋ ಸಂವಾದ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಚಿತ್ರಸಂತೆಯಲ್ಲಿ ನೇರವಾಗಿ ಭಾಗವಹಿಸುವುದಕ್ಕೂ ಆನ್‍ಲೈನ್ ಮೂಲಕ ಪಾಲ್ಗೊಳ್ಳುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಆನ್‍ಲೈನ್‍ನಲ್ಲಿ ನೋಡುವುದು ಸಂತೆಯ ಅನುಭವ ನೀಡುವುದಿಲ್ಲ. ಹಾಗಾಗಿ, ಮತ್ತೊಮ್ಮೆ ಭೌತಿಕವಾಗಿ ನಡೆಸುವಂತೆ ನುಡಿದರು.

ಕೋವಿಡ್‍ನಿಂದ ಚಿತ್ರಕಲಾವಿದರೂ ಸಂಕಷ್ಟದಲ್ಲಿದ್ದಾರೆ. ಅವರಿಗೆ ನೆರವು ನೀಡುವ ಕೆಲಸವಾಗಬೇಕು. ಕಲಾವಿದರಿಗೆ ನನ್ನಿಂದ ಯಾವ ರೀತಿಯ ಸಹಾಯ ಬೇಕಾಗುತ್ತದೆ ಎಂದು ತಿಳಿಸಿದರೆ, ನೆರವು ನೀಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮಾತನಾಡಿ, ರಾಜರಾಜೇಶ್ವರಿ ನಗರದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕಲಾ ಪರಿಷತ್‍ನ ನೂತನ ಸಂಕೀರ್ಣ ಅಭಿವೃದ್ಧಿಯಾಗಲು ದೇಣಿಗೆ ನೀಡುವ ಅಗತ್ಯವಿದೆ. ವೈಯಕ್ತಿಕವಾಗಿ ಸಂಘ ಸಂಸ್ಥೆಗಳು ಅದರ ಬೆಳವಣಿಗೆಗೆ ಸಹಾಯ ನೀಡಬೇಕು ಎಂದು ಮನವಿ ಮಾಡಿದರು.

ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ಪರಿಷತ್ತು ಅಭಿವೃದ್ಧಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 1 ಕೋಟಿ ರೂ. ಘೋಷಿಸಿದ್ದಾರೆ. ಅದನ್ನು ಬಿಡುಗಡೆಮಾಡಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಇದಕ್ಕೂ ಮುನ್ನ ಪರಿಷತ್ತು ಅಧ್ಯಕ್ಷ ಬಿ.ಎಲ್. ಶಂಕರ್, ನೇರವಾಗಿ ಹೆಚ್ಚು ಜನ ಸೇರಲು ಸಾಧ್ಯವಾಗದಿದ್ದರೂ ಆನ್‍ಲೈನ್‍ನಲ್ಲಿ ಹೆಚ್ಚು ಸ್ಪಂದನೆ ವ್ಯಕ್ತವಾಗಿದೆ. ಕಾರ್ಯಕ್ರಮದ ಪ್ರಾರಂಭದಲ್ಲಿ ಪ್ರತಿ ಸೆಕೆಂಡ್‍ಗೆ 84 ಜನ ವೀಕ್ಷಿಸುತ್ತಿದ್ದು, ಕೆಲವೇ ಗಂಟೆಗಳಲ್ಲಿ 60 ಸಾವಿರಕ್ಕೂ ಹೆಚ್ಚು ಜನ ಕಲಾಕೃತಿಗಳನ್ನು ನೋಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪಿ.ಸಿ.ಮೋಹನ್, ಶಾಸಕ ರಿಝ್ವ್ವಾನ್ ಆರ್ಷದ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X