ಸೌರವ್ ಗಂಗುಲಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ರವಿವಾರ ಭಾರತದ ಮಾಜಿ ನಾಯಕ ಸೌರವ್ ಗಂಗುಲಿಗೆ ಫೋನ್ ಕರೆ ಮಾಡಿ ಆರೋಗ್ಯ ವಿಚಾರಿಸಿದರಲ್ಲದೆ ಶೀಘ್ರವೇ ಚೇತರಿಸಿಕೊಳ್ಳುವಂತೆ ಹಾರೈಸಿದರು.
ಶನಿವಾರ ಬೆಳಗ್ಗೆ 11ಕ್ಕೆ ವ್ಯಾಯಾಮ ಮಾಡುತ್ತಿದ್ದಾಗ ಲಘು ಹೃದಯಾಘಾತಕ್ಕೊಳಗಾದ ಬಿಸಿಸಿಐ ಮುಖ್ಯಸ್ಥ ಗಂಗುಲಿ ಅವರನ್ನು ತಕ್ಷಣವೇ ಕೋಲ್ಕತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಗಂಗುಲಿ ಆ್ಯಂಜಿಯೋಪಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ.
Next Story





