ದ.ಕ.ಜಿಲ್ಲೆ: 30 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಜ.3: ದ.ಕ.ಜಿಲ್ಲೆಯಲ್ಲಿ ರವಿವಾರ 30 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 32,978 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.
ರವಿವಾರ 19 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಈವರೆಗೆ 31,868 ಮಂದಿಗೆ ನೀಡಿದ ಚಿಕಿತ್ಸೆ ಫಲಕಾರಿಯಾಗಿದೆ. ಜಿಲ್ಲೆಯಲ್ಲಿ 4,95,428 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 4,62,450 ಮಂದಿಯ ವರದಿ ನೆಗೆಟಿವ್ ಮತ್ತು 32,978 ಮಂದಿಯ ವರದಿ ಪಾಸಿಟಿವ್ ಆಗಿದೆ. ಅಲ್ಲದೆ 378 ಸಕ್ರಿಯ ಪ್ರಕರಣವಿದೆ. ಈವರೆಗೆ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ 732 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 19,543 ಮಂದಿಯ ವಿರುದ್ಧ ಮಾಸ್ಕ್ ಉಲ್ಲಂಘಿಸಿದ ಪ್ರಕರಣ ದಾಖಲಿಸಲಾಗಿದ್ದು, 20,73,928 ರೂ. ದಂಡವನ್ನು ವಸೂಲಿ ಮಾಡಲಾಗಿದೆ.
Next Story