ವಿಜಯನಗರ ಜಿಲ್ಲೆ ರಚನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು, ಜ.4: ಗ್ರಾಮ ಪಂಚಾಯತ್ ಚುನಾವಣೆ ವೇಳೆ ಸರಕಾರ ವಿಜಯನಗರ ಜಿಲ್ಲೆ ರಚನೆ ಮಾಡಿರುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿದೆ.
ಸರಕಾರದ ಪರ ವಾದಿಸಿದ ವಕೀಲ ವಿಕ್ರಮ್ ಹುಯಿಲ್ಗೋಳ್ ಅವರು, ಸರಕಾರ ಕರಡು ಅಧಿಸೂಚನೆಯನ್ನಷ್ಟೇ ಹೊರಡಿಸಿದೆ. ನೀತಿ ಸಂಹಿತೆ ವಿಚಾರ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ್ದು ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅರ್ಜಿದಾರರಿಗೆ ತಕರಾರಿದ್ದರೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲು ಸೂಚನೆ ನೀಡಿ, ಪಿಐಎಲ್ ವಜಾಗೊಳಿಸಿದೆ.
Next Story





