Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2023ರಲ್ಲಿ ಜೆಡಿಎಸ್ ಪಕ್ಷವನ್ನು...

2023ರಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕೊನೆಯುಸಿರೆಳೆಯುತ್ತೇನೆ: ಮಾಜಿ ಪ್ರಧಾನಿ ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ4 Jan 2021 8:22 PM IST
share
2023ರಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕೊನೆಯುಸಿರೆಳೆಯುತ್ತೇನೆ: ಮಾಜಿ ಪ್ರಧಾನಿ ದೇವೇಗೌಡ

ಕಡೂರು, ಜ.4: ದೇಶದ ಪ್ರಧಾನಿ ಹುದ್ದೆಯನ್ನು ಅಲಂಕರಿಸುತ್ತೇನೆ ಎಂದು ನಾನು ಕನಸಿನಲ್ಲಿಯೂ ನೆನಸಿರಲಿಲ್ಲ. ಹೋರಾಟ ಮಾಡುವ ಶಕ್ತಿಯನ್ನು ನನಗೆ ರಾಜ್ಯದ ಜನತೆ ನೀಡಿದ್ದು, ಜನರ ಮೇಲೆ ನನಗೆ ವಿಶ್ವಾಸವಿದೆ. ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕೊನೆಯುಸಿರೆಳೆಯುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ತಾಲೂಕಿನ ಬೀರೂರು ಪಟ್ಟಣದ ತರಳಬಾಳು ಕಲ್ಯಾಣ ಮಂಟಪದಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜಯ ಸಾಧಿಸಿದ ಜೆಡಿಎಸ್ ಬೆಂಬಲಿತ ಸದಸ್ಯರಿಗೆ ಹಮ್ಮಿಕೊಳ್ಳಲಾದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪಸಭಾಪತಿಗಳಾದ ಧರ್ಮೆಗೌಡ ಈ ಕಾರ್ಯಕ್ರಮದಲ್ಲಿ ಇಲ್ಲ ಎಂಬುದನ್ನು ನೆನೆದು ದುಃಖವಾಗುತ್ತಿದೆ. ವಿಧಾನಪರಿಷತ್ ನಲ್ಲಿ ನಡೆದ ಘಟನೆ ಸ್ವಾಭಿಮಾನಕ್ಕೆ ಧಕ್ಕೆ ಬಂದಿದ್ದರಿಂದ ಪ್ರಾಣ ಕಳೆದುಕೊಳ್ಳುವಂತಾಗಿದೆ. ನಮ್ಮ ಪಕ್ಷಕ್ಕೆ ಈ ದುರಂತ ನಷ್ಟವುಂಟುಮಾಡಿದೆ ಎಂದರು.

ಪ್ರಾದೇಶಿಕ ಪಕ್ಷವನ್ನು ಕಟ್ಟಿ ಬೆಳೆಸುವುದು ಉಳಿಸುವುದು ಬಹಳ ಕಷ್ಟ. ಕಳೆದ 50 ವರ್ಷಗಳ ರಾಜಕೀಯ ಜೀವನದಲ್ಲಿ ಹೋರಾಟ ಮಾಡುತ್ತಾ ಬರಲಾಗಿದೆ. ಪ್ರಾದೇಶಿಕ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ. ಅವರು ಇದೇ ಪಕ್ಷದಲ್ಲಿ ಬೆಳೆದು ಮುಂದೆ ಬಂದಂತವರಾಗಿರುತ್ತಾರೆ. ಜೆಡಿಎಸ್ ಪಕ್ಷದ ಬಗ್ಗೆ ಕಠಿಣ ಶಬ್ದ ಬಳಸಿ ಮಾತನಾಡುತ್ತಿದ್ದಾರೆ. ಈ ಪಕ್ಷವನ್ನು ಉಳಿಸಲು ಬಹಳ ಕಷ್ಟಪಟ್ಟಿದ್ದೇನೆ. ನಮ್ಮ ಪಕ್ಷದಲ್ಲಿ ಬೆಳೆದವರು ಕಾಂಗ್ರೆಸ್ ಬಿಜೆಪಿಯಲ್ಲೂ ಇದ್ದಾರೆ. 2023ರವರೆಗೆ ನಾನು ನಿಮ್ಮ ಜೊತೆ ಇರುತ್ತೇನೆ. ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿಯಾಗಿದೆ ಎಂದರು.

ರಾಜ್ಯಸಭಾ ಸದಸ್ಯನಾಗಿ ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಕ್ಷೇತ್ರಗಳಿಗೆ ನನ್ನ ಅನುದಾನವನ್ನು ನೀಡಲಾಗುವುದು. ಕೇಂದ್ರ ಸರಕಾರ ರಾಜ್ಯಸಭಾ ಸದಸ್ಯರಿಗೆ ಅನುದಾನ ನಿಗದಿಗೊಳಿಸಿರುತ್ತದೆ. ಇದರಲ್ಲಿ ಹೆಚ್ಚಿನ ಅನುದಾನವನ್ನು ಕಡೂರು ಕ್ಷೇತ್ರಕ್ಕೆ ನೀಡಲಾಗುವುದು. ಕಾರ್ಯಕರ್ತರ ಹೆಚ್ಚಿನ ಶ್ರಮದಿಂದ ಪಕ್ಷ ಗೆಲ್ಲಲು ಸಾಧ್ಯ. ಗೆದ್ದಿರುವ ಗ್ರಾಮ ಪಂಚಾಯತ್ ಸದಸ್ಯರು ನಮ್ಮ ಪಕ್ಷದ ಸೇನಾನಿಗಳು ಎಂದ ಅವರು, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರು ಹೋರಾಟ ಮಾಡುವುದರ ಮೂಲಕ ಕಡೂರು ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಅವರ ಗೆಲುವು ಖಚಿತ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಾಜಿ ಶಾಸಕ ವೈ.ಎಸ್.ವಿ.ದತ್ತ, ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳು ಇತರ ಅಭ್ಯರ್ಥಿಗಳ ಜೊತೆ ಭಾರಿ ಪೈಪೋಟಿ ನಡೆಸಿ ಗೆಲುವು ಸಾಧಿಸಿದ್ದಾರೆ. 49 ಗ್ರಾಮ ಪಂಚಾಯತ್‍ಗಳಲ್ಲಿ ಶೇ.50ರಷ್ಟು ಅಭ್ಯರ್ಥಿಗಳು ಗೆಲ್ಲುವ ನಿರೀಕ್ಷೆ ನಮ್ಮದಾಗಿತ್ತು. ಈಗ ಬಂದಿರುವ ನೂತನ ಸದಸ್ಯರುಗಳ ಸಂಖ್ಯೆ 185 ಇದೆ. ಕೆಲವರು ಕಾರ್ಯಕ್ರಮಕ್ಕೆ ಬಾರದಿದ್ದರೂ ಅವರೂ ಸೇರಿದಂತೆ 200 ಸದಸ್ಯರು ನಮ್ಮ ಪಕ್ಷದ ಬೆಂಬಲಿಗರಾಗಿರುತ್ತಾರೆ ಎಂದರು.

ಗ್ರಾ.ಪಂ. ನೂತನ ಸದಸ್ಯರು ದೊಡ್ಡ ಶಕ್ತಿಯಾಗಿರುತ್ತಾರೆ. ಇವರ ಮಹತ್ವ ಹೆಚ್ಚಿನದ್ದಾಗಿದೆ. ಅಲ್ಲಿಯ ಹುರಿಯಾಳುಗಳಾಗಿ ಕಾರ್ಯನಿರ್ವಹಿಸಲಿದ್ದು ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕಿದೆ. ಇತರೆ ಪಕ್ಷದವರು ಸುಳ್ಳು ಮಾಹಿತಿ ನೀಡಿ ಹೇಳಿಕೆ ನೀಡಿರುವುದು ಅಪಹಾಸ್ಯವಾಗಿದೆ. ಗ್ರಾಮಗಳ ಅಭಿವೃದ್ದಿಗೆ ಸಮಾಜ ಸೇವಕರಾಗಿ ನೂತನ ಸದಸ್ಯರು ದುಡಿಯಬೇಕಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಪುರಸಭಾ ಅಧ್ಯಕ್ಷ ಭಂಡಾರಿ ಶ್ರೀನಿವಾಸ್, ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್. ದೇವರಾಜ್, ಜಿಲ್ಲಾಧ್ಯಕ್ಷ ರಂಜನ್‍ ಅಜಿತ್‍ಕುಮಾರ್, ಚಂದ್ರಪ್ಪ, ತಾಲೂಕು ಅಧ್ಯಕ್ಷ ಕೆ.ಎಂ.ಮಹೇಶ್ವರಪ್ಪ, ಎಂ.ರಾಜಪ್ಪ, ಪ್ರೇಮ್‍ಕುಮಾರ್, ಬಾವಿಮನೆಮಧು, ಮುಬಾರಕ್, ಪುರಸಭಾ ಸದಸ್ಯ ಬಿ.ಆರ್.ಮೋಹನ್ ಕುಮಾರ್, ಬಿದರೆ ಜಗದೀಶ್ ಮತ್ತಿತರಿದ್ದರು.

1972ರಿಂದಲೂ ಚಿಕ್ಕಮಗಳೂರು ಜಿಲ್ಲೆಯ ಭಾಗದಲ್ಲಿ ಗಂಡೆದೆಯ ಹೋರಾಟಗಾರನಾಗಿದ್ದ ಎಸ್.ಆರ್.ಲಕ್ಷ್ಮಯ್ಯ ಅವರು ಜೆಡಿಎಸ್ ಪಕ್ಷವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅವರ ಋಣವನ್ನು ತೀರಿಸಲು ಅವರ ಮಗನಿಗೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ  ಮುಖ್ಯಮಂತ್ರಿಗೆ ಸರಿಸಮಾನವಾದ ವಿಧಾನಪರಿಷತ್ ಉಪಸಭಾಪತಿ ಸ್ಥಾನವನ್ನು ದೊರಕಿಸಿಕೊಡಲಾಗಿತ್ತು.
- ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X