ಉಡುಪಿ ಇನ್ಸ್ಪೆಕ್ಟರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ: ದೂರು
![ಉಡುಪಿ ಇನ್ಸ್ಪೆಕ್ಟರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ: ದೂರು ಉಡುಪಿ ಇನ್ಸ್ಪೆಕ್ಟರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ: ದೂರು](https://www.varthabharati.in/sites/default/files/images/articles/2021/01/4/273832-1609774070.jpg)
ಉಡುಪಿ, ಜ.4: ಉಡುಪಿ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಠಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಜುನಾಥ್ ಸಿಪಿಐ ಹೆಸರಿನಲ್ಲಿ ಜ.3ರಂದು ಮಧ್ಯರಾತ್ರಿ ವೇಳೆ ಫೇಸ್ ಬುಕ್ನಲ್ಲಿ ನಕಲಿ ಖಾತೆ ಸೃಷ್ಠಿಸಿದ ದುಷ್ಕರ್ಮಿ, ಅವರ ಮಿತ್ರ ಬಳಗಕ್ಕೆ ಫ್ರೆಂಡ್ಸ್ ರಿಕ್ವೆಸ್ಟ್ ಕಳುಸಿದ್ದ ಎನ್ನಲಾಗಿದೆ. ಬಳಿಕ ಅವರಿಗೆ ಸಂದೇಶ ಕಳುಹಿಸಿ ಹಣ ನೀಡುವಂತೆ ಮನವಿ ಮಾಡಿದ್ದನು ಎಂದು ದೂರಲಾಗಿದೆ.
ಈ ವಿಚಾರ ಮಂಜುನಾಥ್ ಅವರ ಗಮನಕ್ಕೆ ಬಂದಿದ್ದು, ಈ ಸಂಬಂಧ ನಕಲಿ ಖಾತೆಯನ್ನು ಅಲಿಸಿ ಹಾಕುವಂತೆ ಮತ್ತು ದುಷ್ಕರ್ಮಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮಂಜುನಾಥ್ ಇಂದು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಸೆನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story