ಪ.ಜಾತಿ, ಪಂಗಡದ ಕುಂದು ಕೊರತೆ ಸಭೆಗೆ ಅಹವಾಲು ಆಹ್ವಾನ
ಉಡುಪಿ, ಜ.4: ಜಿಲ್ಲಾಧಿಕಾರಿ ಅವರ ಸೂಚನೆಯಂತೆ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರು ಎಲ್ಲಾ ಇಲಾಖೆ ಗಳಿಗೆ ಸಂಬಂಧಪಟ್ಟ ಅಹವಾಲುಗಳಿದ್ದಲ್ಲಿ ಜನವರಿ 15ರೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಅಥವಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ, ಕುಂದಾಪುರ, ಕಾರ್ಕಳ ಇಲ್ಲಿಗೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Next Story





