ಅಕಾಡೆಮಿ ಪ್ರಶಸ್ತಿ, ಫೆಲೋಶಿಪ್‌ಗೆ ಅರ್ಜಿ ಆಹ್ವಾನ
ಉಡುಪಿ, ಜ.4: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು, ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಂಗ ಸಂಸ್ಥೆಯಾಗಿದ್ದು, ಅಕಾಡೆಮಿಯ ಪ್ರಸಕ್ತ ಸಾಲಿನ ವಿವಿಧ ಪ್ರಶಸ್ತಿ, ಫೆಲೋಶಿಪ್ ಮತ್ತು ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜ.28 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಮತ್ತು ಇತರೆ ವಿವರಗಳನ್ನು ಅಕಾಡೆಮಿಯ ವೆಬ್‌ಸೈಟ್ -kstacademy.in-ನಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080- 29721550/29721549ನ್ನು ಸಂಪರ್ಕಿಸುವಂತೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.
Next Story





