Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಸಂಕಲ್ಪ ಸಮಾವೇಶ’ದಲ್ಲಿ ಸೂಕ್ತ...

‘ಸಂಕಲ್ಪ ಸಮಾವೇಶ’ದಲ್ಲಿ ಸೂಕ್ತ ಕಾರ್ಯತಂತ್ರ: ಸಲೀಂ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ4 Jan 2021 10:11 PM IST
share
‘ಸಂಕಲ್ಪ ಸಮಾವೇಶ’ದಲ್ಲಿ ಸೂಕ್ತ ಕಾರ್ಯತಂತ್ರ: ಸಲೀಂ ಅಹ್ಮದ್

ಮಂಗಳೂರು, ಜ.4: ಮುಂಬರುವ ಉಪ ಚುನಾವಣೆ, ತಾಪಂ, ಜಿಪಂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದ್ದಾರೆ. ಅದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ರಾಜ್ಯದ ನಾಲ್ಕು ವಿಭಾಗಗಳಲ್ಲಿ ನಡೆಯಲಿರುವ ಪ್ರತಿನಿಧಿಗಳ ‘ಸಂಕಲ್ಪ ಸಮಾವೇಶ’ದಲ್ಲಿ ಸೂಕ್ತ ಕಾರ್ಯತಂತ್ರಗಳನ್ನು ರೂಪಿಸಲಾಗುವುದು ಎಂದುಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಬಂಟ್ವಾಳದಲ್ಲಿ ನಡೆಯಲಿರುವ ರಾಜ್ಯದ ಮೊದಲ ಪ್ರತಿನಿಧಿ ಸಮಾವೇಶದ ಸಿದ್ಧತೆ ಪರಿಶೀಲನೆಗೆ ಆಗಮಿಸಿದ ಅವರು ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಳೆದ ಗ್ರಾಪಂ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಹಣ ಬಳಕೆ, ಅಧಿಕಾರ ದುರುಪಯೋಗ ಮಾಡಿದರೂ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ಬೆಂಬಲಿಗ ಅಭ್ಯರ್ಥಿಗಳನ್ನು ಜನತೆ ಗೆಲ್ಲಿಸಿದ್ದಾರೆ. ಇದರಿಂದ ಬಿಜೆಪಿಯವರು ಭ್ರಮನಿರಸಗೊಂಡಿದ್ದಾರೆ. ಈ ಸರಕಾರ 2 ಸಾವಿರ ಕೋಟಿ ಹಗರಣ ಮಾಡಿದೆ ಎಂದು ಆರೋಪಿಸಿದ ಅವರು, ಗ್ರಾಮಾಂತರ ಭಾಗದಲ್ಲಿ ಕಾಂಗ್ರೆಸ್ ಮತ್ತೆ ಸುದೃಢವಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ 4 ಕಡೆಗಳಲ್ಲಿ ಸಂಕಲ್ಪ ಸಮಾವೇಶ ಮಾಡಿ ದೀರ್ಘ ಚರ್ಚೆ ನಡೆಸಿ, ರಣ ನೀತಿ ರೂಪಿಸುತ್ತೇವೆ ಎಂದರು.

ಪಕ್ಷ ಸಂಘಟನೆ ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳ ಆಡಳಿತ ವೈಫಲ್ಯದ ವಿರುದ್ಧ ಹೋರಾಟ, ಜನಜಾಗೃತಿಯ ಸಂಕಲ್ಪದ ಉದ್ದೇಶದಿಂದ ಜ.6ರಂದು ಮೈಸೂರು ವಿಭಾಗದ ಬಂಟ್ವಾಳದಲ್ಲಿ, 8ರಂದು ಬೆಂಗಳೂರು ವಿಭಾಗದ ಬೆಂಗಳೂರು ಗ್ರಾಮಾಂತರದಲ್ಲಿ, 11ರಂದು ಬೆಳಗಾವಿ ವಿಭಾಗದ ಹುಬ್ಬಳ್ಳಿ, 18ರಂದು ಕಲಬುರ್ಗಿ ವಿಭಾಗದ ಕಲಬುರಗಿಯಲ್ಲಿ ಸಂಕಲ್ಪ ಸಮಾವೇಶ ಜರುಗಲಿದೆ. ಈ ಎಲ್ಲ ಸಭೆಗಳಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಕಾರ್ಯಾಧ್ಯಕ್ಷರು, ಮುಖಂಡರು ಭಾಗವಹಿಸಲಿದ್ದಾರೆ. ಈ ಸಮಾವೇಶಗಳ ಬಳಿಕ ರಾಜ್ಯ ಸರ್ಕಾರದ ಭ್ರಷ್ಟಾಚಾರ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಡ್ರಗ್ಸ್ ಮಾಫಿಯಾ, ರೈತವಿರೋಧಿ ಕಾನೂನುಗಳ ವಿರುದ್ಧ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸಲೀಂ ಅಹಮ್ಮದ್ ಹೇಳಿದರು.

ಸಮಾವೇಶ ರೂಪುರೇಷೆ: ಸಂಕಲ್ಪ ಸಮಾವೇಶ ಬೆಳಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದ್ದು, 11.30ರಿಂದ ಗೋಷ್ಠಿ ಆರಂಭವಾಗಲಿದೆ. 11.30ರಿಂದ 2 ಗಂಟೆಯವರೆಗೆ ವಿಭಾಗ ಮಟ್ಟದಲ್ಲಿ ಬರುವ ಎಲ್ಲ ಬ್ಲಾಕ್, ಜಿಲ್ಲಾಧ್ಯಕ್ಷರೊಂದಿಗೆ ಚರ್ಚೆ, 2.30ರಿಂದ 4.30ರವರೆಗೆ ಶಾಸಕರು, ಮಾಜಿ ಶಾಸಕರು, ಹಿಂದಿನ ಚುನಾವಣಾ ಅಭ್ಯರ್ಥಿಗಳೊಂದಿಗೆ ಸಮಾವೇಶ, ಸಂಜೆ 4ರಿಂದ 5ರವರೆಗೆ ಕೆಪಿಸಿಸಿ ಮಾಜಿ ಪದಾಧಿಕಾರಿ ಗಳೊಂದಿಗೆ ಚರ್ಚೆ, 5.15ರಿಂದ 5.45ರವರೆಗೆ ಮುಂಚೂಣಿ ಘಟಕಗಳ ಮುಖಂಡರೊಂದಿಗೆ ಚರ್ಚೆ ನಡೆದು ಕೊನೆಗೆ 7.45ಕ್ಕೆ ಪಕ್ಷದ ಹಿರಿಯ ಮುಖಂಡರು ಮಾರ್ಗದರ್ಶನ ನೀಡಲಿದ್ದಾರೆ ಎಂದು ಅವರು ವಿವರಿಸಿದರು.

ರಾಜ್ಯದ ಪ್ರತಿ ಗ್ರಾಪಂ ಮಟ್ಟದಲ್ಲಿ ಈ ಬಾರಿ ನೂತನವಾಗಿ 25 ಮಂದಿ ಪದಾಧಿಕಾರಿಗಳನ್ನೊಳಗೊಂಡ ಪಕ್ಷದ ಸಮಿತಿಗಳನ್ನು ಜ.25ರೊಳಗೆ ರಚಿಸಲು ಉದ್ದೇಶಿಸಲಾಗಿದೆ. ಜತೆಗೆ ವಾರ್ಡ್ ಸಮಿತಿಗಳಿಗೆ ಆಯ್ಕೆಯೂ ನಡೆಯಲಿದೆ. ಇವರಡು ಸಮಿತಿಗಳ ರಚನೆಯ ಬಳಿಕ ಬೂತ್ ಸಮಿತಿಗೆ ಆಯ್ಕೆ ನಡೆಯಲಿದೆ. ಈ ಪದಾಧಿಕಾರಿಗಳಿಗೆ ಮುಂದಿನ ದಿನಗಳಲ್ಲಿ ತರಬೇತಿ ನೀಡಿ ಕೇಡರ್‌ಗಳಾಗಿ ರೂಪಿಸಲಾಗುವುದು ಎಂದು ಸಲೀಂ ಅಹ್ಮದ್ ತಿಳಿಸಿದರು.

ವಿಧಾನ ಪರಿಷತ್ ಉಪಾಧ್ಯಕ್ಷ ಧರ್ಮೇಗೌಡ ಆತ್ಮಹತ್ಯೆ ಪ್ರಕರಣ ನಿಜಕ್ಕೂ ನೋವು ತಂದಿದೆ. ಅನಾಗರಿಕರರಂತೆ ಬಿಜೆಪಿ ನಾಯಕರು ವರ್ತಿಸಿದ್ದು, ಈ ಅನಾಹುತಕ್ಕೆ ಅವರೇ ಕಾರಣ ಎಂದರು.

ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈಘಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಭಾಸ್ಕರ್ ಕೆ., ಮುಡಾ ಮಾಜಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ, ಮುಖಂಡರಾದ ಜಿ.ಎ. ಬಾವ, ಸದಾಶಿವ ಉಳ್ಳಾಲ್, ಸವಾದ್ ಸು್ಯ, ಟಿ.ಎಂ. ಶಹೀದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X