Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2020ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ...

2020ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ

ಡಾ.ಗಾಯತ್ರಿ ನಾವಡ, ಡಾ.ಬಸವರಾಜ ಸಬರದ ಅವರಿಗೆ ಜಾನಪದ ತಜ್ಞ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ4 Jan 2021 10:22 PM IST
share
2020ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ

ಚಾಮರಾಜನಗರ, ಜ.4: ಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, 30 ಜಿಲ್ಲೆಗಳ ತಲಾ ಒಬ್ಬ ಜಾನಪದ ಕಲಾವಿದರು ಹಾಗೂ ಇಬ್ಬರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಮಾತಾ ಬಿ. ಮಂಜಮ್ಮ ಜೋಗತಿ ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ಅಕಾಡೆಮಿಯ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ರಾಜ್ಯದ 30 ಜಿಲ್ಲೆಗಳ 30 ಹಿರಿಯ ಜಾನಪದ ಕಲಾವಿದರು ಹಾಗೂ ಇಬ್ಬರು ಜಾನಪದ ತಜ್ಞರನ್ನು ಆಯ್ಕೆ ಮಾಡಿರುವ ಪಟ್ಟಿ ಪ್ರಕಟಿಸಿದರು. 

ಬೆಂಗಳೂರು ಜಿಲ್ಲೆ ಎಂ.ಕೆ.ಸಿದ್ದರಾಜು-ಜಾನಪದಗಾಯನ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊನ್ನಗಂಗಮ್ಮ- ಸೋಬಾನೆಪದ, ರಾಮನಗರ ಜಿಲ್ಲೆ ತಿಮ್ಮಯ್ಯ-ತಮಟೆವಾದನ, ಕೋಲಾರ ಜಿಲ್ಲೆ ಕೆ.ಎನ್.ಚಂಗಪ್ಪ-ಭಜನೆತತ್ವಪದ, ಚಿಕ್ಕಬಳ್ಳಾಪುರ ಜಿಲ್ಲೆ ನಾರಾಯಣಪ್ಪ-ಕೀಲುಕುದುರೆ, ತುಮಕೂರು ಜಿಲ್ಲೆ ಸಿ.ವಿ.ವೀರಣ್ಣ-ವೀರಭದ್ರನ ಕುಣಿತ, ದಾವಣೆಗೆರೆ ಜಿಲ್ಲೆ ಭಾಗ್ಯಮ್ಮ-ಸೋಬಾನೆ ಹಾಡುಗಾರಿಕೆ, ಚಿತ್ರದುರ್ಗ ಜಿಲ್ಲೆ ಕೆಂಚಮ್ಮ-ಮದುವೆ ಹಾಡು, ಶಿವಮೊಗ್ಗ ಜಿಲ್ಲೆ ಕೆ.ಯುವರಾಜು-ಜಾನಪದ ಹಾಡುಗಾರಿಕೆ, ಮೈಸೂರು ಜಿಲ್ಲೆ ಕುಮಾರಸ್ವಾಮಿ- ಕಂಸಾಳೆ ಹಾಡುಗಾರಿಕೆ, ಮಂಡ್ಯ ಜಿಲ್ಲೆ ಭೂಮಿಗೌಡ-ಕೋಲಾಟ, ಹಾಸನ ಜಿಲ್ಲೆ ಗ್ಯಾರಂಟಿರಾಮಣ್ಣ- ಹಾಡುಗಾರಿಕೆ, ಚಿಕ್ಕಮಗಳೂರು ಜಿಲ್ಲೆ ಎಂ.ಸಿಭೋಗಪ್ಪ- ಚೌಡಿಕೆ ಪದ, ದಕ್ಷಿಣ ಕನ್ನಡ ಜಿಲ್ಲೆ ಗೋಪಾಲಕೃಷ್ಣ ಬಂಗೇರಾಮಧ್ವ-ಗೊಂಬೆ ಕುಣಿತ, ಉಡುಪಿ ಜಿಲ್ಲೆ ರಮೇಶ್ ಕಲ್ಮಾಡಿ-ಕರಗಕೋಲಾಟ.

ಕೊಡಗು ಜಿಲ್ಲೆ ಕೆ.ಕೆ.ಪೊನ್ನಪ್ಪ-ಬೋಳೋಪಾಟ್, ಚಾಮರಾಜನಗರ ಜಿಲ್ಲೆ ಹೊನ್ನಮ್ಮ-ಸೋಬಾನೆಪದ, ಬೆಳಗಾವಿ ಜಿಲ್ಲೆ ಮುತ್ತಪ್ಪ ಅಲ್ಲಪ್ಪ ಸವದಿ-ತತ್ವಪದ, ಧಾರವಾಡ ಜಿಲ್ಲೆ ಮಲ್ಲೇಶಪ್ಪ ಫಕ್ಕೀರಪ್ಪ ತಡಸದ-ತತ್ವಪದ, ವಿಜಯಪುರ ಜಿಲ್ಲೆ ಸುರೇಶ ರಾಮಚಂದ್ರ ಜೋಶಿ- ಡೊಳ್ಳಿನ ಹಾಡುಗಾರಿಕೆ, ಬಾಗಲಕೋಟೆ ಜಿಲ್ಲೆ ಕೃಷ್ಣಪ್ಪ ಮಲ್ಲಪ್ಪ ಬೆಣ್ಣೂರ-ತತ್ವಪದ ಮತ್ತು ಭಜನೆ, ಉತ್ತರ ಕನ್ನಡ ಜಿಲ್ಲೆ ಸಹದೇವಪ್ಪ ಈರಪ್ಪ ನಡಗೇರಾ-ಲಾವಣಿಪದ, ಹಾವೇರಿ ಜಿಲ್ಲೆ ಬಸವರಾಜ ತಿರುಕಪ್ಪ ಶಿಗ್ಗಾಂವಿ-ತತ್ವಪದ, ಗದಗ ಜಿಲ್ಲೆ ಮುತ್ತಪ್ಪ ರೇವಣಪ್ಪ ರೋಣದ-ಪುರುವಂತಿಕೆ, ಕಲಬುರಗಿ ಜಿಲ್ಲೆ ಸಾಯಬಣ್ಣ-ಹಲಗೆವಾದನ, ಬೀದರ ಜಿಲ್ಲೆ ವೈಜಿನಾಥಯ್ಯ ಸಂಗಯ್ಯಸ್ವಾಮಿ-ಚಕ್ರಿಭಜನೆ, ರಾಯಚೂರು ಜಿಲ್ಲೆ ಜಂಬಣ್ಣ-ಹಗಲುವೇಷ, ಕೊಪ್ಪಳ ಜಿಲ್ಲೆ ತಿಪ್ಪಣ ಅಂಬಾಜಿ ಸುಗತೇಕರ -ಗೋಂದಲಿಗರು, ಬಳ್ಳಾರಿ ಜಿಲ್ಲೆ ಗೋಂದಳಿ ರಾಮಪ್ಪ-ಗೋಂದಳಿಪದ, ಯಾದಗಿರಿ ಜಿಲ್ಲೆ ಗೋಗಿ ಬಸವ ಲಿಂಗಮ್ಮ-ಮದುವೆ ಹಾಡು ಇವರು ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 

ವಾರ್ಷಿಕ ಗೌರವ ಜಾನಪದ ತಜ್ಞ ಪ್ರಶಸ್ತಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ. ಜಾನಪದ ತಜ್ಞರಾದ ದಕ್ಷಿಣ ಕನ್ನಡ ಜಿಲ್ಲೆಯ ಡಾ. ಗಾಯತ್ರಿ ನಾವಡ ಅವರು ಡಾ. ಜೀ.ಶಂ.ಪ್ರಶಸ್ತಿಗೆ ಮತ್ತು ಕಲಬುರ್ಗಿ ಜಿಲ್ಲೆಯ ಬಸವರಾಜ ಸಬರದ ಅವರು ಡಾ. ಗದ್ದಗೀಮಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 

ಜಾನಪದ ಕಲಾವಿದರಿಗೆ ತಲಾ 25 ಸಾವಿರ ರೂ ಪ್ರಶಸ್ತಿ ಮೊತ್ತದ ಜೊತೆಗೆ ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ. ತಜ್ಞ ಪ್ರಶಸ್ತಿ ಪುರಸ್ಕೃತರಿಗೆ ತಲಾ 50 ಸಾವಿರ ರೂ ಪ್ರಶಸ್ತಿ ಮೊತ್ತದ ಜೊತೆಗೆ ಸ್ಮರಣಿಕೆ, ನೀಡಿ ಗೌರವಿಸಲಾಗುತ್ತದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ.ಮಂಜಮ್ಮ ಜೋಗತಿ ಅವರು ತಿಳಿಸಿದರು. 

ಜಾನಪದ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಚಾಮರಾಜನಗರದಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ಆಯೋಜಿಸಲಾಗುವುದು. ಸಮಾರಂಭದ ದಿನಾಂಕ ನಿಗದಿಯಾಗಬೇಕಿದೆ. ಸಮಾರಂಭಕ್ಕೆ ಜಿಲ್ಲಾಡಳಿತದ ಸಹಕಾರ ಅಗತ್ಯವೆಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ.ಮಂಜಮ್ಮ ಜೋಗತಿ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ, ಜಾನಪದ ಅಕಾಡೆಮಿಯ ಸದಸ್ಯ ಸಿ.ಎಂ. ನರಸಿಂಹಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಹೆಚ್.ಕೆ ಗಿರೀಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X