Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇರಳದಲ್ಲಿ ಹಕ್ಕಿಜ್ವರ: ಅಗತ್ಯ...

ಕೇರಳದಲ್ಲಿ ಹಕ್ಕಿಜ್ವರ: ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಕೊಡಗು ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ5 Jan 2021 9:06 PM IST
share
ಕೇರಳದಲ್ಲಿ ಹಕ್ಕಿಜ್ವರ: ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಕೊಡಗು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ, ಜ.5: ನೆರೆಯ ಕೇರಳ ರಾಜ್ಯದ ಕೊಟ್ಟಾಯಂ ಮತ್ತು ಅಲಪ್ಪುಝ ಜಿಲ್ಲಾ ವ್ಯಾಪ್ತಿಯ ಬಾತುಕೋಳಿಗಳಲ್ಲಿ ಕೋಳಿ ಶೀತಜ್ವರ ಕಂಡುಬಂದಿದ್ದು, ಈ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ.       

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕೋಳಿ ಶೀತ ಜ್ವರ (ಹಕ್ಕಿ ಜ್ವರ) ನಿಯಂತ್ರಣ ಸಂಬಂಧ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ ಭಾಗದಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿ, ಕೇರಳ ರಾಜ್ಯದಿಂದ ಕೊಡಗು ಜಿಲ್ಲೆಗೆ ಆಗಮಿಸುವ ಕೋಳಿ ಹಾಗೂ ಕುಕ್ಕುಟ ಉತ್ಪನ್ನಗಳ ಸಾಗಾಣಿಕೆಯ ವಾಹನಗಳನ್ನು ಪರಿಶೀಲಿಸುವುದರ ಜೊತೆಗೆ, ಸಾಗಾಣಿಕೆ ವಾಹನಗಳನ್ನು ಸ್ಯಾನಿಟೈಸರ್ ಮಾಡಿ ಜಿಲ್ಲೆಯ ಒಳಗೆ ಪ್ರವೇಶಿಸಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಚೆಕ್‍ಪೋಸ್ಟ್‍ಗಳ ಸ್ಥಾಪನೆ ಮತ್ತು ಅಗತ್ಯ ಸಹಕಾರಕ್ಕೆ ಅರಣ್ಯ, ಪೊಲೀಸ್, ಸಾರಿಗೆ ಇಲಾಖೆ ಅಧಿಕಾರಿಗಳು ಸಹಕಾರ ನೀಡಲಿದ್ದು, ಈ ಸಂಬಂಧ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

‘ಹಕ್ಕಿಜ್ವರ ನಿಯಂತ್ರಣ ಸಂಬಂಧ ಜಿಲ್ಲಾಡಳಿತ ಸರ್ಕಾರದ ಮಾರ್ಗಸೂಚಿಯಂತೆ ಗಡಿಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮನವಿ ಮಾಡಿದರು.

ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಸುರೇಶ್ ಭಟ್ ಅವರು ಪಶುಪಾಲನಾ ಇಲಾಖೆಯಿಂದ ಹಕ್ಕಿಜ್ವರ ನಿಯಂತ್ರಣ ಮತ್ತು ನಿರ್ವಹಣೆ ಮಾರ್ಗಸೂಚಿಯನ್ವಯ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರ್ಯಾಪಿಡ್ ರೆಸ್ಪಾನ್ಸ್ ತಂಡವನ್ನು ರಚಿಸಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯ ಕೇರಳ ರಾಜ್ಯದ ಗಡಿಭಾಗದಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು, ಅರಣ್ಯ, ಪೊಲೀಸ್, ಸಾರಿಗೆ, ಆರೋಗ್ಯ, ಪಂಚಾಯತ್ ರಾಜ್ ಇಲಾಖೆಗಳ ಸಹಕಾರ ಅತ್ಯಗತ್ಯ ಎಂದು ಅವರು ಕೋರಿದರು. ಅಸ್ವಾಭಾವಿಕವಾಗಿ ಕೋಳಿ ಅಥವಾ ವನ್ಯ ಪಕ್ಷಿಗಳ ಮರಣ ಕಂಡುಬಂದಲ್ಲಿ ಈ ಬಗ್ಗೆ ಗಮನಹರಿಸಿ ವರದಿ ಸಲ್ಲಿಸಲಾಗುವುದು ಎಂದರು.

ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಚಿದಾನಂದ ಅವರು ಹಕ್ಕಿಜ್ವರವು ಪಕ್ಷಿಗಳು ಹಾಗೂ ಕೋಳಿ ಮತ್ತಿತರ ಮೂಲಕ ಹರಡುವ ಸಾಧ್ಯತೆ ಇದ್ದು, ಕೇರಳ ರಾಜ್ಯದಲ್ಲಿ ಕಂಡು ಬಂದಿರುವುದರಿಂದ ಕೇರಳ ರಾಜ್ಯದ ಗಡಿಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೋಳಿ ಮತ್ತು ಪಕ್ಷಿಗಳ ರಕ್ತ ಹಾಗೂ ಇಕ್ಕೆ ಮಾದರಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಅವರು ಚೆಕ್ ಪೋಸ್ಟ್ ಗಳಲ್ಲಿ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸೂಕ್ಷ್ಮಾಣು ಜೀವಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ನಜೀಮ ತಬ್ಸೀರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರಾಲಿ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಪ್ರಸನ್ನ, ಡಾ.ಹರೀಶ್, ಡಾ.ಬಾದಾಮಿ ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X