Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಕ್ಫ್ ಬೋರ್ಡ್ ಆಸ್ತಿ ಸಂರಕ್ಷಣೆಗೆ...

ವಕ್ಫ್ ಬೋರ್ಡ್ ಆಸ್ತಿ ಸಂರಕ್ಷಣೆಗೆ ಒತ್ತು: ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಮ್

ವಾರ್ತಾಭಾರತಿವಾರ್ತಾಭಾರತಿ6 Jan 2021 12:37 AM IST
share
ವಕ್ಫ್ ಬೋರ್ಡ್ ಆಸ್ತಿ ಸಂರಕ್ಷಣೆಗೆ ಒತ್ತು: ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಮ್

ಮಡಿಕೇರಿ ಜ.5 : ರಾಜ್ಯದಲ್ಲಿ ವಕ್ಫ್ ಬೋರ್ಡ್ ಆಸ್ತಿ ಒಂದು ಲಕ್ಷ ಎಕರೆ ವರೆಗೆ ಒತ್ತುವರಿಯಾಗಿರುವ ಬಗ್ಗೆ ಮಾಹಿತಿ ಇದ್ದು, ಈ ಆಸ್ತಿಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಝೀಮ್ ಅವರು ತಿಳಿಸಿದ್ದಾರೆ.    

ನಗರದ ಅರಸು ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗವು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವುಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದು ಅವರು ಹೇಳಿದರು.   

ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಠಿಬದ್ಧವಾಗಿದೆ. ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವುದು, ಭ್ರಾತೃತ್ವ, ಸೌಹಾರ್ಧತೆ ಸಾಧಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಮಾಹಿತಿ ನೀಡಲಾಗುತ್ತದೆ ಎಂದು ಅಬ್ದುಲ್ ಅಝೀಮ್ ಅವರು ನುಡಿದರು. ಕೊಡಗು ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಉತ್ತಮವಾಗಿದ್ದು, ಜನರ ಸ್ಪಂದನೆ, ಒಡನಾಟ, ಸಹಕಾರ ಅತ್ಯುತ್ತಮವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.  

ಕಾನೂನು, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಖಂಡರ ಜೊತೆ ಸಭೆ ನಡೆಸಲಾಗಿದೆ. ಕೊಡ್ಲಿಪೇಟೆ, ಸೋಮವಾರಪೇಟೆ, ನಾಪೋಕ್ಲು ಹೀಗೆ ಜಿಲ್ಲೆಯ ಹಲವು ಭಾಗಗಳಿಂದ ಅಲ್ಪಸಂಖ್ಯಾತರ ಮುಖಂಡರನ್ನು ಆಹ್ವಾನಿಸಿ ಮುಖಂಡರ ಹಲವು ಸಲಹೆ, ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದು ತಿಳಿಸಿದರು.

ಸರ್ಕಾರ ಶಾಂತಿ ಸೌಹಾರ್ಧತೆಗೆ ಆದ್ಯತೆ ನೀಡಿದೆ. ಅಲ್ಪಸಂಖ್ಯಾತರ ಪ್ರತಿನಿಧಿಗಳ ಜೊತೆ ಚರ್ಚಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕ್ರಮ ವಹಿಸಲಾಗಿದೆ. ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದಿಸಿ, ಕಾಲ ಮಿತಿಯೊಳಗೆ ಪರಿಹರಿಸಲಾಗುವುದು ಎಂದರು. 

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ, ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲಾಗಿದೆ. ಆ ನಿಟ್ಟಿನಲ್ಲಿ ಕೋವಿಡ್-19 ಲಸಿಕೆಯನ್ನು ಪ್ರತಿಯೊಬ್ಬರೂ ಸರ್ಕಾರದ ನಿರ್ದೇಶನದಂತೆ ಪಡೆಯುವಂತಾಗಬೇಕು. ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಅಬ್ದುಲ್ ಅಝೀಮ್ ಅವರು ಮನವಿ ಮಾಡಿದರು.  

ದೇಶದಲ್ಲಿ ಕೊರೋನ ನಿಯಂತ್ರಿಸಲು ಕೊರೋನ ಲಸಿಕೆ ಪಡೆಯಬೇಕು. ಕೋವಿಡ್-19 ಲಸಿಕೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮ ಇರುವುದಿಲ್ಲ. ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಅಬ್ದುಲ್ ಅಝೀಮ್ ಅವರು ಕೋರಿದರು. 

ಸುದ್ದಿಗೋಷ್ಠಿಗೂ ಮೊದಲು ಅಲ್ಪಸಂಖ್ಯಾತರ ಮುಖಂಡರ ಪ್ರತಿನಿಧಿಗಳಿಂದ ಮಾಹಿತಿ ಪಡೆದರು. ಅಲ್ಪಸಂಖ್ಯಾತರ ಮುಖಂಡರಾದ ಜೋಚಿಮ್ ರೋಡ್ರಿಗ್ರಸ್ (Joachim Rodigurce) ಕೆ.ಎ.ಯಾಕೂಬ್, ಕೆ.ಟಿ.ಬೇಬಿ ಮ್ಯಾಥ್ಯೂ, ಜಾಮೀಯ ಮಸೀದಿ ಅಧ್ಯಕ್ಷರು ಇತರರು ಹಲವು ಮಾಹಿತಿ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X