Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೂತನ ಅನುಭವ ಮಂಟಪ ನಿರ್ಮಾಣಕ್ಕೆ...

ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಶಂಕುಸ್ಥಾಪನೆ

''ಎರಡು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ''

ವಾರ್ತಾಭಾರತಿವಾರ್ತಾಭಾರತಿ6 Jan 2021 1:06 PM IST
share
ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಶಂಕುಸ್ಥಾಪನೆ

ಬೀದರ್, ಜ.6: ಸಾವಿರಾರು ಬಸವ ಅನುಯಾಯಿಗಳ ಸಮ್ಮುಖದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜನವರಿ 6ರಂದು ಹಳೆಯ ಅನುಭವ ಮಂಟಪದ ಹತ್ತಿರದ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಇದು ಪೂರ್ವಜನ್ಮದ ಪುಣ್ಯ ಕಾರ್ಯ. ಅನುಭವ ಮಂಟಪ ನಿರ್ಮಾಣಕ್ಕೆ ಈಗಾಗಲೇ 100 ಕೋಟಿ ರೂ.ಬಿಡುಗಡೆ ಮಾಡಿದ್ದು, ಇನ್ನು 100 ಕೋಟಿ ರೂ.ಗಳನ್ನು ವಾರದೊಳಗೆ ಬಿಡುಗಡೆ ಮಾಡಿ, ಟೆಂಡರ್ ಪ್ರಕ್ರಿಯೆ ಪೂರ್ಣವಾದ ಕೂಡಲೆ ಕಟ್ಟಡ ನಿರ್ಮಾಣ ಕಾರ್ಯವನ್ನು ಶೀಘ್ರವೆ ಆರಂಭಿಸಲಾಗುವುದು ಎಂದು ತಿಳಿಸಿದರು.

ಕರ್ನಾಟಕದ ಇತಿಹಾಸದಲ್ಲಿ ಇಂದು ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತಹ ದಿನವಾಗಿದೆ ಎಂದ ಅವರು, ಸಾಧನೆ ಮಾತನಾಡಬೇಕು. ಮಾತಾಡುವುದು ಸಾಧನೆಯಾಗಬಾರದು ಎನ್ನುವುದು ತಮ್ಮ ಮನೋಭಾವವಾಗಿದೆ. ಮಾತು ಕೊಟ್ಟಂತೆ ನಡೆದುಕೊಂಡಿದ್ದೇವೆ. ಅಂತೆಯೇ ಎರಡು ವರ್ಷದೊಳಗೆ ಅನುಭವ ಮಂಟಪ ನಿರ್ಮಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಲೋಕಾರ್ಪಣೆಗೊಳಿಸಲಾಗುವುದು ಎಂದು ತಿಳಿಸಿದರು.

ಅವರು, ಇವರು ಎನ್ನದೆ ಎಲ್ಲ ಸಮುದಾಯದ ಜನರು ಸೇರಿ ಚರ್ಚಿಸಿ ಚಿಂತನ ಮಂಥನ ನಡೆಸುತ್ತಿದ್ದ ಅನುಭವ ಮಂಟಪವು ಆದರ್ಶ ಸಂಸತ್ತಿನ ಮಾದರಿಯಾಗಿದೆ. ಸಾಮಾಜಿಕ ಬದಲಾವಣೆ ತರುವಲ್ಲಿ ಅನುಭವ ಮಂಟಪದ ಪಾತ್ರವು ಅತೀ ಮಹತ್ವದ್ದಾಗಿದೆ. ಮನುಕುಲದ ಏಳ್ಗೆಗೆ ಇಡೀ ವಚನ ಸಾಹಿತ್ಯ ಮಾರ್ಗದರ್ಶಿಯಾಗಿದೆ. ಅಣ್ಣ ಬಸವಣ್ಣನವರು ಈ ಕಲ್ಯಾಣ ನಾಡಿನಿಂದ ಹೊರಹೊಮ್ಮಿದ ಈ ದೇಶ ಕಂಡ ಬಹುದೊಡ್ಡ ವಿಶ್ವಗುರು ಅನ್ನುವುದು ನಮಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಗೋ.ರು.ಚ ಅವರಂತಹ ಇನ್ನೂ ಅನೇಕ ಹಿರಿಯ ಸಾಹಿತಿಗಳ ಸಲಹೆ ಪಡೆದು, ಈ ಭಾಗದ ಜನರ ಬೇಡಿಕೆಯಂತೆ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ, ಪ್ರತಿ ವರ್ಷ ಬಸವ ಉತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು. ಇಂತಹ ಒಳ್ಳೆಯ ಕಾರ್ಯಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ಅನುಭವ ಮಂಟಪದ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ನನ್ನ ಬದುಕು ಪಾವನವಾಯ್ತು ಎಂದು ಹೇಳಲು ಹೆಮ್ಮೆ ಅನಿಸುತ್ತದೆ. ನಮ್ಮ ಜೀವನದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನವಾಗಿದೆ ಎಂದರು.

ಪ್ರಧಾನಮಂತ್ರಿ ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದಂತೆ, ಇಡೀ ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ಅನುಭವ ಮಂಟಪ ನಿರ್ಮಾಣಕ್ಕೆ ಇಂದು ಮುಖ್ಯಮಂತ್ರಿ ಭೂಮಿ ಪೂಜೆ ನೆರವೇರಿಸಿದ್ದು ಕೂಡ ಒಂದು ಐತಿಹಾಸಿಕ ಪ್ರಯತ್ನ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಮಾತನಾಡಿ, ಈ ಶರಣ ಕಾಯಕ ಭೂಮಿಯಲ್ಲಿ 12ನೆ ಶತಮಾನದ ವೈಭವವನ್ನು ಪುನರ್ ಸ್ಥಾಪಿಸುವ ಉದ್ದೇಶದಿಂದ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರು ಚಾಲನೆ ನೀಡಿದ್ದು, ಬೀದರ್ ಮತ್ತು ರಾಜ್ಯದ ಇತಿಹಾಸಿದ ಪುಟಗಳಲ್ಲಿ ದಾಖಲಾಗುವಂತದ್ದಾಗಿದೆ. ಶ್ರೀ ಚನ್ನಬಸವ ಪಟ್ಟದ್ದೇವರ ಸಂಕಲ್ಪ ಇಂದು ಕೂಡಿ ಬಂದಿದೆ. ಶ್ರೀ ಬಸವಲಿಂಗ ಪಟ್ಟದ್ದೇವರು ಸೇರಿದಂತೆ ಈ ಭಾಗದ ಎಲ್ಲ ಶ್ರೀಗಳ ಮತ್ತು ಜನರ ಆಶಯದಂತೆ ಕಾಮಗಾರಿ ಬೇಗ ಪೂರ್ಣವಾಗಲು ಶ್ರಮಿಸಲಾಗುವುದು ಎಂದರು.

ಶಾಸಕ ಈಶ್ವರ್ ಖಂಡ್ರೆ ಮಾತನಾಡಿ, ಇಂದು ಬಸವ ಅನುಯಾಯಿಗಳಿಗೆ ಸಂತೋಷದ ದಿನ. ಈ ಕಟ್ಟಡ ಬೇಗ ನಿರ್ಮಾಣವಾಗಬೇಕು. ಈ ಮೂಲಕ ಬಸವಕಲ್ಯಾಣದ ಕೀರ್ತಿ ವಿಶ್ವದೆಲ್ಲೆಡೆ ಹರಡಲಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ

ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯ ವಿಶೇಷ ಅಧಿಕಾರಿ ಡಾ.ಎಚ್.ಆರ್.ಮಹಾದೇವ್, ಅನುಭವ ಮಂಟಪದ ನಿರ್ಮಾಣಕ್ಕೆ ಸಂಬಂಧಿಸಿದ ತಜ್ಞರ ಸಮಿತಿಯ ಅಧ್ಯಕ್ಷ ಗೋ.ರು.ಚನ್ನಬಸಪ್ಪ, ಶಾಸಕ ಬಸವರಾಜ ಪಾಟೀಲ್ ಸೇಡಂ, ವಿವಿಧ ಸ್ವಾಮೀಜಿಗಳು, ಸಚಿವರು, ಸಂಸದರು, ಶಾಸಕರು, ಜಿಲ್ಲಾಧಿಕಾರಿ, ಜಿ.ಪಂ.ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X