Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡ್ರಗ್ಸ್ ಪ್ರಕರಣದ ಹಳೆ ಆರೋಪಿಗಳ ಪರೇಡ್ :...

ಡ್ರಗ್ಸ್ ಪ್ರಕರಣದ ಹಳೆ ಆರೋಪಿಗಳ ಪರೇಡ್ : ನೂತನ ಪೊಲೀಸ್ ಆಯುಕ್ತರಿಂದ ಸಲಹೆ, ಖಡಕ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ6 Jan 2021 2:35 PM IST
share
ಡ್ರಗ್ಸ್ ಪ್ರಕರಣದ ಹಳೆ ಆರೋಪಿಗಳ ಪರೇಡ್ : ನೂತನ ಪೊಲೀಸ್ ಆಯುಕ್ತರಿಂದ ಸಲಹೆ, ಖಡಕ್ ಎಚ್ಚರಿಕೆ

ಮಂಗಳೂರು, ಜ. 6: ಡ್ರಗ್ಸ್ ಸೇವನೆ ಮತ್ತು ಮಾರಾಟ ಪ್ರಕರಣಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ ಹಲವು ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಪರೇಡ್ ನಡೆಸುವ ಮೂಲಕ ನೂತನ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸಲಹೆ ಜೊತೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಇಂದು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ವ್ಯಸನ ಪ್ರಕರಣಗಳಲ್ಲಿ ಶಾಮೀಲಾದ ಆರೋಪಿಗಳ ಪರೇಡ್ ನಡೆಸಿ ಅವರೊಂದಿಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿದರು.

ಡ್ರಗ್ಸ್ ವ್ಯಸನಕ್ಕೆ ತುತ್ತಾದವರನ್ನು ಪತ್ತೆ ಹಚ್ಚಿದಾಗ, ಪೊಲೀಸರು ಬಂದು ಮನೆಯಲ್ಲಿ ವಿಚಾರಿಸುವುದು, ಇದರಿಂದ ಮನೆಯವರಿಗೆ ಮುಜಗರಕ್ಕೆ ಕಾರಣವಾಗಿ, ಮನೆಯವರು ಕೋರ್ಟ್ ಕಚೇರಿ ಅಲೆದಾಡುವಂತಾಗಲು ಅವಕಾಶ ನೀಡಬಾರದು. ಬದಲಾವಣೆ ಮಾಡಿಕೊಂಡು ಬದುಕು ಸಾಗಿಸಲು ಮುಂದಾಗಬೇಕು. ವ್ಯಸನ ಮುಂದುವರಿಸಿದರೆ ಕಾನೂನಿನ ಪ್ರಕಾರ ಏನೆಲ್ಲಾ ಮಾಡಲು ಸಾಧ್ಯವೋ ಅಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಮಾಜದಲ್ಲಿ ತಮ್ಮ ಸುತ್ತಮುತ್ತ ಇಂತಹ ದುಶ್ಚಟಗಳ ಬಗ್ಗೆ ಮಾಹಿತಿ ಇದ್ದಲ್ಲಿ, 112ಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಅಧಿಕಾರಿಗಳು ಕೂಡಾ ತಮ್ಮ ಠಾಣೆ ವ್ಯಾಪ್ತಿಯಲ್ಲಿ ಈ ನಿಟ್ಟಿನಲ್ಲಿ ಸೂಕ್ತ ನಿಗಾ ವಹಿಸಿ ವ್ಯಾಪ್ತಿಯನ್ನು ಡ್ರಗ್ಸ್ ಮುಕ್ತವಾಗಿಸಲು ಪ್ರಯತ್ನಿಸಬೇಕು. ದೇಶದಲ್ಲಿ ಗೆದ್ದಲು ರೀತಿಯಲ್ಲಿ ಹರಡಿರುವ ಈ ಪಿಡುಗನ್ನು ನಾವೆಲ್ಲರೂ ಎದುರಿಸಬೇಕಾಗಿದೆ. ಇದಕ್ಕಾಗಿ ಅಧಿಕಾರಿಗಳ ಜತೆ ಪ್ರತ್ಯೇಕ ಸಭೆಯನ್ನೂ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಈ ಸಂದರ್ಭ ತಿಳಿಸಿದರು.

ಡ್ರಗ್ಸ್ ಸೇವನೆ ಹಾಗೂ ಅಡ್ಡಾಗಳ ಮೇಲೆ ಅಧಿಕಾರಿಗಳು ನಿಗಾ ಇರಿಸಬೇಕು. ವ್ಯಸನಿಗಳು ಪತ್ತೆಯಾದಾಗ ಅವರ ಕುಟುಂಬದವನ್ನು ಸಂಪರ್ಕಿಸಿ ಮಾಹಿತಿಯನ್ನು ಕಲೆ ಹಾಕಬೇಕು. ಮನೆಯವರಿಗೆ ತಿಳುವಳಿಕೆ ನೀಡಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಸ್ಸು ನಿಲ್ದಾಣ, ಮೈದಾನಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಹೊತ್ತು ಕುಡಿಯುವುದು, ಸಾರ್ವಜನಿಕರಿಗೆ ತೊಂದರೆ ಕೊಡುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು. ನಿನ್ನೆ ರಾತ್ರಿ ಮತ್ತೆ ಮದ್ಯಪಾನ ನಿರತರಾಗಿದ್ದ 6 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಲ್ಲಿ ತಮ್ಮ ಕೆಟ್ಟ ಹವ್ಯಾಸವನ್ನು ಬಿಟ್ಟು ಉತ್ತಮವಾಗಿ ಬದುಕಲು, ಉದ್ಯೋಗಕ್ಕೆ ಮುಂದಾಗುವುದಿದ್ದಲ್ಲಿ ನಮಗೆ ತಿಳಿಸಿದರೆ ಕ್ರಮ ವಹಿಸಲಾಗುವುದು ಎಂದು ಮಿಷನರ್ ಶಶಿಕುಮಾರ್ ತಿಳಿಸಿದರು.

ನಿಮ್ಮಿಂದ ಕುಟುಂಬಕ್ಕೆ ಕೋರ್ಟ್ ಕಚೇರಿ ಅಲೆಯುವಂತೆ ಮಾಡದಿರಿ

ಪರೇಡ್ ಸಂದರ್ಭ ಆರೋಪಿಗಳನ್ನು ಮಾತನಾಡಿಸುತ್ತಾ, ವಿದ್ಯಾರ್ಥಿಗಳನ್ನು ಗದರುತ್ತಾ ವಿದ್ಯಾರ್ಥಿ ಜೀವನಕ್ಕೆ ಒತ್ತು ನೀಡುವಂತೆ ಸಲಹೆ ನೀಡಿದರು. ನಿಮ್ಮಿಂದ ನಿಮ್ಮ ಕುಟುಂಬ, ಪೋಷಕರನ್ನು ಪೊಲೀಸ್ ಠಾಣೆ, ಕೋರ್ಟ್ ಕಚೇರಿಗಳಿಗೆ ಅಲೆದಾಡುವಂತೆ ಮಾಡಬೇಡಿ. ನಾವು ಸಣ್ಣದಿರುವಾಗ ನಿಮ್ಮ ಹಾಗೆ ವಿದ್ಯಾರ್ಥಿಗಳಾಗಿದ್ದು, ಯುವಕರಾಗಿದ್ದು ಜೀವನ ಸಾಗಿಸಿ ಬಂದವರು. ನಮ್ಮ ಮನೆಯ ಸುತ್ತಮುತ್ತ ಪೊಲೀಸರು ಬಂದರೆಂದರೆ ನಮಗೆ ಅಂಜಿಕೆ ಆಗುತ್ತಿತ್ತು. ಇದೀಗ ನಿಮ್ಮಿಂದಾಗಿ ಅಂತಹ ಅಂಜಿಕೆ, ತೊಂದರೆಗೆ ನಿಮ್ಮ ಪೋಷಕರನ್ನು ಸಿಲುಕಿಸಬೇಡಿ ಎಂದ ಪೊಲೀಸ್ ಆಯುಕ್ತರು, ಪೋಷಕರು ಕೂಡಾ ತಮ್ಮ ಮಕ್ಕಳ ತಪ್ಪುಗಳಿಗೆ ಪ್ರೋತ್ಸಾಹ ಅಥವಾ ಬೆಂಬಲ ನೀಡದೆ ಅವರು ಸರಿದಾರಿಗೆ ಬರುವಲ್ಲಿ ಸಹಕರಿಸಬೇಕು ಎಂದರು. ಈ ಸಂಧರ್ಭ ಡಿಸಿಪಿ ವಿನಯ್ ಗಾಂವ್ಕರ್ ಹಾಗೂ ಎಸಿಪಿಗಳು ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪರೇಡ್ ಜತೆ ಮಾರ್ಚ್ ಫಾಸ್ಟ್...!

ಪರೇಡ್ ಬಳಿಕ ಮೈದಾನದಲ್ಲಿ ಠಾಣಾ ವ್ಯಾಪ್ತಿಯಂತೆ ಆರೋಪಿಗಳನ್ನು ಮೈದಾನಕ್ಕೆ ಸುಮಾರು 3 ಸುತ್ತುಗಳ ಮಾರ್ಚ್‌ಫಾಸ್ಟನ್ನು ಕೂಡಾ ಪೊಲೀಸ್ ಆಯುಕ್ತ ಶಶಿಕುಮಾರ್ ನಡೆಸಿದರು.

''3 ವರ್ಷಗಳಲ್ಲಿ 150ಕ್ಕೂ ಅಧಿಕ ಮಂದಿ ಮಾರಾಟಗಾರರು, 350ಕ್ಕೂ ಅಧಿಕ ಮಂದಿ ಡ್ರಗ್ಸ್ ಸೇವಿಸುವವರ ವಿರುದ್ಧ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಕಳೆದ ಎರಡು ದಿನಗಳಿಂದ ಹಳೆ ಆರೋಪಿಗಳ ಮನೆಗಳಿಗೆ ಪೊಲೀಸರು ತೆರಳಿ ಅವರನ್ನು ಪೆರೇಡ್‌ಗೆ ಕರೆಸಿಕೊಂಡು ವಿಚಾರಣೆ ನಡೆಸಿ ಅವರಿಂದ ಮಾಹಿತಿಯನ್ನು ಕಲೆ ಹಾಕಲಾಗಿದೆ. ಇಂದು 140ಕ್ಕೂ ಅಧಿಕ ಮಂದಿ ಪರೇಡ್‌ನಲ್ಲಿ ಭಾವಹಿಸಿದ್ದು, ಅವರಲ್ಲಿ ಕೆಲವರ ಮೇಲೆ 15ಕ್ಕೂ ಅಧಿಕ ಪ್ರಕರಣಗಳಿವೆ. ರೌಡಿ ಶೀಟರ್‌ಗಳಾಗಿದ್ದು ಮನ ಪರಿವರ್ತನೆ ಮಾಡಿಕೊಂಡು ಸಮಾಜದಲ್ಲಿ ಉತ್ತಮರಾಗಿ ಬದುಕುತ್ತಿರುವವರ ಮೇಲಿನ ಪ್ರಕರಣವನ್ನು ಹಿಂಪಡೆಯಲು ಕೂಡಾ ಕ್ರಮ ವಹಿಸಲಾಗುವುದು.
- ಎನ್. ಶಶಿಕುಮಾರ್, ಕಮಿಷನರ್, ಪೊಲೀಸ್ ಕಮಿಷನರೇಟ್, ಮಂಗಳೂರು.''

''ಡ್ರಗ್ಸ್ ವ್ಯಸನವು ಮಹಿಳೆಯರ ಮೇಲಿನ ದೌರ್ಜನ್ಯ, ಹಲ್ಲೆ ಪ್ರಕರಣಗಳಿಗೆ ಕಾರಣವಾಗುತ್ತಿದೆ. ಅಪ್ರಾಪ್ತರನ್ನು ಡ್ರಗ್ಸ್ ವ್ಯಸನಿಗಳನ್ನಾಗಿ ಅವರಿಂದ ಅಪರಾಧ ಪ್ರಕರಣಗಳನ್ನು ನಡೆಸುತ್ತಿರುವುದೂ ನಡೆಯುತ್ತಿದೆ. ಇವೆಲ್ಲದರ ಮೇಲೆ ಗಮನ ಹರಿಸಲಾಗಿದೆ. ಜತೆಗೆ ಡಾರ್ಕ್ ವೆಬ್‌ಗಳ ಮೂಲಕ ಡ್ರಗ್ಸ್ ಪೂರೈಕೆ ಜಾಲವೂ ಸಕ್ರಿಯವಾಗಿರುವ ಬಗ್ಗೆ ನಿಗಾ ವಹಿಸಲಾಗಿದೆ. ಈಗಾಗಲೇ ಕಾಲೇಜುಗಳು ಕೂಡಾ ಆರಂಭವಾಗಿರುವುದರಿಂದ ಡ್ರಗ್ಸ್ ಮಾರಾಟ, ಸೇವನೆ ಮತ್ತು ಪೂರೈಕೆ ಬಗ್ಗೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು''.

- ಹರಿರಾಂ, ಡಿಸಿಪಿ, ಪೊಲೀಸ್ ಕಮಿಷನರೇಟ್, ಮಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X