Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಕ್ಕಿ ಜ್ವರ ಭೀತಿ: ರಾಜ್ಯದ ಎಲ್ಲಾ...

ಹಕ್ಕಿ ಜ್ವರ ಭೀತಿ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಹೈ ಅಲರ್ಟ್ ಘೋಷಣೆ- ಸಚಿವ ಪ್ರಭು ಚೌಹಾಣ್

ವಾರ್ತಾಭಾರತಿವಾರ್ತಾಭಾರತಿ6 Jan 2021 6:02 PM IST
share
ಹಕ್ಕಿ ಜ್ವರ ಭೀತಿ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಹೈ ಅಲರ್ಟ್ ಘೋಷಣೆ- ಸಚಿವ ಪ್ರಭು ಚೌಹಾಣ್

ಬೆಂಗಳೂರು, ಜ. 6: ಕೇರಳದ ಆಲಪ್ಪುಝ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಬಾತುಕೋಳಿಗಳಲ್ಲಿ ಕೋಳಿಶೀತ/ ಹಕ್ಕಿಜ್ವರವು (H5N8) ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿಯೂ ರೋಗ ಕಾಣಿಸಿಕೊಳ್ಳುವ ಸಾಧ್ಯತೆಗಳಿರುವುದರಿಂದ ರೋಗೋದ್ರೇಕದ ನಿರ್ವಹಣೆಗೆ ಎಲ್ಲಾ ಜಿಲ್ಲೆಗಳಲ್ಲಿಯೂ ಹೈ ಅಲರ್ಟ್ ಘೋಷಿಸಲಾಗಿದ್ದು, ಕೋಳಿಶೀತ ಜ್ವರದ ಸರ್ವೇಕ್ಷಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ಸಿದ್ದತೆ ಮಾಡಿಕೊಳ್ಳಿ ಎಂದು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮತ್ತು ಪಶುವೈದ್ಯರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. 

ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ರಾಜ್ಯದ ಗಡಿಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಉಪನಿರ್ದೇಶಕರು ಕೋಳಿ ಶೀತ ಜ್ವರದ ಸಂಭಾವ್ಯ ರೋಗೋದ್ರೇಕವನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ರೋಗ ನಿಯಂತ್ರಣ ಸಮಿತಿಯ ಸಭೆ ಜರುಗಿಸಿ ಸೂಕ್ತ ಮುಂಜಾಗ್ರತಾ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಸದ್ಯ ರಾಜ್ಯದಲ್ಲಿ ಯಾವುದೇ ಪ್ರಕರಣಗಳು ಕಂಡುಬಂದಿಲ್ಲ. ಆದರೆ ಎಲ್ಲ ರೀತಿಯ ಎಚ್ಚರಿಗೆ ವಹಿಸಿ ರೋಗ ಲಕ್ಷಣ ಕಂಡುಬಂದಲ್ಲಿ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. 

ಕೇರಳ ರಾಜ್ಯದ ಗಡಿ ಭಾಗದಲ್ಲಿ ಕೂಡಲೇ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿ ಕೇರಳ ರಾಜ್ಯದಿಂದ ಕೋಳಿ / ಕುಕ್ಕುಟ ಹಾಗೂ ಕುಕ್ಕುಟ ಉತ್ಪನ್ನಗಳ ಸಾಗಾಣಿಕೆಯನ್ನು ನಿರ್ಬಂಧಿಸುವುದು ಹಾಗೂ ಕೇರಳ ರಾಜ್ಯದಿಂದ ಒಳ ಬರುವ ಕೋಳಿ ಸಾಗಾಣಿಕೆ ವಾಹನಗಳನ್ನು ನೈರ್ಮಲ್ಯೀಕರಿಸಿ (disinfection /Sanitization) ಒಳಬಿಡಲು ಸೂಚನೆ ನೀಡಲಾಗಿದೆ. ಅಲ್ಲದೇ ತೆಗೆದುಕೊಂಡ ಕ್ರಮಗಳ ದೈನಂದಿನ ವರದಿಯನ್ನು ಉಪನಿರ್ದೇಶಕರು, ಕೋಳಿ ರೋಗ ನಿರ್ಣಯ ಪ್ರಯೋಗಾಲಯದ ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ.

ಗಡಿ ಜಿಲ್ಲೆಗಳಲ್ಲಿ ಇರುವ ಕುಕ್ಕುಟ ಕ್ಷೇತ್ರಗಳಿಂದ ಪ್ರತಿ ವಾರ ರ್ಯಾಂಡಮ್ ಆಗಿ ತಲಾ 5 ಸೀರಂ ಮಾದರಿಗಳು, 5 ಕ್ಲೋಯಕಲ್/ ಟ್ರೇಕಿಯಲ್ ಮಾದರಿಗಳು ಮತ್ತು 5 ಪರಿಸರ ಮಾದರಿಗಳನ್ನು ಸಂಗ್ರಹಿಸಿ ಮುಂದಿನ ಆದೇಶದವರೆಗೆ ಬೆಂಗಳೂರಿನ ಪ್ರಾಣಿ ಆರೋಗ್ಯ & ಜೈವಿಕ ಸಂಸ್ಥೆ ಪ್ರಯೋಗಾಲಯಕ್ಕೆ ವಿಶ್ಲೇಷಣೆಗೆ ಸಲ್ಲಿಸಲು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಎಲ್ಲಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ, ಪಕ್ಷಿಧಾಮ ಹಾಗೂ ನೀರು ಸಂಗ್ರಹಣ ಸ್ಥಳಗಳ (Water Bodies) ಬಗ್ಗೆ ಹೆಚ್ಚಿನ ನಿಗಾ ವಹಿಸುವುದು. ಕೋಳಿಗಳು/ಹಿತ್ತಲ ಕೋಳಿಗಳು/ಹಕ್ಕಿಗಳು/ಕಾಡು ಹಕ್ಕಿಗಳು/ವಲಸೆ ಹಕ್ಕಿಗಳ ಯಾವುದೇ ಅಸ್ವಾಭಾವಿಕ ಮರಣ ಸಂಭವಿಸಿದಲ್ಲಿ ಅಥವಾ ರೋಗ ಲಕ್ಷಣಗಳು ಕಂಡುಬಂದಲ್ಲಿ, ಕೂಡಲೇ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ, ಕೋಳಿ ಶೀತ ಜ್ವರದ ಸಂಭವನೀಯತೆಯನ್ನು ಪರಿಗಣಿಸಿ, ಸಂಬಂಧಪಟ್ಟ ಪ್ರಯೋಗಾಲಯಕ್ಕೆ ವರದಿ ಮಾಡಿ, ರೋಗ ವಿಶ್ಲೇಷಣೆ ನೆಡಸುವ ಬಗ್ಗೆ ಕ್ರಮ ವಹಿಸುವುದು. ಹಾಗೂ ಜೈವಿಕ ಸುರಕ್ಷಾತಾ (Biosecurity) ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ ಎಂದು ಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X