ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ

ಉಡುಪಿ, ಜ.6: ವಾಯುಭಾರ ಕುಸಿತದ ಪರಿಣಾಮ ಉಡುಪಿ ಜಿಲ್ಲೆಯ ಹಲವೆಡೆ ಇಂದು ಸಂಜೆಯ ವೇಳೆ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಅಪರಾಹ್ನ ವೇಳೆ ಜಿಲ್ಲೆಯ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಅದರಂತೆ ಕಾರ್ಕಳ ಸೇರಿದಂತೆ ಕೆಲವು ಕಡೆಗಳಲ್ಲಿ ಹನಿಹನಿ ಮಳೆಯಾಗಿತ್ತು. ಸಂಜೆ ವೇಳೆ ಕುಂದಾಪುರ, ಕಾರ್ಕಳ, ಹೆಬ್ರಿ, ಕಾಪು, ಬ್ರಹ್ಮಾವರ ಸೇರಿದಂತೆ ಜಿಲ್ಲೆಯ ಹೆಚ್ಚಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿರುವುದು ಕಂಡುಬಂದಿದೆ.
ಹೆಬ್ರಿ, ಕಾರ್ಕಳ, ಉಡುಪಿಯಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆ ಯಾಗಿದೆ. ಈ ಅಕಾಲಿಕ ಮಳೆಯಿಂದಾಗಿ ಸಾರ್ವಜನಿಕರು, ದ್ವಿಚಕ್ರ ವಾಹನ ಸವಾರರು ತೊಂದರೆ ಅನುಭವಿಸಿದರು.
Next Story





