ಉಡುಪಿ, ಜ.6: ಶಿಕ್ಷಕ ರಾಜೇಶ ಸುವರ್ಣ ಆದಿಉಡುಪಿ(44) ಅಲ್ಪ ಕಾಲದ ಅಸೌಖ್ಯದಿಂದ ಜ.5ರಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಮಲ್ಪೆಯ ಫ್ಲವರ್ ಆಫ್ ಪ್ಯಾರಡೈಸ್ ಶಾಲೆ ಮತ್ತು ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಸುಮಾರು ಹತ್ತು ವರ್ಷ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು.
ಮೃತರು ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ.