Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ...

ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳ ಭದ್ರತೆಗೆ 'ಡಿಜಿ ಲಾಕರ್': ಡಿಸಿಎಂ ಅಶ್ವತ್ಥ ನಾರಾಯಣ

''ಕಾಗದ ರೂಪದ ಯಾವುದೇ ಶೈಕ್ಷಣಿಕ ದಾಖಲೆಗಳಿಗೆ ಇನ್ನು ಅವಕಾಶ ಇಲ್ಲ''

ವಾರ್ತಾಭಾರತಿವಾರ್ತಾಭಾರತಿ6 Jan 2021 8:43 PM IST
share
ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳ ಭದ್ರತೆಗೆ ಡಿಜಿ ಲಾಕರ್: ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು, ಜ.6: ಎಸೆಸೆಲ್ಸಿಯಿಂದ ಮೊದಲುಗೊಂಡು ಉನ್ನತ ಶಿಕ್ಷಣದ ಕೊನೆ ಹಂತದವರೆಗೂ ವಿದ್ಯಾರ್ಥಿಗಳ ಎಲ್ಲ ಸಮಗ್ರ ಶೈಕ್ಷಣಿಕ ದಾಖಲೆಗಳನ್ನು ಡಿಜಿ ಲಾಕರ್ ನಲ್ಲಿ ಭದ್ರವಾಗಿರಿಸುವ ಮಹತ್ವದ ಕಾರ್ಯಕ್ರಮ ಜಾರಿಗೆ ಮುಂದಾಗಿರುವ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮುಂದಿನ ದಿನಗಳಲ್ಲಿ ಯಾರೂ ದಾಖಲೆಗಳು ಕಳೆದುಹೋಗುತ್ತವೆ ಎಂದು ಭಯಪಡಬೇಕಿಲ್ಲ ಹಾಗೂ ತಮ್ಮ ದಾಖಲೆಗಳು ನಕಲಿಯಾಗುತ್ತವೆ ಎಂಬ ಆತಂಕವೂ ಇರುವುದಿಲ್ಲ ಎಂದು ಪ್ರಕಟಿಸಿದರು.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ‘ಶೈಕ್ಷಣಿಕ ಡಿಜಿ ಲಾಕರ್’ ವ್ಯವಸ್ಥೆ ರಾಜ್ಯದಲ್ಲಿ ಜಾರಿಗೆ ಬರುತ್ತದೆ. ಈ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ದಾಖಲೆಗಳು ಸುರಕ್ಷಿತವಾಗಿರುತ್ತವೆ ಹಾಗೂ ಉದ್ಯೋಗದಾತರಿಗೂ ಇವು ಸಿಗಲಿವೆ. ಇನ್ನು ಮುಂದೆ ಕಾಗದ ರೂಪದ ಯಾವುದೇ ಶೈಕ್ಷಣಿಕ ದಾಖಲೆಗಳಿಗೆ ಅವಕಾಶ ಇರುವುದಿಲ್ಲ ಎಂದು ಉಪಮುಖ್ಯಮಂತ್ರಿ ತಿಳಿಸಿದರು.

ರಾಜ್ಯದ ಶೈಕ್ಷಣಿಕ ಕ್ಷೇತ್ರವನ್ನು ಡಿಜಿಟಲ್‍ನತ್ತ ಕೊಂಡೊಯ್ಯುವ ಇನ್ನೊಂದು ಮಹತ್ವದ ಹೆಜ್ಜೆ ಎಂದಿರುವ ಅವರು, ಈ ಸಂಬಂಧ ವಿಕಾಸಸೌಧದಲ್ಲಿ ಬುಧವಾರ ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರ(National Academic Depository-NAD)ದ ಕೇಂದ್ರ ಮಟ್ಟದ ಅಧಿಕಾರಿಗಳು ಹಾಗೂ ರಾಜ್ಯದ ಶಿಕ್ಷಣ ಇಲಾಖೆಯ ವಿವಿಧ ಹಂತದ ಉನ್ನತ ಅಧಿಕಾರಿಗಳ ಜತೆ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.

ಈಗಾಗಲೇ ಕೇಂದ್ರ ಸರಕಾರದ ಮಟ್ಟದಲ್ಲಿ ಜಾರಿಯಾಗಿರುವ ಶೈಕ್ಷಣಿಕ ಡಿಜಿ ಲಾಕರ್ ವ್ಯವಸ್ಥೆಯನ್ನು ರಾಜ್ಯದಲ್ಲೂ ಜಾರಿಗೆ ತರಲು ನಿರ್ಧರಿಸಲಾಗಿದೆ. ಈ ಸಂಬಂಧ ನನ್ನ ನೇತೃತ್ವದಲ್ಲಿಯೆ ಉನ್ನತಾಧಿಕಾರ ಸಮಿತಿಯೊಂದನ್ನು ರಚನೆ ಮಾಡಲಾಗಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಕಾರ್ಯಕ್ರಮ ಅನುಷ್ಠಾನ ಪ್ರಗತಿಯನ್ನು ಪರಿಶೀಲನೆ ಮಾಡಲಾಗುವುದು. ಸರಕಾರಿ, ಖಾಸಗಿ ಸೇರಿದಂತೆ ಯಾವುದೇ ಪದವಿ ಪ್ರದಾನ ಮಾಡುವ ವಿಶ್ವವಿದ್ಯಾಲಯ, ಕಾಲೇಜು, ಡೀಮ್ಡ್ ಯುನಿವರ್ಸಿಟಿಗಳೂ ಸೇರಿದಂತೆ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಈ ವ್ಯವಸ್ಥೆಗೆ ಕಡ್ಡಾಯವಾಗಿ ಸೇರಿಕೊಳ್ಳಬೇಕು ಎಂದು ಅವರು ಸೂಚಿಸಿದರು.

ಏನಿದು ಶೈಕ್ಷಣಿಕ ಡಿಜಿ ಲಾಕರ್?: ಇದು ವಿದ್ಯಾರ್ಥಿಗಳ ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹ ಮಾಡುವ ವ್ಯವಸ್ಥೆ. ಇದಕ್ಕೆ ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರ ಎಂದು ಕರೆಯಲಾಗುತ್ತದೆ. ಕೇಂದ್ರ ಸರಕಾರದ ಉಸ್ತುವಾರಿಯಲ್ಲಿ ಇದು ಕೆಲಸ ಮಾಡುತ್ತದೆ. ಸಂಗ್ರಹಣಾ ಸ್ಥಳವನ್ನು ಈ ಸಂಸ್ಥೆಯೆ ಒದಗಿಸುತ್ತದೆ. ವಿದ್ಯಾರ್ಥಿಗಳ ಅಂಕಪಟ್ಟಿ, ಪದವಿ ಪ್ರಮಾಣ ಪತ್ರಗಳು, ವರ್ಗಾವಣೆ ಪತ್ರ ಸೇರಿದಂತೆ ಅವರ ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಇಲ್ಲಿ ಭದ್ರವಾಗಿ ಸಂಗ್ರಹಿಸಿಡಲಾಗಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ಹತ್ತನೇ ತರಗತಿ, ಪಿಯುಸಿ, ಡಿಗ್ರಿ, ಡಿಪ್ಲೋಮ, ಇಂಜಿನಿಯರಿಂಗ್, ಪದವಿ, ಸ್ನಾತಕೋತ್ತರ, ಐಟಿಐ ಸೇರಿದಂತೆ ಇನ್ನೂ ಅನೇಕ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ದಾಖಲೆಗಳು ಇಲ್ಲಿ ಸಂಗ್ರಹವಾಗುತ್ತವೆ. ತನ್ನ ದಾಖಲೆಗಳನ್ನು ಆಕ್ಸೆಸ್ ಮಾಡಲು ಪ್ರತಿ ವಿದ್ಯಾರ್ಥಿಗೂ ಅವಕಾಶ ಇರುತ್ತದೆ. ಯಾವಾಗ ಬೇಕಾದರೂ ಅವುಗಳನ್ನು ನೋಡಿಕೊಳ್ಳಬಹುದು. ಜತೆಗೆ, ಆ ವಿದ್ಯಾರ್ಥಿಯ ಉದ್ಯೋಗದಾತನೂ ಆ ಉದ್ಯೋಗ ನೀಡುವುದಕ್ಕೆ ಮುನ್ನ ಪರಿಶೀಲನೆ ಮಾಡಬಹುದು. ಇಲ್ಲಿ ಎಲ್ಲ ದಾಖಲೆಗಳು ಸುರಕ್ಷಿತವಾಗಿರುತ್ತವೆ ಹಾಗೂ ಕದಿಯುವ ಅಥವಾ ಕಳುವಾಗುವ ಅವಕಾಶ ಇರುವುದೇ ಇಲ್ಲ. ನಕಲು ಮಾಡುವ ಸಾಧ್ಯತೆಯೂ ಇರುವುದಿಲ್ಲ. ಮಳೆ, ಗಾಳಿಗೆ ಸಿಕ್ಕಿ ಹಾಳಾಗುತ್ತವೆ ಎನ್ನುವ ಭಯವೂ ಇರುವುದಿಲ್ಲ ಎಂದು ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ರಾಜ್ಯದಲ್ಲಿ 2003ರಿಂದಲೆ ಎಸೆಸೆಲ್ಸಿ ಅಂಕಪಟ್ಟಿಯನ್ನು, 2008ರಿಂದ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡಿಜಿಟಲೀಕರಣ ಮಾಡಲಾಗಿದೆ. ಆಗಿನಿಂದ ಮುದ್ರಿತ ಅಂಕಪಟ್ಟಿಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದರೂ ಆ ದತ್ತಾಂಶ ನಮ್ಮಲ್ಲಿ ಇದೆ. ಆ ದತ್ತಾಂಶವನ್ನು ಈಗ ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರ ಪೋರ್ಟಲ್‍ಗೆ ಅಪ್‍ಲೋಡ್ ಮಾಡಲಾಗುವುದು ಎಂದು ಅವರು ಹೇಳಿದರು.

ಶೈಕ್ಷಣಿಕ ಡಿಜಿ ಲಾಕರ್ ಆಕ್ಸಸ್ ಹೇಗೆ?: ಈ ಲಾಕರ್ ನ ಪ್ರವೇಶ ಸುಲಭ. ಪ್ರತಿ ವಿದ್ಯಾರ್ಥಿಯೂ ತನ್ನ ಆಧಾರ್ ಸಂಖ್ಯೆ ಮೂಲಕ National Academic Depository-NAD ಪೋರ್ಟಲ್‍ಗೆ ನೋಂದಣಿ ಮಾಡಿಕೊಳ್ಳಬಹುದು. ಅದರಲ್ಲಿ ತನ್ನ ಇ-ಕೆವೈಸಿಯನ್ನು ತುಂಬಿ ಅಪ್‍ಲೋಡ್ ಮಾಡಿದ ನಂತರ ತನ್ನೆಲ್ಲ ದಾಖಲೆಗಳನ್ನು ಯಾವುದೇ ವಿದ್ಯಾರ್ಥಿಯೂ ಆಕ್ಸೆಸ್ ಮಾಡಬಹುದು. ಇನ್ನು ಎಲ್ಲ ವಿವಿಗಳು, ಶೈಕ್ಷಣಿಕ ಸಂಸ್ಥೆಗಳು ತಮ್ಮಲ್ಲಿ ವ್ಯಾಸಂಗ ಮಾಡಿ ಪದವಿ ಅಥವಾ ಯಾವುದೇ ಸರ್ಟಿಫಿಕೇಟ್ ಪಡೆದ ವಿದ್ಯಾರ್ಥಿಯ ಎಲ್ಲ ದಾಖಲೆಗಳನ್ನು ಡಿಜಿಟಲ್ ಸಹಿಯೊಂದಿಗೆ ಈ ಪೋರ್ಟಲ್‍ಗೆ ಅಪ್‍ಲೋಡ್ ಮಾಡಬೇಕು ಎಂದು ಅಶ್ವತ್ಥ ನಾರಾಯಣ ಹೇಳಿದರು.

ಹಣಕಾಸು ಹೊರೆ ಇಲ್ಲ: ನಮ್ಮ ವಿದ್ಯಾರ್ಥಿಗಳ ದಾಖಲೆಗಳಿಗೆ ಬೇಕಾದ ಸ್ಪೇಸ್ ಅನ್ನು ‘ಎನ್‍ಎಡಿ’ ನೀಡುತ್ತದೆ. ನಿರ್ವಹಣೆ ಮತ್ತು ಭದ್ರತೆಯ ಹೊಣೆಗಾರಿಕೆಯೂ ಆ ಸಂಸ್ಥೆಯದ್ದೇ. ಹೀಗಾಗಿ ರಾಜ್ಯಕ್ಕೆ ಹಣಕಾಸು ಹೊರೆ ಬೀಳುವುದಿಲ್ಲ. ನಮ್ಮ ಕಡೆಯಿಂದ ವಿದ್ಯಾರ್ಥಿಗಳ ದಾಖಲೆಗಳನ್ನು ಅಪ್‍ಲೋಡ್ ಮಾಡಿದರೆ ಸಾಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಇ-ಆಡಳಿತ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಪಿಯು ನಿರ್ದೇಶಕಿ ಸ್ನೇಹಲ್, ಪ್ರೌಢಶಿಕ್ಷಣ ಇಲಾಖೆಯ ನಿರ್ದೇಶಕಿ ಸುಮಂಗಲಾ ಹಾಜರಿದ್ದರು. ಎನ್‍ಎಡಿ ಪ್ರತಿನಿಧಿ ಅಮಿತ್ ದಿಲ್ಲಿಯಿಂದಲೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X