Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನುಭವ ಮಂಟಪವು ಮಾನವ ನಿರ್ಮಾಣ ಕಾರ್ಯ:...

ಅನುಭವ ಮಂಟಪವು ಮಾನವ ನಿರ್ಮಾಣ ಕಾರ್ಯ: ಸಾಹಿತಿ ಗೋ.ರು.ಚನ್ನಬಸಪ್ಪ ಬಣ್ಣನೆ

ವಾರ್ತಾಭಾರತಿವಾರ್ತಾಭಾರತಿ6 Jan 2021 9:41 PM IST
share

ಬೀದರ್, ಜ.6: ನೂತನ ಅನುಭವ ಮಂಟಪ ನಿರ್ಮಾಣ ಐತಿಹಾಸಿಕ ಪವಿತ್ರ ಕಾರ್ಯ. ಇದು ಕಟ್ಟಡ ನಿರ್ಮಾಣವಲ್ಲ, ಇದು ಮಾನವ ನಿರ್ಮಾಣ ಕಾರ್ಯ ಎಂದು ಸಾಹಿತಿ ಹಾಗೂ ಅನುಭವ ಮಂಟಪದ ನಿರ್ಮಾಣಕ್ಕೆ ಸಂಬಂಧಿಸಿದ ತಜ್ಞರ ಸಮಿತಿಯ ಅಧ್ಯಕ್ಷ ಗೋ.ರು.ಚನ್ನಬಸಪ್ಪ ಬಣ್ಣಿಸಿದರು.

ಬುಧವಾರ ನಗರದ ಬಸವಕಲ್ಯಾಣದಲ್ಲಿ ನಡೆದ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಭೂಮಿಪೂಜೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಡಿನ ಲಕ್ಷ ಲಕ್ಷ ಜನರು ಬಹುದಿನಗಳಿಂದ ನಿರೀಕ್ಷೆ ಇಟ್ಟುಕೊಂಡ ಕಾರ್ಯವು ಇಂದು ನಡೆದಿದೆ. ಕೆಲವು ವರ್ಷಗಳಿಂದ ವಿಳಂಬವಾಗಿದ್ದ ಈ ಅನುಭವ ಮಂಟಪ ನಿರ್ಮಾಣ ಕಾರ್ಯಕ್ಕೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೊದಲ ತಿಂಗಳಲ್ಲೆ ಘೋಷಣೆ ಮಾಡಿದ್ದಕ್ಕೆ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಅನುಭವ ಮಂಟಪ ನಿರ್ಮಾಣ ಸಮಿತಿಯ ವರದಿ ಮಾಡುವಾಗ ನಾಡಿನ ಅನೇಕ ಸಾಹಿತಿಗಳು, ಚಿಂತಕರು, ಎಲ್ಲ ಭಾಷಿಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ನೀಡಿದ ಸಹಕಾರವನ್ನು ನಾವು ಸ್ಮರಿಸಲೇಬೇಕು. ಬಸವಣ್ಣನವರ ಕಾಲದಲ್ಲಿ ಇದ್ದ ಸಾಮಾಜಿಕ ಮತ್ತು ಧಾರ್ಮಿಕ ಅಸಮಾನತೆಯ ವಿರುದ್ಧದ ಹೋರಾಟಕ್ಕೆ ಈ ಅನುಭವ ಮಂಟಪವು ತಳಹದಿಯಾಗಿತ್ತು ಎಂದು ಅವರು ಹೇಳಿದರು.

ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಕಷ್ಟು ಸುಧಾರಣೆ ಮಾಡಿದ, ಪ್ರಜೆಗಳನ್ನು ಒಳ್ಳೆಯವರನ್ನಾಗಿ ಮಾಡುವ ಕಾರ್ಯವನ್ನು ಅಂದು ಈ ಅನುಭವ ಮಂಟಪ ಮಾಡಿದೆ. ಯಾವುದೇ ಕ್ಷೇತ್ರದಲ್ಲಿನ ಆದೇಶ ನಿರೂಪಕರಿಗೆ, ಕಾರ್ಯ ನಿರ್ವಾಹಕರಿಗೆ ಸೂಕ್ತವಾದಂತಹ ಮಾರ್ಗದರ್ಶನ ನೀಡುವ ಕೇಂದ್ರ ಇದಾಗಬೇಕಿದೆ ಎಂದು ತಿಳಿಸಿದ ಅವರು, ಜಗತ್ತಿನ ಎಲ್ಲ ಚಿಂತಕರು ಇಲ್ಲಿ ಬರಬೇಕು. ಬೃಹತ್ ಶೈಕ್ಷಣಿಕ ಪ್ರವಾಸಿ ಕೇಂದ್ರ ಇದಾಗಬೇಕು ಎಂದು ತಿಳಿಸಿದರು.

ನುಡಿದಂತೆ ನಡೆದಿರುವುದು ಶರಣ ಸಂಸ್ಕೃತಿಯಾಗಿದೆ. ಈ ತತ್ವವನ್ನು ನಾವು ಅರ್ಥ ಮಾಡಿಕೊಂಡರೆ ಇಡೀ ಜಗತ್ತೆ ಸರಿ ಇರುತ್ತದೆ. ತಮಗೆ ಮೋಜಿಗೆ ಬೇಕಾದಷ್ಟು ಹಣ ಕೊಡಲಿಲ್ಲ ಎಂದು ಒಬ್ಬ ಯುವಕ ತಂದೆ ತಾಯಿಯನ್ನು ಕೊಲ್ಲುವ ಕಾಲದಲ್ಲಿ ನಾವಿದ್ದೇವೆ. ಇಂತಹ ಮನೋಭಾವವು ನಮ್ಮ ಇಡೀ ವ್ಯವಸ್ಥೆಯಲ್ಲಿ ಉಳಿದಿದೆ. ಈ ವ್ಯವಸ್ಥೆ ಬದಲಾಗಬೇಕಿದೆ ಎಂದು ಗೋ.ರು.ಚನ್ನಬಸಪ್ಪ ಹೇಳಿದರು.

ನನಗೂ ವಯಸ್ಸಾಗಿದೆ. ನಾನು ನೋಡಬಹುದೇ ಅನುಭವ ಮಂಟಪವನ್ನು ಎಂದು ಹೇಳಿದ ಗೋ.ರು.ಚ., ತಾವು ಸಲಹೆ ನೀಡಿದಂತೆ ನಾಡಿನಲ್ಲಿ ಈಗಾಗಲೇ ಜಾನಪದ ವಿಶ್ವವಿದ್ಯಾಲಯ ಕಾರ್ಯಾರಂಭಗೊಂಡಂತೆ ಅನುಭವ ಮಂಟಪ ನಿರ್ಮಾಣ ಕಾರ್ಯ ಕೂಡ ಬೇಗನೆ ಆಗಬೇಕು. ಇದನ್ನು ಸವಾಲಿನಂತೆ ಸ್ಚೀಕರಿಸಿ ಕಟ್ಟಡ ನಿರ್ಮಾಣ ಕಾರ್ಯವನ್ನು ಶೀಘ್ರ ಆರಂಭಿಸಬೇಕು ಎಂದರು.

ಚಿಂತಕ ಬಸವರಾಜ ಪಾಟೀಲ್ ಸೇಡಂ ಮಾತನಾಡಿ, ಎಲ್ಲರ ಸಹಕಾರ ಪಡೆದು ಅನುಭವ ಮಂಟಪ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವವರೆಗೂ ಶ್ರಮಿಸುವುದಾಗಿ ತಿಳಿಸಿದರು. ಅನುಭವ ಮಂಟಪದ ಅಧ್ಯಕ್ಷ ಭಾಲ್ಕಿಯ ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ದಿಲ್ಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಸತ್ತು ಭವನ ಉದ್ಘಾಟನೆ ವೇಳೆಯಲ್ಲಿ ಇಡೀ ಜಗತ್ತಿಗೆ ಸಂಸತ್ತು ನಿರ್ಮಾಣದ ಸಂದೇಶ ನೀಡಿದ ನೆಲ ಬಸವಕಲ್ಯಾಣ ಎಂದು ಹೇಳಿರುವುದು ಕಲ್ಯಾಣ ನಾಡಿನ ಮಹತ್ವವನ್ನು ತಿಳಿಸುತ್ತದೆ ಎಂದರು. ಬಸವ ಉತ್ಸವವನ್ನು ಆರಂಭಿಸಿದ ಕೀರ್ತಿ ಯಡಿಯೂರಪ್ಪನವರಿಗೆ ಸಲ್ಲುತ್ತದೆ ಎಂದರು.

ಸಮಾರಂಭದಲ್ಲಿ ಹಾರಕೂಡ ಡಾ.ಚನ್ನವೀರ ಶಿವಾಚಾರ್ಯರು, ಶಿವಾನಂದ ಸ್ವಾಮೀಜಿ, ರಾಜೇಶ್ವರ ಶಿವಾಚಾರ್ಯರು, ಅಕ್ಕ ಅನ್ನ ಪೂರ್ಣತಾಯಿ, ಅಕ್ಕ ಗಂಗಂಬಿಕಾ ತಾಯಿ, ಸಿದ್ಧರಾಮ ಶರಣರು, ಸಿದ್ಧರಾಮೇಶ್ವರ ಸ್ವಾಮೀಜಿ, ಗುರುಬಸವಲಿಂಗ ಪಟ್ಟದ್ದೇವರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X