Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೌರಿ ಹಸುವಿಗೆ ಸೀಮಂತದ ಸಂಭ್ರಮ

ಗೌರಿ ಹಸುವಿಗೆ ಸೀಮಂತದ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ6 Jan 2021 11:29 PM IST
share
ಗೌರಿ ಹಸುವಿಗೆ ಸೀಮಂತದ ಸಂಭ್ರಮ

ಮಣಿಪಾಲ: ಹೊಸಬೆಳಕು ಆಶ್ರಮದಲ್ಲಿ  ಆಶ್ರಯ ಪಡೆದಿರುವ ಗೌರಿ ಹಸುವಿಗೆ ಸೀಮಂತ ಶಾಸ್ತ್ರ ಕಾರ್ಯಕ್ರಮವು, ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಹಾಗೂ ಹೊಸಬೆಳಕು ಸೇವಾ ಟ್ರಸ್ಟ್ ಅವರ ಆಯೋಜನೆಯಲ್ಲಿ ಬುಧವಾರ ನಡೆಯಿತು. ಬಲು ಅಪರೂಪವಾಗಿ ನಡೆದಿರುವ, ಗೋವಿಗೆ ಬಯಕೆ ಇಡೆರಿಸುವ ಕಾರ್ಯಕ್ರಮವು ಗೋಪ್ರೇಮಕ್ಕೆ ಸಾಕ್ಷಿಯಾಯಿತು.

ಗೌರಿಯನ್ನು ಸ್ನಾನ ಮಾಡಿಸಿದ ಬಳಿಕ, ಅಲಂಕಾರಗೊಳಿಸಿದ ನಡಿಗೆ ಯಂತ್ರದ ಸಹಾಯದಿಂದ  ಮಂಟಪಕ್ಕೆ ಕರೆತರಲಾಯಿತು. ಗೌರಿ ಹಸುವಿಗೆ ಹಸಿರು ಬಣ್ಣದ  ಸೀರೆ ಉಡಿಸಲಾಯಿತು. ರವಿಕೆ ಕಣ, ಅಕ್ಕಿ, ತೆಂಗಿನಕಾಯಿ ಮೊದಲಾದ ಸಾಮಗ್ರಿಗಳೊಂದಿಗೆ ಮಡಿಲು ತುಂಬಿಸಲಾಯಿತು. ಮೊಳಕೆ ಬರಿಸಿದ ನವಧಾನ್ಯಗಳು, ವಿಧ ಹಿಂಡಿಗಳು, ಹಾಗೂ ಬಯಕೆಯ ಖಾದ್ಯಗಳನ್ನು ಬಡಿಸಲಾಯಿತು. ಪಂಚ ಮುತೈದರು ಆರತಿ ಬೆಳಗಿದರು.

ಮಣಿಪಾಲ ಜಿಲ್ಲಾಡಳಿತ ರಜತಾದ್ರಿ ಕಚೇರಿ ಬಳಿ, ಕಳೆದ ಇಪ್ಪತ್ತು ದಿನಗಳ ಹಿಂದೆ, ಅಪಘಾತದಿಂದ ಗಂಭೀರ ಗಾಯಗೊಂಡಿರುವ ವಾರಸುದಾರರು ಇಲ್ಲದ ದನವೊಂದು ಅಸಹಾಯಕ ಸ್ಥಿತಿಯಲ್ಲಿ ಕಂಡುಬಂದಿತು. ಸ್ಥಳೀಯ ರಿಕ್ಷಾ ಚಾಲಕರು ನೀಡಿರುವ ಮಾಹಿತಿ ಮೆರೆಗೆ, ಉಡುಪಿ ಜಿಲ್ಲಾ  ನಾಗರಿಕ ಸಮಿತಿಯ ಕಾರ್ಯಕರ್ತರು, ಗೋವನ್ನು ರಕ್ಷಿಸಿ, ಹೊಸ ಬೆಳಕು ಆಶ್ರಮದಲ್ಲಿ ಆಶ್ರಯ ಒದಗಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ದನದ ಚಿಕಿತ್ಸೆ, ಆರೈಕೆಯನ್ನು ಆಶ್ರಮ ಸಂಚಾಲಕ ವಿನಯಚಂದ್ರ ಅವರು ಮಾಡಿದ್ದರು. ನಡೆಯಲಾಗದ ಸ್ಥಿತಿಯಲ್ಲಿದ್ದ ದನಕ್ಕೆ, ಜಾನುವಾರುಗಳಿಗೆ ವಿಶೇಷವಾಗಿ ತಯಾರಿಸಿದ ನಡಿಗೆ ಯಂತ್ರವನ್ನು ಬಳಿಸಿಕೊಂಡು ಅವರು ದನವನ್ನು ನಡೆದಾಡುವಂತೆ ಮಾಡಿದ್ದಾರೆ. ಆಶ್ರಮವಾಸಿಗಳ ಪ್ರೀತಿಗೆ ಒಳಗಾದ ಗೋವಿಗೆ ಗೌರಿ ಎಂದು ನಾಮಕರಣಗೊಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸದಸ್ಯರಾದ ಕೆ. ಬಾಲಗಂಗಾಧರ ರಾವ್,  ತಾರಾನಾಥ್ ಮೇಸ್ತ ಶಿರೂರು, ಹೊಸಬೆಳಕು ಆಶ್ರಮದ ಸಂಚಾಲಕರಾದ ತನುಲಾ ತರುಣ್, ವಿನಯಚಂದ್ರ ಆಚಾರ್ಯ, ಮಾಂಡವಿ ಆಟೋ ನಿಲ್ದಾಣದ ಚಾಲಕರು ಉಪಸ್ಥಿತರಿದ್ದರು. ಶ್ರೀಧರ್ ಭಟ್ ಅವರು ಫಲಹಾರ ಒದಗಿಸಿದರು. ಕಾರ್ಯಕ್ರಮದ ಆಯೋಜನೆಯಲ್ಲಿ ವಿಷ್ಣು, ಅಶೋಕ್ ಪೈ, ಸುಶೀಲಾ ರಾವ್ ಉಡುಪಿ, ಹರಿಕೃಷ್ಣ ರಾವ್ ಸಗ್ರಿ, ಸಹಕರಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X