ಅಂಗವಿಕಲರ ಪುನರ್‌ವಸತಿ ಕೇಂದ್ರ ಸ್ಥಾಪನೆಗೆ ಅನುದಾನ ಬಿಡುಗಡೆಗೊಳಿಸಲು ಆಗ್ರಹ
ಉಡುಪಿ, ಜ. 7: ನಾಡಾ ಸೇನಾಪುರದಲ್ಲಿ ಕಾದಿರಿಸಿದ ಸರಕಾರಿ ಜಾಗದಲ್ಲಿ ಎಂಡೋಸಲ್ಫಾನ್ ಪೀಡಿತ ಅಂಗವಿಕಲರಿಗೆ ಪುನರ್ವಸತಿ ಕೇಂದ್ರ, ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಹಣ ಬಿಡುಗಡೆಗೊಳಿಸುವಂತೆ ಮನವಿ ಮಾಡಲು ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಿಯೋಗವು ಮುಖ್ಯಮಂತ್ರಿಯವರನ್ನು ಭೇಟಿಯಾಗುವ ಬಗ್ಗೆ ಬುಧವಾರ ಜರಗಿದ ಒಕ್ಕೂಟದ ಸಭೆಯಲ್ಲಿ ತೀರ್ಮಾನಿ ಸಲಾಯಿತು.
ಎಂಡೋ ಪೀಡಿತ ಅಂಗವಿಕಲರಿಗಾಗಿ ಸೇನಾಪುರದಲ್ಲಿ ಕಾದಿರಿಸಿದ ಐದು ಎಕರೆ ಸರಕಾರಿ ಜಾಗದಲ್ಲಿ ಸಮಾರು 10 ಕೋಟಿ ರೂ. ವೆಚ್ಚದಲ್ಲಿ ಎಂಡೋಸ ಲ್ಫಾನ್ ಪೀಡಿತ ಅಂಗವಿಕಲರಿಗೆ ಪುನರ್ವಸತಿ ಕೇಂದ್ರ ಮತ್ತು ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಿಂದ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಸಭೆಯಲ್ಲಿ ಅಂಗವಿಕಲರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಹೆಬ್ಬಾರ್ ಕಾಲ್ತೋಡು, ಗೌರವಾಧ್ಯಕ್ಷ ವೆಂಟೇಶ್ ಕೋಣಿ ಉಪಸ್ಥಿತರಿದ್ದರು.
Next Story





