ಕಡೆಕಾರ್ ಗ್ರಾಪಂನಲ್ಲಿ ಕಾಂಗ್ರೆಸ್ ವಿಜಯೋತ್ಸವ

ಉಡುಪಿ, ಜ.7: ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ನರ್ಪಾಡಿ, ಕಟ್ಟೆಗುಡ್ಡೆ, ಕುತ್ಪಾಡಿ, ಕಡೆಕಾರ್ ಕಾಂಗ್ರೆಸ್ ವಿಜಯೋತ್ಸವ ಮತ್ತು ಅಭಿನಂದನಾ ಸಭೆಯು ಇತ್ತೀಚೆಗೆ ಜರಗಿತು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಕಡೆಕಾರ್ ಗ್ರಾಮ ಪಂಚಾಯತನ್ನು ಮಾದರಿ ಪಂಚಾಯತ್ ಆಗಿ ಅಭಿವೃದ್ಧಿ ಪಡಿಸುವ ಮಹತ್ತರ ಜವಾಬ್ದಾರಿ ಚುನಾಯಿತ ಸದಸ್ಯರ ಮೇಲಿದೆ ಎಂದು ತಿಳಿಸಿದರು.
ಜಿಪಂ ಮಾಜಿ ಸದಸ್ಯ ದಿವಾಕರ್ ಕುಂದರ್ ಮಾತನಾಡಿ, ಚುನಾಯಿತ ಸದಸ್ಯರು ಕಡೆಕಾರ್ ಗ್ರಾಪಂನಲ್ಲಿ ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡುವ ಮೂಲಕ ಜನರ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ಬ್ರಹ್ಮಾವರ ಬ್ಲಾಕ್ ಅಧ್ಯಕ್ಷ ದಿನಕರ ಪೂಜಾರಿ ಹೇರೂರು, ಬ್ಲಾಕ್ ಪ್ರಚಾರ ಸಮಿತಿಯ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ, ವನಜಾ ಜಯಕರ್, ತಾರಾನಾಥ ಸುವರ್ಣ, ಸತೀಶ್ ಕೋಟ್ಯಾನ್, ನವೀನ್ ಶೆಟ್ಟಿ, ವೀಕ್ಷಕರಾದ ಸುಕೇಶ್ ಕುಂದರ್, ಚಂದ್ರಮೋಹನ್, ಆಕಾಶ್, ಎಸ್.ಸಿ. ಘಟಕದ ಬ್ಲಾಕ್ ಅಧ್ಯಕ್ಷ ಗಣೇಶ್ ನೆರ್ಗಿ, ನಗರಸಭಾ ಸದಸ್ಯ ರಮೇಶ್ ಕಾಂಚನ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಉಪಸ್ಥಿತರಿದ್ದರು. ಜತಿನ್ ಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು







